ಮಂಗಳೂರು ವಿ.ವಿಯಲ್ಲಿ ಶಿಕ್ಷಕರ ದಿನಾಚರಣೆ

Thursday, September 5th, 2024
Teachers-day

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಯು.ಆರ್ ರಾವ್ ಸಭಾಂಗಣದಲ್ಲಿ ಶಿಕ್ಷಕ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕುಲಸಚಿವ ರಾಜು ಕೆ. ಮೊಗವೀರ, ವಿಶ್ವದ ಯಾವುದೇ ವಿಶ್ವ ವಿದ್ಯಾಲಯಗಳ ನಿಜವಾದ ನಿರ್ಮಾತೃರು ಅಲ್ಲಿನ ಶಿಕ್ಷಕರು. ಪ್ರಸಕ್ತ ಶಿಕ್ಷಣವು, ವಿದ್ಯಾರ್ಥಿಗಳಲ್ಲಿ ತಮ್ಮ ಪ್ರಶ್ನೆಗಳಿಗೆ ಕಲ್ಪನೆಗೂ ಮೀರಿದ ಉತ್ತರಗಳನ್ನು ಕಂಡುಕೊಳ್ಳಲು ಹೊಸ ಸಾಧ್ಯತೆಗಳನ್ನು ತರೆದಿಡುವ ಮೂಲಕ ವ್ಯಕ್ತಿತ್ವ ವಿಕಾಸದೆಡೆಗೆ ಗಮನಹರಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ, ಪಿ.ಎಲ್ ಧರ್ಮ ಅವರು ತಮ್ಮ ವಿದ್ಯಾರ್ಥಿ ಜೀವನ ಮತ್ತು ವಿವಿ ಯಲ್ಲಿನ […]

ವಿದ್ಯಾರ್ಥಿಗಳನ್ನು ಸಮಾಜದಲ್ಲಿ ಸತ್ಪ್ರಜೆಗಳನ್ನಾಗಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿರುತ್ತದೆ : ಯು ಟಿ ಖಾದರ್

Thursday, September 5th, 2019
UT-Kadar

ಮಂಗಳೂರು : ವಿದ್ಯಾರ್ಥಿಗಳನ್ನು ಸಮಾಜದಲ್ಲಿ ಸತ್ಪ್ರಜೆಗಳನ್ನಾಗಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದ್ದು, ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನ ಶಿಕ್ಷಕರಿಗೆ ವಿಶೇಷ ಸ್ಥಾನವಿದೆ ಎಂದು ಮಾಜಿ ಸಚಿವ ಯು ಟಿ ಖಾದರ್ ಹೇಳಿದರು. ದ.ಕ.ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮಂಗಳೂರು ದಕ್ಷಿಣ ವಲಯ, ದ.ಕ. ಸಾರ್ವಜನಿಕ ಶಿಕ್ಷಣ ಇಲಾಖೆ, ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ ಜಿಲ್ಲಾ ಮಟ್ಟದ ಮತ್ತು ಮಂಗಳೂರು ದಕ್ಷಿಣ ವಲಯ ಮಟ್ಟದ ಶಿಕ್ಷಕ ದಿನಾಚರಣೆಯನ್ನು ನಗರದ ಪುರಭವನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಅವರು […]

ಮಂಗಳೂರು ಪುರಭವನದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮ ದಿನೋತ್ಸವ ಹಾಗೂ ಶಿಕ್ಷಕ ದಿನಾಚರಣೆ

Friday, September 6th, 2013
town-hall

ಮಂಗಳೂರು :  ಶಿಕ್ಷಕರಿಲ್ಲದ್ದಿದ್ದರೆ ನಾವಿಲ್ಲ.ಶಿಕ್ಷಣವೇ ನಮ್ಮ ಯಶಸ್ಸು ಗಳಿಸುವ ಸಾಧನ. ಶಿಕ್ಷಣ ಕ್ಷೇತ್ರ ಅತ್ಯಂತ ಪವಿತ್ರ ಹಾಗೂ ಜವಾಬ್ದಾರಿಯುತ ಕ್ಷೇತ್ರವಾಗಿದೆ. ನಮ್ಮ ಜ್ಞಾನವನ್ನು ಬೆಳಗಿಸಲು ಹಾಗೂ ಜೀವನ ರೂಪಿಸಲು ಶಿಕ್ಷಕರು ಶ್ರಮಿಸುತ್ತಿದ್ದಾರೆ. ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮ ದಿನೋತ್ಸವ ಹಾಗೂ ಶಿಕ್ಷಕ ದಿನಾಚರಣೆಯನ್ನು  ಆಚರಿಸುವುದು ಶ್ಲಾಘನೀಯ ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಜೆ.ಆರ್.ಲೋಬೋ ಅಭಿಪ್ರಾಯಪಟ್ಟರು. ಇಂದು ಕರ್ನಾಟಕ ಸರ್ಕಾರದ ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ಉತ್ತರವಲಯ ಶಿಕ್ಷಕ ದಿನಾಚರಣೆ […]

ಜಿಲ್ಲಾ ಮಟ್ಟದ ಶಿಕ್ಷಕ ದಿನಾಚರಣೆ ಹಾಗೂ ಗುರುವಂದನಾ ಸಮಾರಂಭ : ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು

