ಹಾಲಿಗೆ ಏಕಾಏಕಿ 2 ರೂ ಏರಿಸುವ ಮೂಲಕ ಕಾಂಗ್ರೆಸ್ ನಿರಂತರ ಜನರನ್ನು ದೋಚುತ್ತಿದೆ

Tuesday, June 25th, 2024
vedavyasa-Kamath

ಮಂಗಳೂರು ; ರಾಜ್ಯದಲ್ಲಿ ಅಗತ್ಯ ವಸ್ತುಗಳ ದರ ಏರಿಕೆಯ ಬಿಸಿಯಿಂದ ಜನಸಾಮಾನ್ಯರು ಕಂಗಾಲಾಗುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಮಾತ್ರ ತನ್ನ ಪಾಡಿಗೆ ತಾನು ಜನರನ್ನು ದೋಚುವುದರಲ್ಲಿ ನಿರತವಾಗಿದ್ದು ಅದರ ಮುಂದುವರಿದ ಭಾಗವಾಗಿ ಸರ್ಕಾರ ಈಗ ಹಾಲಿಗೆ ಏಕಾಏಕಿ 2 ರೂ ಏರಿಸಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಆಕ್ರೋಶ ವ್ಯಕ್ತಪಡಿಸಿದರು. ಕಣ್ಣಿಗೆ ಕಂಡದ್ದೆಲ್ಲದರ ಬೆಲೆ ಏರಿಸುವುದರಲ್ಲಿ ಹಠಕ್ಕೆ ಬಿದ್ದಿರುವಂತೆ ವರ್ತಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅತ್ತ ರೈತರ ಬದುಕಿಗೂ ಉಪಕಾರಿಯಾಗಿಲ್ಲ, ಬಡವರ ಬದುಕಿಗೂ ನೆಮ್ಮದಿಯಿಲ್ಲ. ಒಂದೆಡೆ ಹಾಲು […]

ಭಾರತದ ಸನಾತನ ಪರಂಪರೆಯನ್ನು ಇಡೀ ವಿಶ್ವವೇ ಗೌರವಿಸುವ ದಿನವೇ ಅಂತಾರಾಷ್ಟ್ರೀಯ ಯೋಗ ದಿನ : ವೇದವ್ಯಾಸ ಕಾಮತ್

Friday, June 21st, 2024
yoga-day

ಮಂಗಳೂರು : ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪಿವಿಎಸ್ ಸರ್ಕಲ್ ಬಳಿಯ ವೈಶ್ಯ ಎಜುಕೇಶನ್ ಸೊಸೈಟಿ ಸಭಾಂಗಣದಲ್ಲಿ ನಡೆದ ಯೋಗಾಭ್ಯಾಸದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಭಾಗವಹಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಭಾರತದ ಸನಾತನ ಪರಂಪರೆಯನ್ನು ಇಡೀ ವಿಶ್ವವೇ ಗೌರವಿಸುವ ದಿನವೇ ಅಂತಾರಾಷ್ಟ್ರೀಯ ಯೋಗ ದಿನ. ಮನುಷ್ಯನ ದೇಹದ ಸಮತೋಲನಕ್ಕಾಗಿ ಯೋಗದ ಕೊಡುಗೆ ಅನನ್ಯವಾಗಿದ್ದು ದೇಹದ ಜೊತೆಗೆ ಮನಸ್ಸಿಗೂ ಅತ್ಯಂತ ಪರಿಣಾಮಕಾರಿಯಾಗಿದೆ. ಇಂತಹ ಯೋಗಾಭ್ಯಾಸವು […]

ಬಿಜೆಪಿಯ ಬೃಹತ್ ಹೋರಾಟದ ಫಲವಾಗಿ ಸಚಿವರ ರಾಜೀನಾಮೆ : ಶಾಸಕ ವೇದವ್ಯಾಸ ಕಾಮತ್

Thursday, June 6th, 2024
vedavyas-kamatha

ಮಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭದಿಂದಲೇ ಎಲ್ಲವನ್ನೂ ಮುಚ್ಚಿ ಹಾಕುವ ಸರ್ಕಾರದ ಪ್ರಯತ್ನಕ್ಕೆ ವಿರುದ್ಧವಾಗಿ ಬಿಜೆಪಿ ರಾಜ್ಯಾದ್ಯಂತ ನಡೆಸಿದ ಬೃಹತ್ ಹೋರಾಟದ ಫಲವಾಗಿ ಸಚಿವರು ರಾಜೀನಾಮೆ ನೀಡುವಂತಾಗಿದ್ದು ಕಾಂಗ್ರೆಸ್ಸಿನ ಭ್ರಷ್ಟಾಚಾರದ ದಾಹಕ್ಕೆ ತಾತ್ಕಾಲಿಕ ಕಡಿವಾಣ ಬಿದ್ದಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಹೇಳಿದರು. ನಾಡಿನ ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಿಡಲಾದ ಅನುದಾನವನ್ನು ಭ್ರಷ್ಟರು ತಿಂದು ತೇಗುತ್ತಿದ್ದರೂ ಸರ್ಕಾರ ಮಾತ್ರ ಕಣ್ಣು ಮುಚ್ಚಿ ಕುಳಿತಿದ್ದು, ಪ್ರಸ್ತುತ ರಾಜ್ಯದಲ್ಲಿ ಸರ್ಕಾರಕ್ಕೆ ನಿರ್ದಿಷ್ಟ […]

