ಆರೋಗ್ಯ ಸಚಿವ ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡದಿರೋದು ಬೇಸರವಿದೆ : ಶಾಸಕ ಗಾಲಿ ಸೋಮಶೇಖರ್ ರೆಡ್ಡಿ
Monday, February 10th, 2020ಬಳ್ಳಾರಿ : ಆರೋಗ್ಯ ಸಚಿವ ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನ ನೀಡದೇ ಇರೋದು ಬೇಸರವಿದೆ. ಇದು ಕೇವಲ ನನ್ನ ಬೇಡಿಕೆ ಅಲ್ಲ, ಬದಲಿಗೆ ನಮ್ಮ ವಾಲ್ಮೀಕಿ ಸಮುದಾಯದ ಬೇಡಿಕೆ ಎಂದು ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ಕೊಡಬೇಕು ಎನ್ನುವ ಹೇಳಿಕೆ ನೀಡಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಡಿಸಿಎಂ ಸ್ಥಾನವನ್ನು ರಾಮುಲು ಅವರಿಗೆ ನೀಡಬೇಕು ಎಂದು ನಾನು ಒತ್ತಾಯ ಮಾಡುತ್ತೇನೆ […]