ಶಾಲೆಗಳಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ: ಜಿಲ್ಲಾಧಿಕಾರಿ

Wednesday, March 16th, 2022
Ayushman

ಮಂಗಳೂರು : ಜಿಲ್ಲೆಯಾದ್ಯಂತ ಶಾಲೆಗಳಲ್ಲಿ ಮಕ್ಕಳಿಗೆ ಲಸಿಕಾ ಅಭಿಯಾನ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಹೇಳಿದರು. ಅವರು ನಗರದ ವೆನ್‍ಲಾಕ್ ಆಸ್ಪತ್ರೆ ಆವರಣದಲ್ಲಿರುವ ಆಯುಷ್ಮಾನ್ ವಿಭಾಗದಲ್ಲಿ ಮಾ.16ರ ಬುಧವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಡೆದ ಕೋರ್ಬೇ ವ್ಯಾಕ್ಸ್ ಲಸಿಕೆ ಮತ್ತು 60 ವರ್ಷ ಮೇಲ್ಪಟ್ಟವರಿಗೆ ನೀಡಲಾಗುವ ಮುನ್ನೆಚ್ಚರಿಕಾ ಲಸಿಕಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದಾದ್ಯಂತ ಲಸಿಕೆಗಳು ಲಭ್ಯವಿದ್ದು, ಈಗಾಗಲೇ ಜನರು […]

ಖಾಸಗಿ ಶಾಲೆಗಳಲ್ಲಿ 30% ಶುಲ್ಕ ಕಡಿತ ಮಾಡಬೇಕೆಂಬ ಸರಕಾರದ ಆದೇಶವನ್ನು ರದ್ದು ಪಡಿಸಿದ ಹೈಕೋರ್ಟ್ : ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟದಿಂದ ಸ್ವಾಗತ

Friday, September 17th, 2021
Ravindra Shetty

ಮಂಗಳೂರು  : ಸರಕಾರ ನಿಗದಿಮಾಡಿದ್ದ ಶೇ 30 ಶುಲ್ಕ ಕಡಿತವನ್ನು 15% ಕ್ಕೆ ಇಳಿಸಿದ ಹೈಕೋರ್ಟ್ ಆದೇಶವನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟ ಸ್ವಾಗತ ಮಾಡಿದೆ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟದ ಕಾರ್ಯದರ್ಶಿ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದ್ದಾರೆ. ನಮ್ಮಲ್ಲಿ ಹಲವಾರು ಖಾಸಗಿ ಶಾಲೆಗಳು ಪೋಷಕರಿಗೆ ಶಾಲಾ ಶುಲ್ಕದಲ್ಲಿ ಬಹಳಷ್ಟು ರಿಯಾಯಿತಿ ನೀಡಿವೆ, ಆದರೂ ಕೆಲವು ಪೋಷಕರು ಶುಲ್ಕವನ್ನೇ ಪಾವತಿಸದೆ ಖಾಸಗಿ […]

ವಹಿವಾಟು ಅಭಿವೃದ್ಧಿ ಯೋಜನೆ ರೂಪಿಸಲು ಕೈಮಗ್ಗ ನಿಗಮ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ

Tuesday, August 24th, 2021
BS bommai

ಬೆಂಗಳೂರು : ಕರ್ನಾಟಕ ಕೈಮಗ್ಗ ನಿಗಮದ ಪುನಶ್ಚೇತನಕ್ಕೆ ಕೂಡಲೇ ವಹಿವಾಟು ಅಭಿವೃದ್ಧಿಗೆ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅಧಿಕಾರಿಗಳಿಗೆ ಸೂಚಿಸಿದರು. ಮುಖ್ಯಮಂತ್ರಿ ಗೃಹ ಕಚೇರಿಯಲ್ಲಿ ಇಂದು ನಡೆದ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಹಣಕಾಸಿನ ಪರಿಸ್ಥಿತಿ ಸುಧಾರಣೆ ಕುರಿತ ಸಭೆಯಲ್ಲಿ ಈ ಸೂಚನೆ ನೀಡಿದರು. ನಿಗಮದ ವಾಣಿಜ್ಯ ಚಟುವಟಿಕೆಗಳನ್ನು ವಿಸ್ತರಿಸುವ ಮೂಲಕ ನಷ್ಟ ಭರಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು. ಶಿಕ್ಷಣ ಇಲಾಖೆಯ ಸಮವಸ್ತ್ರ ಪೂರೈಕೆಯಲ್ಲಿ ನಿಗಮಕ್ಕೆ ಆಗಿರುವ 10 ಕೋಟಿ ರೂ. ನಷ್ಟದಲ್ಲಿ 5 […]

ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್, ಫೇಸ್ ಮಾಸ್ಕ್

Saturday, June 6th, 2020
Dc-Sindhu

ಮಂಗಳೂರು : ಜೂನ್ 25 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 30825 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಹೇಳಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಸ್.ಎಸ್.ಎಲ್.ಸಿ – 2020 ಪರೀಕ್ಷಾ ಪೂರ್ವ ತಯಾರಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ ನಿಂದ ಉಚಿತ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ. ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ತೋರಿಸಿ ಬಸ್‌ನಲ್ಲಿ ಪಯಣಿಸಬಹುದು, ಜೂನ್25 ರಿಂದ ಜುಲೈ 4 ರವರೆಗೆ ಎಸ್.ಎಸ್.ಎಲ್.ಸಿ […]

ಇಂದು ಕರ್ನಾಟಕ ಬಂದ್ ‌: 600ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ

Thursday, February 13th, 2020
karnataka

ಬೆಂಗಳೂರು : ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟವು ಗುರುವಾರ ಕರ್ನಾಟಕ ಬಂದ್‌ಗೆ ಕರೆ ನೀಡಿದೆ. ಸರಕಾರಿ ಮತ್ತು ಖಾಸಗಿ ವಲಯ ಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಹೆಚ್ಚು ಮೀಸಲಾತಿ ಕಲ್ಪಿಸಲು ಸರೋಜಿನಿ ಮಹಿಷಿ ವರದಿ ಜಾರಿ ಅತ್ಯಗತ್ಯವಾಗಿದ್ದು, ಬಂದ್‌ ಮೂಲಕ ಸರಕಾರದ ಮೇಲೆ ಒತ್ತಡ ಹೇರುವುದು ಉದ್ದೇಶ. ಬಂದ್‌ಗೆ 600ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6ರ ವರೆಗೆ ಬೆಂಗಳೂರು ಸೇರಿ ರಾಜ್ಯದ ಹಲವೆಡೆ […]

ಶಾಲೆಯಾಗಿ ಮಾರ್ಪಟ್ಟ ರೈಲ್ವೇ ಬೋಗಿಗಳು

Tuesday, January 14th, 2020
railu

ಮೈಸೂರು : ಸರ್ಕಾರಿ ಶಾಲೆಗಳೆಂದರೆ ಸಾಕು ಸಾಮಾನ್ಯವಾಗಿ ಅಸಡ್ಡೆ ಭಾವನೆಯಿಂದ ನೋಡುವವರೇ ಹೆಚ್ಚು. ಅದರಲ್ಲೂ ಆ ಶಾಲೆಗಳು ಶಿಥಿಲಾವಸ್ಥೆಯಲ್ಲಿದೆ, ಶಿಕ್ಷಕರು ಸರಿಯಾಗಿ ಪಾಠ ಮಾಡಲ್ಲ, ಇಂಗ್ಲಿಷ್‌ ಮೀಡಿಯಂ ಇಲ್ಲ ಹೀಗೆ ಹತ್ತು ಹಲವು ಸಮಸ್ಯೆಗಳ ಸರಮಾಲೆಯನ್ನೇ ಪೋಣಿಸುತ್ತಾರೆ. ಅಲ್ಲದೇ ಸರ್ಕಾರಿ ಶಾಲೆಯನ್ನು ತಿರಸ್ಕರಿಸಲು ಕಾರಣವನ್ನು ನಾಜೂಕಾಗಿಯೇ ಹುಡುಕುತ್ತಾರೆ. ಆದರೆ ಅಂತಹ ಶಿಥಿಲಾವಸ್ಥೆಯ ಶಾಲೆಗೆ ಮಕ್ಕಳನ್ನು ತರಲು ಅಲ್ಲಿನ ಶಿಕ್ಷಕರು ಹಗಲು ಇರಳೆನ್ನದೇ ಪರಿಶ್ರಮ ಪಡುತ್ತಾರೆ. ಅದಕ್ಕೆ ಸಾಕ್ಷಿಭೂತದಂತೆ ಶಾಲೆ ತೊರೆಯಲು ಮುಂದಾಗಿದ್ದ ಮಕ್ಕಳೇ ಮೈಸೂರಿನ ಈ ಸರ್ಕಾರಿ […]

