ಶಿಕ್ಷಕರು ತಮ್ಮ ಜ್ಞಾನ ಧಾರೆ ಎರೆಯಬೇಕು :- ಮಮತಾ ಗಟ್ಟಿ

Tuesday, September 10th, 2024
Mamatha-gatty

ಮಂಗಳೂರು : ಸಾಕ್ಷರರು ತಮ್ಮಲ್ಲಿರುವ ಜ್ಞಾನವನ್ನು, ವಿದ್ಯೆಯನ್ನು ಅನಕ್ಷರಸ್ಥರಿಗೆ ನೀಡಿದಾಗ, ಧಾರೆ ಎರೆದಾಗ ಜಿಲ್ಲೆಯೂ ಸಂಪೂರ್ಣ ಸಾಕ್ಷರತಾ ಜಿಲ್ಲೆಯಾಗಿ ರೂಪುಗೊಳ್ಳಲು ಸಾಧ್ಯ ಎಂದು ಗೇರು ನಿಗಮದ ಅಧ್ಯಕ್ಷೆ ಮಮತ ಗಟ್ಟಿ ಹೇಳಿದರು. ಮಂಗಳವಾರ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಲೋಕ ಶಿಕ್ಷಣ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾ ಪಂಚಾಯತ್, ಜಿಲ್ಲಾ ಸಾಕ್ಷರತಾ ಸಮಿತಿ, ತಾಲೂಕು ಪಂಚಾಯತ್ ಬಂಟ್ವಾಳ ಹಾಗೂ ಜನ ಶಿಕ್ಷಣ ಟ್ರಸ್ಟ್ ನವ ಸಾಕ್ಷರರ ಗ್ರಾಮ ವಿಕಾಸ ಕೇಂದ್ರಗಳು ಸಹಭಾಗಿತ್ವದಲ್ಲಿ […]

ಭಂಡಾರಿ ಫೌಂಡೇಶನ್ ವತಿಯಿಂದ “ಗುರುವಂದನೆ”

Thursday, September 5th, 2024
Bhandary-Foundation

ಮಂಗಳೂರು: “ಶಿಕ್ಷಕರು ಸಮಾಜದಲ್ಲಿ ನಂಬಿಕೆ ಮತ್ತು ಅತ್ಯಂತ ಹೆಚ್ಚು ಗೌರವದ ಸ್ಥಾನಮಾನಕ್ಕೆ ಅರ್ಹರಾಗಿದವರು. ಆ ಸ್ಥಾನಮಾನ ಮುಂದೆಯೂ ಉಳಿಯುವಂತಾಗಲಿ“ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಅವರು ಗುರುವಾರ ಸಂಜೆ ಅಡ್ಯಾರ್ ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ಭಂಡಾರಿ ಫೌಂಡೇಶನ್ ವತಿಯಿಂದ ಜರುಗಿದ ಶಿಕ್ಷಕರ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. “ಶಿಕ್ಷಕ ವೃತ್ತಿ ಎನ್ನುವುದು ಸನ್ಯಾಸತ್ವ ಸ್ವೀಕಾರ ಮಾಡಿದಂತೆ. ಒಬ್ಬ ಸ್ಫೂರ್ತಿ ತುಂಬುವ ಶಿಕ್ಷಕನ ಮೂಲಕ ಆ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ದೇಶದಲ್ಲಿ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಭಗೊಂಡ 1ರಿಂದ 5ನೇ ತರಗತಿ ಪ್ರಾಥಮಿಕ ತರಗತಿಗಳು

