130ಕೋಟಿ ಜನರ ಪೌರತ್ವವನ್ನು ಉಳಿಸುವುದಕ್ಕಾಗಿ ಕಾಯ್ದೆ ಜಾರಿ : ಶಾಸಕ ಕೆ.ಜಿ.ಬೋಪಯ್ಯ ಸ್ಪಷ್ಟನೆ

Monday, January 13th, 2020
BJP-Meeting

ಮಡಿಕೇರಿ : ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಈ ದೇಶದಲ್ಲಿರುವ 130 ಕೋಟಿ ಜನತೆಯ ಪೌರತ್ವವನ್ನು ಉಳಿಸುವುದಕ್ಕಾಗಿ ಜಾರಿಗೆ ತರಲಾಗುತ್ತಿದೆಯೇ ಹೊರತು ಯಾವುದೇ ಧರ್ಮದವರ ಪೌರತ್ವವನ್ನು ಕಸಿದುಕೊಳ್ಳುವುದಕ್ಕಲ್ಲ ಎಂದು ಶಾಸಕ ಹಾಗೂ ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಸ್ಪಷ್ಟಪಡಿಸಿದ್ದಾರೆ. ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ನಗರದ ಬಾಲಭವನದಲ್ಲಿ ಶನಿವಾರ ಆಯೋಜಿಸಲಾಗಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಪ್ರಬುದ್ಧರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪೌರತ್ವ ಕಾಯ್ದೆ ಸಂವಿಧಾನದ ಆಶಯಗಳಿಗೆ ವಿರುದ್ಧವಾದುದು ಎಂದು ಕಾಂಗ್ರೆಸ್ ಹಾಗೂ ಎಡಪಕ್ಷಗಳು ಆರೋಪಿಸುತ್ತಿರುವ […]

ಪೌರತ್ವ ಕಾಯ್ದೆ ಬಗ್ಗೆ ಮುಸ್ಲಿಮರಿಗೆ ಆತಂಕ ಬೇಡ : ಶಾಸಕ ಕೆ.ಜಿ.ಬೋಪಯ್ಯ ಸ್ಪಷ್ಟನೆ

Monday, January 6th, 2020
bommayya

ಮಡಿಕೇರಿ : ಮುಸಲ್ಮಾನರು ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಯಾವುದೇ ಆತಂಕ ಮತ್ತು ಗೊಂದಲ ಪಡುವ ಅಗತ್ಯವಿಲ್ಲವೆಂದು ಶಾಸಕ ಕೆ.ಜಿ.ಬೋಪಯ್ಯ ಸ್ಪಷ್ಟಪಡಿಸಿದ್ದಾರೆ. ಮಡಿಕೇರಿ ನಗರ ಬಿಜೆಪಿ ಘಟಕದ ವತಿಯಿಂದ ಪೌರತ್ವ ಕಾಯ್ದೆ ಬೆಂಬಲಿಸಿ ಜಾಗೃತಿ ಅಭಿಯಾನಕ್ಕೆ ನಗರದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ವಿನಾಕಾರಣ ನಡೆಯುತ್ತಿರುವ ಅಪಪ್ರಚಾರಗಳಿಗೆ ಕಿವಿಗೊಡದೆ ಪೌರತ್ವ ತಿದ್ದುಪಡಿ ವಿಧೇಯಕದ ಬಗ್ಗೆ ಸಮಗ್ರ ಮಾಹಿತಿಯನ್ನು ಅರ್ಥ ಮಾಡಿಕೊಂಡಾಗ ಇದು ಮುಸ್ಲಿಂ ವಿರೋಧಿ ಅಲ್ಲ ಎನ್ನುವುದು ಸ್ಪಷ್ಟವಾಗುತ್ತದೆ ಎಂದು ಹೇಳಿದರು. ಅಪಪ್ರಚಾರ ಮಾಡುತ್ತಾ, ಕಾಯ್ದೆ ವಿರುದ್ದ […]

ಕಗ್ಗೋಡ್ಲು ಮತ್ತು ಹಾಕತ್ತೂರು ಗ್ರಾಮದಲ್ಲಿ 3.50 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ

Wednesday, January 1st, 2020
madikeri

ಮಡಿಕೇರಿ : ಮಡೀಕೇರಿ ತಾಲ್ಲೂಕಿನ ಹಾಕತ್ತೂರು ಗ್ರಾ.ಪಂ ವ್ಯಾಪ್ತಿಯ ಕಗ್ಗೋಡ್ಲು ಮತ್ತು ಹಾಕತ್ತೂರು ಗ್ರಾಮದಲ್ಲಿ ಸುಮಾರು ೩.೫೦ ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಜಿ.ಬೋಪಯ್ಯ ಅವರು ಚಾಲನೆ ನೀಡಿದರು. ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಅನುದಾನ 1.35 ಕೋಟಿ ರೂ., ಲೋಕೋಪಯೋಗಿ ಇಲಾಖೆಯ ೨ ಕೋಟಿ, ಹೀಗೆ ಒಟ್ಟು ಸುಮಾರು ೩.೫೦ ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದರು. ಇದೇ ಸಂದರ್ಭ 2018-19ರಲ್ಲಿ ಪೂರ್ಣಗೊಂಡ ವಿವಿಧ ಅಭಿವೃದ್ಧಿ ಯೋಜನೆಗಳನ್ನು […]

ಆರ್‌ಎಂಎಸ್‌ಎ ನೂತನ ಕಟ್ಟಡ ಹಾಗೂ ಎನ್‌ಎಸ್‌ಎಸ್ ಘಟಕ ಉದ್ಘಾಟನೆ

Friday, December 27th, 2019
NSS

ಮಡಿಕೇರಿ : ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ (ಆರ್‌ಎಂಎಸ್‌ಎ) ನೂತನ ಕಟ್ಟಡ ಹಾಗೂ ಸಭಾಂಗಣ ಉದ್ಘಾಟನೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್) ಘಟಕದ ಉದ್ಘಾಟನಾ ಸಮಾರಂಭವು ಗುರುವಾರ ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಶಾಸಕ ಕೆ.ಜಿ.ಬೋಪಯ್ಯ ಅವರು ಮಾತನಾಡಿ ವಿದ್ಯಾರ್ಥಿಗಳು ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು. ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್ ಅವರು ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ವಿದ್ಯಾರ್ಥಿಗಳು ಸೇವಾ ಮನೋಭಾವನೆ ಬೆಳೆಸಿಕೊಳ್ಳುತ್ತಾ ಸಮಾಜ […]