ಕಾಸರಗೋಡಿನ ಕನ್ನಡ ಹೋರಾಟಗಾರ ಎಸ್. ವಿ ಭಟ್ ನಿಧನ

Sunday, September 10th, 2023
SV-Bhat

ಕಾಸರಗೋಡು : ಕಾಸರಗೋಡಿನಲ್ಲಿ ಕನ್ನಡಕ್ಕೆ ಶಕ್ತಿ ಮೀರಿ ದುಡಿಯುತ್ತಿದ್ದವರು. ಕನ್ನಡ ಶಾಲೆಗಳ ಉಳಿವಿಗೆ ಬಹಳ ಹೋರಾಟ ಮಾಡಿ ಕನ್ನಡದ ಅಸ್ಮಿತೆಗೆ ಶಕ್ತಿ ತುಂಬಿದ ವ್ಯಕ್ತಿ . ಎಸ್. ವಿ ಭಟ್ (72) ಅವರು ಹೃದಯಾಘಾತದಿಂದ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಬೀರಂತಬೈಲ್ ನಿವಾಸಿಯಾಗಿದ್ದ ಭಟ್ ರವರು ಕುಂಬಳೆ, ಅಡೂರು, ಕಾಸರಗೋಡು ಸೇರಿದಂತೆ ಜಿಲ್ಲೆಯ ಹಲವೆಡೆ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಅಧ್ಯಕ್ಷ ರಾಗಿ ಕನ್ನಡ ಹೋರಾಟಗಾರಾಗಿ, ಜಿಲ್ಲಾ […]

ಶಿಕ್ಷಣದ ಜೊತೆ ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬೆಳೆಸಿ : ಶಾಸಕ ಅಬ್ಬಯ್ಯ ಪ್ರಸಾದ್

Saturday, September 5th, 2020
Teachers day

ಹುಬ್ಬಳ್ಳಿ : ಶಿಕ್ಷಕರು ದೇಶದ ನಿರ್ಮಾತೃಗಳು. ಪ್ರತಿಯೊಬ್ಬರ ಜೀವನವನ್ನು ರೂಪಿಸುವ ಶಿಕ್ಷಕ ವೃತ್ತಿಗೆ ಪ್ರಥಮ ಆದ್ಯತೆಯಿದೆ. ಇಂದಿನ ಮಕ್ಕಳಲ್ಲಿ ಪುಸ್ತಕ ಜ್ಞಾನ ಹೆಚ್ಚುತ್ತಿದೆ. ಆದರೆ ಉತ್ತಮ ಸಂಸ್ಕಾರ ಬೆಳವಣಿಗೆಯಾಗುತ್ತಿಲ್ಲ. ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ಉತ್ತಮ ಸಂಸ್ಕಾರವನ್ನು ಶಿಕ್ಷಕರು ಬೆಳಸಬೇಕು ಎಂದು ಶಾಸಕ ಅಬ್ಬಯ್ಯ ಪ್ರಸಾದ್ ಹೇಳಿದರು. ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದ ಸಂಯುಕ್ತ ಆಶ್ರಯದಲ್ಲಿ, ನಗರದ ಘಟಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ […]

ಶಿಕ್ಷಣದೊಂದಿಗೆ ಉತ್ತಮ ಹವ್ಯಾಸ ರೂಢಿಸಿಕೊಳ್ಳಿ : ವಿದ್ಯಾರ್ಥಿಗಳಿಗೆ ಶಿಕ್ಷಣಾಧಿಕಾರಿ ಮಚ್ಚಾಡೋ ಕಿವಿಮಾತು

Tuesday, December 3rd, 2019
shikshana

ಮಡಿಕೇರಿ : ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಹವ್ಯಾಸವನ್ನು ರೂಢಿಸಿಕೊಂಡು ಸ್ವಾವಲಂಬಿಗಳಾಗಲು ಶ್ರಮವಹಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಪೆರಿಗ್ರೀನ್ ಮಚ್ಚಾಡೋ ಅವರು ತಿಳಿಸಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ವೃತ್ತಿ ಶಿಕ್ಷಣ ಕಲಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮನೆಯಲ್ಲಿ ಹೊಲಿಗೆ ಯಂತ್ರ ಇದ್ದಲ್ಲಿ ಪದೇಪದೇ ಟೈಲರ್ ಬಳಿ ಹೋಗುವ ಅವಶ್ಯಕತೆ ಇರುವುದಿಲ್ಲ. ಹರಿದ ಬಟ್ಟೆಗಳನ್ನು ಮನೆಯಲ್ಲಿ ನಾವೇ ಹೊಲಿದುಕೊಳ್ಳಬಹುದು ಎಂದು ಮಕ್ಕಳಿಗೆ ಕಿವಿ ಮಾತು ಹೇಳಿದರು. ನಂತರ […]

ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ನಿರ್ವಾಹಕ ಸಿಬಂದಿ ಕೊರತೆ

Friday, September 27th, 2019
puttur

ಪುತ್ತೂರು : ಸಮರ್ಪಕ ಹಾಗೂ ವ್ಯವಸ್ಥಿತ ಕಟ್ಟಡ ಸೌಕರ್ಯವನ್ನು ಹೊಂದಲಾಗದೆ ಸಮಸ್ಯೆಯಲ್ಲಿರುವ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಇಡೀ ತಾಲೂಕಿನ ಶಾಲೆಗಳ ವ್ಯವಸ್ಥೆ ನಿರ್ವಹಣ ಕೇಂದ್ರವಾಗಿದ್ದರೂ ಅಗತ್ಯ ಸಿಬಂದಿ ಕೊರತೆಯಿಂದ ಬಳಲುತ್ತಿದೆ. ಪುತ್ತೂರು ತಾಲೂಕಿನ 23 ಸರಕಾರಿ ಪ್ರೌಢಶಾಲೆಗಳು, 181 ಸರಕಾರಿ ಪ್ರಾಥಮಿಕ ಶಾಲೆಗಳು, 22 ಅನುದಾನಿತ ಪ್ರೌಢಶಾಲೆಗಳು, 13 ಅನುದಾನಿತ ಪ್ರಾಥಮಿಕ ಶಾಲೆಗಳು, 36 ಅನುದಾನರಹಿತ ಪ್ರೌಢಶಾಲೆಗಳು ಹಾಗೂ 39 ಅನುದಾನರಹಿತ ಪ್ರಾಥಮಿಕ ಶಾಲೆಗಳ ಕೇಂದ್ರವಾಗಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಶೇ. 60ರಷ್ಟು ಕಾರ್ಯ ನಿರ್ವಾಹಕ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ..!

Thursday, June 28th, 2018
heavy-rain

ಮಂಗಳೂರು: ಕಳೆದ 48 ಗಂಟೆಗಳಿಂದಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿಯುವ ಮಳೆಗೆ ಕೆಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿದ್ದತೆ ಹಲವೆಡೆ ವಾಹನಸಂಚಾರ, ಜನ ಸಂಚಾರಕ್ಕೆ ಕಷ್ಟವಾಗಿದೆ. ಭಾರಿ ಮಳೆಯಿದ್ರೂ ತಾಲೂಕು ಶಿಕ್ಷಣಾಧಿಕಾರಿ ರಜೆ ಘೋಷಿಸಲಿಲ್ಲ. ಆದ್ದರಿಂದ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರ ಆತಂಕ ಉಂಟಾಗಿದೆ

ಸಿಪಿಎಂನ ನವಕೇರಳ ಯಾತ್ರೆಗೆ ಉಪ್ಪಳದಿಂದ ಅದ್ದೂರಿ ಚಾಲನೆ

Sunday, January 17th, 2016
cpm nava kerala jatha

ಉಪ್ಪಳ: ಜಾತ್ಯಾತೀತ, ಭ್ರಷ್ಟಾಚಾರ ಮುಕ್ತ ಅಭಿವೃದ್ಧಿಯ ಕೇರಳ ಎಂಬ ಘೋಷಣೆಯೊಂದಿಗೆ ಸಿಪಿಎಂ ರಾಜ್ಯ ಪ್ರಧಾನ ಕಾರ್ಯದರ್ಶಿ, ಪ್ಯಾಲಿಟ್ ಬ್ಯೂರೋ ಸದಸ್ಯ, ಪಿಣರಾಯಿ ವಿಜಯನ್ ಅವರ ನೇತೃತ್ವದಲ್ಲಿ ಸಂಚರಿಸಲಿರುವ ನವಕೇರಳ ಜಾಥಾಕ್ಕೆ ಶುಕ್ರವಾರ ಸಂಜೆ ಉಪ್ಪಳದಲ್ಲಿ ಅದ್ದೂರಿ ಚಾಲನೆ ನೀಡಲಾಯಿತು. ಸಿಪಿಎಂನ ಮಾಜಿ ಪ್ರಧಾನ ಕಾರ್ಯದರ್ಶಿ, ಪಾಲಿಟ್ ಬ್ಯೂರೋ ಸದಸ್ಯ ಪ್ರಕಾಶ್ ಕಾರಟ್ ಅವರು ಪಿಣರಾಯಿ ವಿಜಯನ್ ಅವರಿಗೆ ಕೆಂಬಾವುಟ ಧ್ವಜ ಹಸ್ತಾಂತರಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಪ್ರಕಾಶ್ ಕಾರಟ್ ಅವರು, ಭಷ್ಟಾಚಾರದಿಂದ ಕೂಡಿದ […]