ಮುಖ್ಯಮಂತ್ರಿ ಗಳಿಂದ ಸೇವಾಂಜಲಿ ಆರೋಗ್ಯ ಕಾರ್ಡ್ ಬಿಡುಗಡೆ

Thursday, November 5th, 2020
Sevanjali Health Card

ಮಂಗಳೂರು :  ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಇದರ ನೂತನ ಕೊಡುಗೆ ಸೇವಾಂಜಲಿ ಆರೋಗ್ಯ ಕಾರ್ಡ್ ಅನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಮಂಗಳೂರಿನ ಓಶಿಯನ್ ಪರ್ಲ್ ಹೋಟೇಲಿನಲ್ಲಿ ಬಿಡುಗಡೆಗೊಳಿಸಿದರು. ಸೇವಾಂಜಲಿ ಟ್ರಸ್ಟ್ ಕಾರ್ಯಗಳು ಹೀಗೆ ನಿರಂತರವಾಗಿ ನಡೆದು ಸಮಾಜದ ದುರ್ಬಲ, ಅಶಕ್ತರಿಗೆ ಸಹಾಯವಾಗಲಿ, ಈ ಟ್ರಸ್ಟ್ ನಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಪ್ರಮುಖರಿಗೆ, ಕಾರ್ಯಕರ್ತರಿಗೆ ಶುಭವಾಗಲಿ ಎಂದು ಸಿಎಂ ಯಡಿಯೂರಪ್ಪ ಅವರು ಆರೋಗ್ಯ ಕಾರ್ಡ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, […]

ಅಂಗನವಾಡಿ ನೌಕರರ ಸಮಾವೇಶ, ಹಕ್ಕೊತ್ತಾಯ ಹಾಗೂ ನೆರವು ವಿತರಣಾ ಕಾರ್ಯಕ್ರಮ

Thursday, December 12th, 2019
anganavady

ಮಂಗಳೂರು : ದ.ಕ.ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಹಾಗೂ ದ.ಕ.ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಹಕಾರ ಸಂಘದ ಸಮಾಜ ಸೇವಾಂಜಲಿ ಟ್ರಸ್ಟ್ ಜಂಟಿ ಆಶ್ರಯದಲ್ಲಿ ಗುರುವಾರ ಕದ್ರೋಳಿ ಗೋಕರ್ಣನಾಥ ದೇವಳದಲ್ಲಿ ಆಯೋಜಿಸಲಾದ ಅಂಗನವಾಡಿ ನೌಕರರ ಸಮಾವೇಶ, ಹಕ್ಕೊತ್ತಾಯ ಹಾಗೂ ನೆರವು ವಿತರಣಾ ಕಾರ್ಯಕ್ರಮವನ್ನು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು. ಸರ್ಕಾರ ಯಾವುದೇ ಯೋಜನೆಗಳನ್ನು ಯಶಸ್ವಿಯಾಗಿ ಜನರ ಬಳಿಗೆ ತಲುಪಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಕಾರ್ಯ ಶ್ಲಾಘನೀಯವಾಗಿದ್ದು, ಅವರ ಸಮಸ್ಯೆ ನಿವಾರಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ […]

ಶಾಸಕ ವೇದವ್ಯಾಸ ಕಾಮತ್ ವಿನಂತಿ ಮೇರೆಗೆ ನಾಗಾಲ್ಯಾಂಡ್ ರಾಜ್ಯಪಾಲರಿಂದ ಕೊಡಗು ಜಿಲ್ಲೆಗೆ 5 ಲಕ್ಷ ರೂ. ದೇಣಿಗೆ

