ಶಿಕ್ಷಕನ ಅವಮಾನ ತಾಳಲಾರದೆ ಇಲಿ ಪಾಷಾಣ ಸೇವಿಸಿದ್ದ ವಿದ್ಯಾರ್ಥಿನಿ ಮೃತ್ಯು
Tuesday, February 13th, 2024ಬೆಳ್ತಂಗಡಿ : ಶಿಕ್ಷಕ ಕಳುಹಿಸಿದ ಮೊಬೈಲ್ ಸಂದೇಶದಿಂದ ಅವಮಾನಗೊಂಡು ವಿಷ (ಇಲಿ ಪಾಷಾಣ) ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸ್ಎಸ್ಎಲ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಧರ್ಮಸ್ಥಳದ ಪಿಜತ್ತಡ್ಕದ ಕಿಶೋರ್-ಸೌಮ್ಯಾ ದಂಪತಿ ಪುತ್ರಿ ತ್ರಿಶಾ(16) ಮೃತ ವಿದ್ಯಾರ್ಥಿನಿ. ಫೆ.7ರಂದು ವಿಷ ಸೇವಿಸಿದ್ದ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ. ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ […]