ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಅಹ್ವಾನ

Friday, October 6th, 2023
Rajyotsava 2023

ಮಂಗಳೂರು : 2023-24ನೇ ಸಾಲಿನ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಹಿತ್ಯ, ಶಿಕ್ಷಣ, ಸಂಗೀತ, ನೃತ್ಯ, ಕ್ರೀಡೆ, ಕೃಷಿ, ಲಲಿತ ಕಲೆಗಳು ಸಮಾಜ ಸೇವೆ, ಜನಪದ, ಪರಿಸರ-ವಿಜ್ಞಾನ, ವೈದ್ಯಕೀಯ ಸಂಶೋಧನೆ, ಪತ್ರಿಕೋದ್ಯಮ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರು ತಮ್ಮ ಸೇವೆ ಅಥವಾ ಸಾಧನೆಯ ಕ್ಷೇತ್ರ ಹಾಗೂ ಸಂಕ್ಷಿಪ್ತ ದಾಖಲೆ ವಿವರಣೆಗಳೊಂದಿಗೆ ಇದೇ ಅ.25ರಂದು ಸಂಜೆ 5 ಗಂಟೆಯೊಳಗೆ ಜಿಲ್ಲಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಸ್ಲಿಂ ಮೂಲಭೂತವಾದಿ ಸಂಘಟನೆಗಳ ವಾದದಿಂದ ಮುಸ್ಲಿಂ ಹೆಣ್ಣುಮಕ್ಕಳು ಶಿಕ್ಷಣ ವಂಚಿತರಾಗುತ್ತಿದ್ದಾರೆ : ಬೃಂದಾ ಕಾರಟ್

Monday, March 21st, 2022
brinda karat

ಮಂಗಳೂರು:  ಮುಸ್ಲಿಂ ಮೂಲಭೂತವಾದಿ ಸಂಘಟನೆಗಳಾದ ಪಿಎಫ್ಐ, ಎಸ್ ಡಿಪಿಐ ಮೊದಲಾವುಗಳು ಹಿಜಾಬ್ ಕುರಿತ ತೀರ್ಪಿನ ವಿಚಾರಗಳನ್ನು ವಿರೋಧಿಸುವುದರೊಂದಿಗೆ ಹೆತ್ತವರು, ವಿದ್ಯಾರ್ಥಿನಿಯರಿಗೆ ಒತ್ತಡ ಹೇರುವ ಕೆಲಸ ಮಾಡುತ್ತಿದೆ. ಆ ಮೂಲಕ ಮೂಲಭೂತವಾದಿಗಳ ಪ್ರಮುಖ ಆಶಯವಾಗಿರುವ ಹೆಣ್ಣುಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿಸುವ ಕೆಲಸವೂ ನಡೆಯುತ್ತಿದೆ. ಹೆಣ್ಣು ಮಕ್ಕಳು ಹಿಜಾಬ್ ಧರಿಸಬೇಕೇ ಬೇಡವೇ ಎಂದು ಹೆತ್ತವರು ತೀರ್ಮಾನಿಸಲಿ ಎಂದು ಪಾಲಿಟ್ ಬ್ಯೂರೋ ಸದಸ್ಯೆ ಬೃಂದಾ ಕಾರಟ್ ಆರೋಪಿಸಿದ್ದಾರೆ. ಸಿಪಿಐಎಂ ವತಿಯಿಂದ ಸೋಮವಾರ ಮಂಗಳೂರಿನ ಪುರಭವನದಲ್ಲಿ ಜರುಗಿದ ಸೌಹಾರ್ದ ಸಮಾವೇಶದಲ್ಲಿ ಅವರು ಮಾತನಾಡಿದರು. ದೇಶಗಳಲ್ಲಿ ಸೌಹಾರ್ದ‌ತೆ ಕದಡುವಲ್ಲಿ, ಬಾಹ್ಯ ಶಕ್ತಿಗಳಿಗಿಂತ ಆಂತರಿಕ‌‌ […]

ಕೋವಿಡ್ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಶಿಕ್ಷಣದ ಜೊತೆಗೆ, 10 ಲಕ್ಷ ಹಣ

Saturday, May 29th, 2021
PMModi

ನವದೆಹಲಿ: ಮೋದಿ ಸರ್ಕಾರ ಕೋವಿಡ್-19 ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗಾಗಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಎರಡನೇ ವರ್ಷ ಪೂರ್ಣಗೊಳಿಸುತ್ತಿರುವ ನಡುವೆ ಮೇ.29 ರಂದು ಮಹತ್ವದ ಘೋಷಣೆ ಪ್ರಕಟಿಸಿದೆ. ಮಕ್ಕಳು 18 ವರ್ಷದವರಾಗುತ್ತಿದ್ದಂತೆಯೇ 10 ಲಕ್ಷ ಹಣ ದೊರೆಯಲಿದ್ದು ಶಿಕ್ಷಣವೂ ದೊರೆಯಲಿದೆ. ಕೋವಿಡ್-19 ನಿಂದ ಅನಾಥರಾದ ಮಕ್ಕಳಿಗಾಗಿ ಯೋಜನೆ ರೂಪಿಸುವ ಬಗ್ಗೆ ಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಮಕ್ಕಳಿಗಾಗಿ ಪಿಎಂ-ಕೇರ್ಸ್ ಯೋಜನೆಯಡಿ ನೆರವು ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಯೋಜನೆಯ ಬಗ್ಗೆ ಪ್ರಧಾನಿಗಳ ಕಚೇರಿ […]

ಶಿಕ್ಷಣ, ಸಂಘಟನೆ ಮತ್ತು ಹೋರಾಟ ಡಾ.ಅಂಬೇಡ್ಕರ್ ಶೋಷಿತರಿಗಾಗಿ ನೀಡಿದ 3 ಮಂತ್ರಗಳು

Wednesday, April 14th, 2021
yedyurappa

ಬೆಂಗಳೂರು : ಡಾ.ಬಿ.ಆರ್. ಅಂಬೇಡ್ಕರ್ ಅವರ ಸಾಧನೆ ನವ ಭಾರತ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಿದೆ. ಸಮಾನತೆಯ ಸಮಾಜಕ್ಕಾಗಿ ಶಿಕ್ಷಣ, ಸಂಘಟನೆ ಮತ್ತು ಹೋರಾಟದಂತ ಮೂರು ಮಂತ್ರಗಳನ್ನು ಅವರು ಶೋಷಿತರ ವರ್ಗಕ್ಕೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಇಂದು ಬೆಳಿಗ್ಗೆ ವಿಧಾನಸೌಧದ ಮುಂಭಾಗದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಬಳಿ ಸಮಾಜ ಕಲ್ಯಾಣ ಇಲಾಖೆವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ: ಬಿ.ಆರ್. ಅಂಬೇಡ್ಕರ್ ಅವರ 130ನೇ ಜನ್ಮ […]

ಶಿಕ್ಷಣದ ಜೊತೆ ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬೆಳೆಸಿ : ಶಾಸಕ ಅಬ್ಬಯ್ಯ ಪ್ರಸಾದ್

Saturday, September 5th, 2020
Teachers day

ಹುಬ್ಬಳ್ಳಿ : ಶಿಕ್ಷಕರು ದೇಶದ ನಿರ್ಮಾತೃಗಳು. ಪ್ರತಿಯೊಬ್ಬರ ಜೀವನವನ್ನು ರೂಪಿಸುವ ಶಿಕ್ಷಕ ವೃತ್ತಿಗೆ ಪ್ರಥಮ ಆದ್ಯತೆಯಿದೆ. ಇಂದಿನ ಮಕ್ಕಳಲ್ಲಿ ಪುಸ್ತಕ ಜ್ಞಾನ ಹೆಚ್ಚುತ್ತಿದೆ. ಆದರೆ ಉತ್ತಮ ಸಂಸ್ಕಾರ ಬೆಳವಣಿಗೆಯಾಗುತ್ತಿಲ್ಲ. ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ಉತ್ತಮ ಸಂಸ್ಕಾರವನ್ನು ಶಿಕ್ಷಕರು ಬೆಳಸಬೇಕು ಎಂದು ಶಾಸಕ ಅಬ್ಬಯ್ಯ ಪ್ರಸಾದ್ ಹೇಳಿದರು. ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದ ಸಂಯುಕ್ತ ಆಶ್ರಯದಲ್ಲಿ, ನಗರದ ಘಟಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ […]

ಸರ್ಕಾರದ ಆದೇಶ ಉಲ್ಲಂಘಿಸಿ ತರಗತಿ ನಡೆಸುತ್ತಿರುವ ಶಾಲೆಗಳಿಗೆ ಶಿಕ್ಷಣ ಸಚಿವರಿಂದ ಎಚ್ಚರಿಕೆ

Wednesday, March 11th, 2020
suresh

ಬೆಂಗಳೂರು : ಕೊರೊನಾ ವೈರಸ್ ಭೀತಿ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಶಾಲಾ ಮಕ್ಕಳಿಗೆ ಸರ್ಕಾರ ರಜೆ ಘೋಷಿಸಿದೆ. ಆದರೆ, ಸರ್ಕಾರದ ಆದೇಶ ಮೀರಿ ಕೆಲ ಶಾಲೆಗಳಲ್ಲಿ ತರಗತಿಗಳು ಮುಂದುವರೆದಿದ್ದು, ಅಂತಹವರಿಗೆ ಶಿಕ್ಷಣ ಸಚಿವರು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಕೊರೊನಾ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಪ್ರೀ ಎಲ್ಕೆಜಿಯಿಂದ ಐದನೇ ತರಗತಿವರೆಗಿನ ಮಕ್ಕಳಿಗೆ ರಜೆ ನೀಡಿ ಸರ್ಕಾರ ಆದೇಶಿಸಿದೆ. ಆದರೆ ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಕೆಲ ಖಾಸಗಿ ಶಾಲೆಗಳು ತರಗತಿಗಳನ್ನು ಮುಂದುವರೆಸಿವೆ. […]

ಧರ್ಮಸ್ಥಳವು ಒಂದು ಧಾರ್ಮಿಕ ಕ್ಷೇತ್ರವಲ್ಲದೆ ಶಿಕ್ಷಣ, ವೈದ್ಯಕೀಯ ಕ್ಷೇತ್ರದಲ್ಲೂ ಪ್ರಸಿದ್ಧವಾಗಿದೆ: ನಿರ್ಮಲಾ ಸೀತಾರಾಮನ್

Tuesday, October 30th, 2018
nirmala

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಭಾರತೀಯ ಜೀವ ವಿಮಾ ನಿಗಮದ ಸಹಯೋಗದೊಂದಿಗೆ ಗುಂಪು ವಿಮೆ ಪ್ರಗತಿ ರಕ್ಷಾ ಕವಚ ಯೋಜನೆಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ನಿನ್ನೆ ಸಂಜೆ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ನಿರ್ಮಲಾ ಸೀತಾರಾಮನ್, ಧರ್ಮಸ್ಥಳದ ಧರ್ಮಾಧಿಕಾರಿಯವರು ನ್ಯಾಯ ದೇವತೆ ಇದ್ದಂತೆ. ಧರ್ಮಸ್ಥಳವು ಒಂದು ಧಾರ್ಮಿಕ ಕ್ಷೇತ್ರವಾಗಿ ಮಾತ್ರ ಪ್ರಸಿದ್ಧವಲ್ಲ. ಶಿಕ್ಷಣ ಕ್ಷೇತ್ರ, ವೈದ್ಯಕೀಯ, ಗ್ರಾಮಾಭಿವೃದ್ಧಿಯ ಮೂಲಕವೂ ಧರ್ಮಸ್ಥಳ ಕ್ಷೇತ್ರ ತನ್ನದೇ ಆದ […]

ಮಂಗಳೂರು ಕಾರಾಗೃಹದಲ್ಲೂ ಮಕ್ಕಳಿಗೆ ಶಿಕ್ಷಣ..ಅಂಗನವಾಡಿ ಶಿಕ್ಷಕಿಯಿಂದ ಮಕ್ಕಳಿಗೆ ಪಾಠ!

Thursday, July 5th, 2018
education

ಮಂಗಳೂರು: ಯಾರೋ ಮಾಡಿದ ತಪ್ಪಿಗೆ ಇನ್ಯಾರೋ ಶಿಕ್ಷೆ ಅನುಭವಿಸುವ ಸ್ಥಿತಿ ಜೈಲಿನಲ್ಲಿರುವ ಪೋಷಕರ ಮಕ್ಕಳದ್ದು. ವಿವಿಧ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಬಂಧಿತರಾಗಿ ವಿಚಾರಣಾಧೀನ ಕೈದಿಗಳಾಗಿ ಬದುಕುತ್ತಿರುವ ಮಹಿಳಾ ಕೈದಿಗಳ ಮಕ್ಕಳಿಗೆ ಜೈಲಿನಲ್ಲಿ ಶಿಕ್ಷಣ ಎನ್ನುವುದು ಮರೀಚೀಕೆಯಾಗಿದೆ ಎನ್ನುವುದನ್ನು ಮನಗಂಡಿರುವ ಸುಪ್ರೀಂಕೋರ್ಟ್ ಜೈಲಿನಲ್ಲಿ ಪೋಷಕರ ಜೊತೆಗೆ ಇರುವ ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂದು ತಾಕೀತು ಮಾಡಿದೆ. ಇದರ ಪರಿಣಾಮವಾಗಿ ಈಗ ಮಂಗಳೂರು ಕಾರಾಗೃಹದಲ್ಲೂ ಮಕ್ಕಳಿಗೆ ಶಿಕ್ಷಣ ನೀಡುವ ಕೆಲಸ ಆರಂಭಗೊಂಡಿದೆ. ಕಾರಾಗೃಹದಲ್ಲಿರುವ ವಿಚಾರಣಾಧೀನ ಬಂದಿಗಳ ಮೂವರು ಮಕ್ಕಳಿಗೆ ಜುಲೈ 3 […]