Wednesday, August 22nd, 2018
Vedavyas kamath

ಮಂಗಳೂರು : ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರ ವಿನಂತಿ ಮೇರೆಗೆ ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶ ರಾಜ್ಯಪಾಲ ಪಿ.ಬಿ.ಆಚಾರ್ಯ ಅವರು ಪ್ರವಾಹ ಪೀಡಿತ ಕೊಡಗು ಜಿಲ್ಲೆಗೆ 5 ಲಕ್ಷ ರೂ. ದೇಣಿಗೆಯನ್ನು ವೈಯ್ಯಕ್ತಿಕವಾಗಿ ನೀಡಿದ್ದಾರೆ. ಅಲ್ಲದೆ ಕೊಡಗು ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿರು ಹಾನಿಗೆ ಪರಿಹಾರವಾಗಿ ನಾಗಾಲ್ಯಾಂಡ್ ರಾಜ್ಯ ಸರಕಾರದ ವತಿಯಿಂದ 20 ಲಕ್ಷ ರೂಪಾಯಿಯನ್ನು ಶಾಸಕರ ಮನವಿಯಂತೆ ಬಿಡುಗಡೆ ಮಾಡಲಾಗಿದೆ. ಕರ್ನಾಟಕದ ನೆರೆ ರಾಜ್ಯ ಕೇರಳಕ್ಕೂಶಾಸಕ ವೇದವ್ಯಾಸ ಕಾಮತ್ ಅವರ ವಿನಂತಿಯ ಮೇರೆಗೆ […]

ತ್ಯಾಜ್ಯ ಸಂಗ್ರಹ ಗುತ್ತಿಗೆದಾರರು ಮುಷ್ಕರಕ್ಕೆ ಇಳಿಯದಂತೆ ಶಾಸಕ ವೇದವ್ಯಾಸ ಕಾಮತ್ ಖಡಕ್ ಸೂಚನೆ

Saturday, June 16th, 2018
Vedavyasa

ಮಂಗಳೂರು : ಮಹಾನಗರ ಪಾಲಿಕೆಯ ವ್ಯಾಪ್ತಿಯ ತ್ಯಾಜ್ಯ ಸಂಗ್ರಹದ ಗುತ್ತಿಗೆದಾರರು ಯಾವುದೇ ಕಾರಣಕ್ಕೂ ಮುಷ್ಕರ ಹೂಡಬಾರದು, ಯಾವ ಸಮಸ್ಯೆ ಇದ್ದರೂ ಮೊದಲು ತಮ್ಮ ಗಮನಕ್ಕೆ ತರಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ. ತ್ಯಾಜ್ಯ ವಿಲೇವಾರಿಯ ಗುತ್ತಿಗೆ ವಹಿಸಿಕೊಂಡಿರುವ ಆಂಟೋನಿ ವೇಸ್ಟ್ ಮ್ಯಾನೇಜ್ ಮೆಂಟಿನ ಗುತ್ತಿಗೆದಾರರು ಮತ್ತು ಸಿಬ್ಬಂದಿಗಳು ಏಕಾಏಕಿ ಮುಷ್ಕರ ಹೂಡುವುದರಿಂದ ಮಂಗಳೂರಿನ ಜನರಿಗೆ ತುಂಬಾ ತೊಂದರೆಯಾಗುತ್ತದೆ. ಗುತ್ತಿಗೆದಾರರ ಮತ್ತು ಪಾಲಿಕೆಯ ನಡುವೆ ಸಂವಹನ ಕೊರತೆಯಿಂದ ಗುತ್ತಿಗೆದಾರರ ಸಿಬ್ಬಂದಿಗಳು ಕೆಲಸದ […]

ಹಾರ ತುರಾಯಿಗಳ ಸನ್ಮಾನ ಸಾರ್ಥಕತೆಯನ್ನು ಪಡೆಯುವುದು ಕಡಿಮೆ : ಶಾಸಕ ವೇದವ್ಯಾಸ ಕಾಮತ್

Tuesday, June 12th, 2018
chetana-school

ಮಂಗಳೂರು : ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಮತ್ತು ಭುವನೇಂದ್ರ ಸ್ವಾಮಿ ವಿವಿದ್ದೋದ್ದೇಶ ಸೌಹಾರ್ದ ಸಹಕಾರಿ ಬ್ಯಾಂಕ್ ಜಂಟಿಯಾಗಿ ಮಂಗಳೂರು ನಗರ ದಕ್ಷಿಣದ ನೂತನ ಶಾಸಕರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಸೋಮವಾರ ಬೆಳಿಗ್ಗೆ ಹಮ್ಮಿಕೊಂಡಿತ್ತು. ಮಂಗಳೂರಿನ ವಿಠೋಭ ದೇವಸ್ಥಾನ ರಸ್ತೆಯಲ್ಲಿರುವ ಚೇತನಾ ವಿಶೇಷ ಮಕ್ಕಳ ಶಾಲೆಯಲ್ಲಿ ಏರ್ಪಡಿಸಿದ್ದ ಈ ಕಾರ್ಯಕ್ರಮವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸುವ ಮೂಲಕ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ನ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಮಾಜಕ್ಕೆ ಮೇಲ್ಪಂಕ್ತಿಯನ್ನು ಹಾಕಿಕೊಟ್ಟಿದ್ದಾರೆ. ಸಾಮಾನ್ಯವಾಗಿ ಯಾವುದೇ ಸನ್ಮಾನ ಕಾರ್ಯಕ್ರಮ ಹಾರ ತುರಾಯಿಗಳ ಅಬ್ಬರದಲ್ಲಿಯೇ […]