Monday, October 25th, 2021
School Reopen

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು ಒಂದೂವರೆ ವರ್ಷ ಮುಚ್ಚಿದ್ದ ಶಾಲೆಗಳು ಮತ್ತೆ ಆರಂಭಗೊಂಡಿದೆ.  1ರಿಂದ 5ನೇ ತರಗತಿ ಮಕ್ಕಳು ಮತ್ತೆ ಶಾಲೆಯತ್ತ ಹೆಜ್ಜೆ ಹಾಕಿದ್ದಾರೆ. ಸೋಮವಾರ ಕಿರಿಯ ಪ್ರಾಥಮಿಕ ಶಾಲೆಗಳು ಪುನಾರಂಭ ಗೊಂಡಿದೆ. ಜಿಲ್ಲೆಯಲ್ಲಿ 1ರಿಂದ 5ನೇ ತರಗತಿ‌ ವರೆಗಿನ 1,57,563 ಮಕ್ಕಳಿದ್ದು, ಮೊದಲ ದಿನ ಶಾಲೆಗೆ ಆಗಮಿಸಿದ್ದಾರೆ. ಹಾಜರಾತಿ ಕಡ್ಡಾಯ ಇಲ್ಲದಿದ್ದರೂ ಮಕ್ಕಳು ಉತ್ಸುಕರಾಗಿಯೇ ತರಗತಿಗಳಿಗೆ ಹಾಜರಾದರು. ಶನಿವಾರವೇ ಶಾಲಾ ಕೊಠಡಿಗಳು ಆವರಣವನ್ನು ಸ್ಯಾನಿಟೈಸ್ ಮಾಡಿ ಇಡಲಾಗಿತ್ತು. ಸೋಮವಾರ ಮುಂಜಾನೆ ಎಂದಿಗಿಂತ ಬೇಗ ಆಗಮಿಸಿದ ಶಿಕ್ಷಕರು […]

ಮಕ್ಕಳ ವ್ಯಕ್ತಿತ್ವ ವಿಕಸನ ಮಾಡುವ ಗುರುಗಳೇ ಶಿಕ್ಷಕರು: ಸಚಿವ ಡಾ.ಕೆ.ಸುಧಾಕರ್

Monday, September 6th, 2021
Teachers Day

  ಚಿಕ್ಕಬಳ್ಳಾಪುರ :  ಮಕ್ಕಳ ವ್ಯಕ್ತಿತ್ವ ವಿಕಸನ ಮಾಡುವ ಗುರುಗಳಾಗಿ ಶಿಕ್ಷಕರು ಕಾರ್ಯನಿರ್ವಹಿಸಬೇಕು. ಶಿಕ್ಷಕ ವೃತ್ತಿಯು ಕೇವಲ ವೇತನಕ್ಕೆ ಕೆಲಸ ಮಾಡುವ ಉದ್ಯೋಗವಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಜಿಲ್ಲಾಡಳಿತದಿಂದ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದ ಸಚಿವರು, ಪೊಲೀಸರು, ವೈದ್ಯರ ಕೆಲಸ ವೇತನಕ್ಕಾಗಿ ಮಾಡುವುದಲ್ಲ. ಅದೇ ರೀತಿ ಶಿಕ್ಷಕ ವೃತ್ತಿ ಕೂಡ ಒಂದು ಸೇವೆ. ಶಿಕ್ಷಕರು ಸುಮಾರು 30-35 ವರ್ಷಗಳ ವೃತ್ತಿ ಬದುಕಿನಲ್ಲಿ ಸಾವಿರಾರು ವಿದ್ಯಾರ್ಥಿಗಳನ್ನು ನೋಡುತ್ತಾರೆ. ಆ ವಿದ್ಯಾರ್ಥಿಗಳಲ್ಲಿ ಅನೇಕರು […]

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಎಲ್ಲ ಸಿದ್ಧತೆ: ಸಚಿವ ಸುರೇಶ್ ಕುಮಾರ್