Friday, September 6th, 2013
bantwal-rai

ಮಂಗಳೂರು : ಸಂಪೂರ್ಣ ಸಾಕ್ಷರ ಜಿಲ್ಲೆ; ಬುದ್ದಿವಂತರ ಜಿಲ್ಲೆ ಎಂದು ದಕ್ಷಿಣ ಕನ್ನಡ ಜಿಲ್ಲೆ ಹೆಸರಾಗಿದ್ದು ಇದರಲ್ಲಿ ಶಿಕ್ಷಕರ ಕೊಡುಗೆ ಅಪಾರ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರೂ ಆಗಿರುವ ಶ್ರೀ ಬಿ. ರಮಾನಾಥ ರೈ ಅವರು ಹೇಳಿದರು. ಅವರಿಂದು ಜಿಲ್ಲಾ ಮಟ್ಟದ ಶಿಕ್ಷಕ ದಿನಾಚರಣೆ ಹಾಗೂ ಗುರುವಂದನಾ ಸಮಾರಂಭವನ್ನು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪ ಸಭಾಂಗಣ, ಬಂಟ್ವಾಳದಲ್ಲಿ ಉದ್ಘಾಟಿಸಿ ಮಾತನಾಡುತ್ತಿದ್ದರು. ಶಿಕ್ಷಕರು ಸಮಾಜಕ್ಕೆ ಮಾದರಿಯಾಗಿರಬೇಕು. ಆರೋಗ್ಯವಂತ […]

ಸಮತಾದಲ್ಲಿ ಶ್ರೀಕೃಷ್ಣ ಜನ್ಮೋತ್ಸವ ಮತ್ತು ಶಿಕ್ಷಕ ದಿನಾಚರಣೆ.

Tuesday, September 21st, 2010
 ಸಮತಾದಲ್ಲಿ ಶ್ರೀಕೃಷ್ಣ ಜನ್ಮೋತ್ಸವ ಮತ್ತು ಶಿಕ್ಷಕ ದಿನಾಚರಣೆ.

ಮಂಗಳೂರು: ವಿಂಶತಿ ವರ್ಷಾಚರಣೆಯಲ್ಲಿರುವ ಸಮತಾ ಮಹಿಳಾ ಬಳಗದ ಸೆಪ್ಟೆಂಬರ್ ತಿಂಗಳ ಕಾರ್ಯಕ್ರಮವು ಶನಿವಾರ ಶ್ರೀ ಸುಬ್ರಹ್ಮಣ್ಯ ಸಭಾ ಸದನದಲ್ಲಿ ನೆರವೇರಿತು. ಕಲಾನಿಕೇತನದ ಸಂಗೀತ ಮತ್ತು ವೀಣಾ ಶಿಕ್ಷಕಿ ಶ್ರೀಮತಿ ಸಾವಿತ್ರಿ ರಾಮ್ ರಾವ್ ಮುಖ್ಯ ಅತಿಥಿಯಾಗಿದ್ದರು. ಸಮತಾದ ಸದಸ್ಯೆಯರ 12 ವರ್ಷದೊಳಗಿನ ಮಕ್ಕಳಿಗೆ ಮತ್ತು ಮೊಮ್ಮಕ್ಕಳಿಗೆ ಧಾರ್ಮಿಕ  ಚೌಕ್ಕಟ್ಟಿನೊಳಗೆ ಛದ್ಮವೇಷ ಸ್ಪರ್ಧೆ ನಡೆಯಿತು. ಭಾಗವಹಿಸಿದ ಪುಟಾಣಿಗಳಿಗೆ ನಗದು ಬಹುಮಾನ ಮತ್ತು ಸ್ಮರಣಿಕೆಗಳನ್ನು ನೀಡಲಾಯಿತು. ಆರ್ಥಿಕವಾಗಿ ತೊಂದರೆಗೀಡಾಗಿರುವ ರವೀಂದ್ರ ಎಂಬ ವಿದ್ಯಾರ್ಥಿಗೆ ಧನಸಹಾಯ ನೀಡಲಾಯಿತು. ಬಳಿಕ ಶಿಕ್ಷಕಿ ಸಾವಿತ್ರಿ […]

ದ.ಕ. ಜಿ. ಪಂ. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಶಿಕ್ಷಕ ದಿನಾಚರಣೆ

Monday, September 6th, 2010
ದ.ಕ. ಜಿ. ಪಂ. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಶಿಕ್ಷಕ ದಿನಾಚರಣೆ

ಮಂಗಳೂರು: ದ.ಕ. ಜಿ. ಪಂ. ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಟ್ಟದ ನಗರ ವಲಯ ಶಿಕ್ಷಕ ದಿನಾಚರಣೆ ಸಮಿತಿ ವತಿಯಿಂದ ಬಾನುವಾರ ಶಿಕ್ಷಕ ದಿನಾಚರಣೆಯನ್ನು ಜಿಲ್ಲಾ ಪಂಚಾಯತ್ ಮಂಗಳೂರು ಇಲ್ಲಿ ಕರಾವಳಿ ಅಭಿವೃದ್ಧಿ ಪ್ರಾದಿಕಾರದ ಅಧ್ಯಕ್ಷ ಬಿ. ನಾಗರಾಜ ಶೆಟ್ಟಿ ಉದ್ಘಾಟಿಸಿದರು. ವಿದ್ಯಾಥರ್ಿಗಳ ಮೇಲೆ ಸಮಾನ ಮನೋಭಾವ ಹೊಂದುವ ಮೂಲಕ ಶಿಕ್ಷಕರು ಸಮಾಜದಲ್ಲಿ ಶ್ರೇಷ್ಠತೆ ಪಡೆಯಬೇಕು ಎಂದು  ಉದ್ಘಾಟನೆ ನಡೆಸಿದ ಬಳಿಕ ಬಿ. ನಾಗರಾಜ ಶೆಟ್ಟಿ ಹೇಳಿದರು. ಪ್ರಾಥಮಿಕ ವಿಭಾಗದ ಏಳು ಮಂದಿ ಶಿಕ್ಷಕಗೆ ಹಾಗೂ ಪ್ರೌಢ […]