Wednesday, July 7th, 2021
Suresh Kumar

ಬೆಂಗಳೂರು: ಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಎಲ್ಲ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ಲಸಿಕೆ ಪಡೆಯುವುದರೊಂದಿಗೆ ಪರೀಕ್ಷೆ ಸುರಕ್ಷಿತ ವಾತಾವರಣದಲ್ಲಿ ಅಚ್ಚುಕಟ್ಟಾಗಿ ನಡೆಯಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಈ ಕುರಿತಂತೆ ಮಕ್ಕಳು ಮತ್ತು ಪೋಷಕರಲ್ಲಿ ಆತ್ಮ ವಿಶ್ವಾಸ ಮೂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಮಂಗಳವಾರ ಜಿಲ್ಲಾ ಶೈಕ್ಷಣಿಕ ಉಪನಿರ್ದೇಶಕರು ಮತ್ತು ಬಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ಧತೆ ಕುರಿತು ಪರಿಶೀಲನೆ ನಡೆಸಿ ಮಾರ್ಗದರ್ಶನ […]

ನಮ್ಮ ಶಿಕ್ಷಕರು ನಮ್ಮ ಹೀರೋಗಳು : ಪ್ರಧಾನಿ ನರೇಂದ್ರ ಮೋದಿ

Saturday, September 5th, 2020
Narendra Modi

ನವದೆಹಲಿ: ನಮ್ಮ ಶಿಕ್ಷಕರು ನಮ್ಮ ಹೀರೋಗಳು ದೇಶವನ್ನು ಕಟ್ಟುವಲ್ಲಿ ಶಿಕ್ಷಕರ ಪರಿಶ್ರಮಕ್ಕೆ ನಾವು ಅತ್ಯಂತ ಕೃತಜ್ಞರಾಗಿರುತ್ತೇವೆ. ಶಿಕ್ಷಕರ ದಿನದಂದು, ಶಿಕ್ಷಕರ ಪರಿಶ್ರಮಕ್ಕೆ ಕೃತಜ್ಞತೆಯನ್ನು ಅರ್ಪಿಸುತ್ತೇನೆ ಎಂದು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ವಿದ್ವಾಂಸ, ತತ್ವಜ್ಞಾನಿ ಭಾರತದ 2ನೇ ರಾಷ್ಟ್ರಪತಿ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ ಹಾಗೂ ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುಸಮಸ್ತರಿಗೆ ಶನಿವಾರ ಶುಭಾಶಯಗಳನ್ನು ಕೋರಿದ್ದಾರೆ. ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, […]

ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಹೆಚ್ಚಳಕ್ಕೆ ಪೋಷಕರು ,ಶಿಕ್ಷಕರು ಸಹಕರಿಸಬೇಕು-ಎ.ಬಿ.ಇಬ್ರಾಹಿಂ

Thursday, February 6th, 2014
dc Ibrahim

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆ ಅತ್ಯಂತ ಹೆಚ್ಚು ಸುಶಿಕ್ಷಿತರನ್ನು ಹೊಂದಿರುವ ಜಿಲ್ಲೆಯಾಗಿದ್ದರೂ ಸಹ 2-3 ವರ್ಷಗಳಿಂದ ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಮಾಣ ಅತ್ಯಂತ ಕಳವಳಕಾರಿಯಾಗಿದ್ದು ಫಲಿತಾಂಶ ಪ್ರಮಾಣ ಸುಧಾರಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಪೋಷಕರು/ಶಿಕ್ಷಕರು ಸಹಕರಿಸುವಂತೆ ಎ.ಬಿ.ಇಬ್ರಾಹಿಂ ಅವರು ತಿಳಿಸಿದ್ದಾರೆ. ಅವರು ಮಂಗಳವಾರ ತಮ್ಮ ಕಚೇರಿಯಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲೆ ಸಾಕ್ಷರತೆಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ.ನೈರ್ಮಲ್ಯದಲ್ಲಿ ರಾಜ್ಯದಲ್ಲಿ ಮೊದಲ ಸ್ಥಾನ ಹಾಗೂ ರಾಷ್ಟ್ರ ಮಟ್ಟದಲ್ಲಿ […]