ಮೂಡುಬಿದಿರೆ:ಆಳ್ವಾಸ್ ಕಾನೂನು ಮಾಹಿತಿ ಕಾರ್ಯಕ್ರಮ

Tuesday, December 19th, 2017
alwas-kanun

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ಪದವಿ ವಿಭಾಗ ಹಾಗೂ ಇನ್ನರ್‍ವೀಲ್ ಕ್ಲಬ್ ಮೂಡುಬಿದಿರೆ ಸಹಯೋಗದಲ್ಲಿ ಮೂಡುಬಿದಿರೆ ವ್ಯಾಪ್ತಿಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ `ಮಕ್ಕಳ ಹಕ್ಕುಗಳ ಉಲ್ಲಂಘನೆ ಮತ್ತು ಕಾನೂನು ಮಾಹಿತಿ ಯೋಜನೆ’ ಕುರಿತು ಸೋಮವಾರ ಕಾರ್ಯಕ್ರಮ ನಡೆಯಿತು. ಇನ್ನರ್‍ವೀಲ್ ಕ್ಲಬ್ ಅಧ್ಯಕ್ಷೆ ಜಯಶ್ರೀ ಅಮರನಾಥ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಕ್ಕಳ ಹಕ್ಕುಗಳ ಕಾಯಿದೆಗಳನ್ನು ಸಮರ್ಪಕ ಅನುಷ್ಠಾನಕ್ಕೆ ಪೂರಕವಾಗಿ ಮಕ್ಕಳ ಪೆÇೀಷಕರು, ಶಿಕ್ಷಕರು, ಶಿಕ್ಷಣ ಇಲಾಖೆ ಸೇರಿದಂತೆ ಆಡಳಿತ ವ್ಯವಸ್ಥೆ ಹಾಗೂ ಪ್ರತಿಯೊಬ್ಬ ನಾಗರಿಕರು ತಮ್ಮ ಜವಾಬ್ದಾರಿಯನ್ನು ನಿಭಾಯಿಸಬೇಕೆಂದರು. […]

ಮಾರ್ಚ್‌ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ

Wednesday, December 13th, 2017
PUC-Exam

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬುಧವಾರ ಪ್ರಕಟಿಸಿದೆ. 2018ರ ಮಾರ್ಚ್ 1ರಂದು ಪರೀಕ್ಷೆ ಆರಂಭಗೊಳ್ಳಲಿದ್ದು, ಮಾರ್ಚ್‌ 17ಕ್ಕೆ ಪರೀಕ್ಷೆ ಮುಗಿಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಶೈಕ್ಷಣಿಕ ಒತ್ತಡದಿಂದ ಹೆಚ್ಚುತ್ತಿರುವ ಮಕ್ಕಳ ನಾಪತ್ತೆ : ಜಿಲ್ಲಾಧಿಕಾರಿ ಕಳವಳ

Thursday, June 22nd, 2017
DC

ಮಂಗಳೂರು : ಅತಿಯಾದ ಕಲಿಕೆಯ ಒತ್ತಡದಿಂದ ಮಕ್ಕಳು ನಾಪತ್ತೆ ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಕಳವಳ ವ್ಯಕ್ತಪಡಿಸಿದ್ದಾರೆ. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 2014ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 214 ಮಕ್ಕಳು ನಾಪತ್ತೆಯಾಗಿದ್ದು, ಈ ಪೈಕಿ 200 ಮಕ್ಕಳು ಪತ್ತೆಯಾಗಿದ್ದಾರೆ. ಪತ್ತೆಯಾದ ಮಕ್ಕಳಲ್ಲಿ ನಾಪತ್ತೆಯ ಕಾರಣಗಳನ್ನು ವಿಚಾರಿಸಿದಾಗ ಸುಮಾರು 51 ಮಕ್ಕಳು ಶಾಲೆ ಹಾಗೂ ಪಾಲಕರಿಂದ ಕಲಿಕೆಯ […]

ಜಿಲ್ಲೆಯಲ್ಲಿ 116ಶಾಲೆಗಳು ಶೇ.100 ಫಲಿತಾಂಶ ಗಳಿಸಿವೆ-ಎ.ಬಿ.ಇಬ್ರಾಹಿಂ

Monday, May 18th, 2015
sslc-sanmana

ಮಂಗಳೂರು : ಜಿಲ್ಲೆಯ ಶಿಕ್ಷಣ ಸಂಸ್ಥೆಗಳು, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಡಳಿತದ ಪರಿಶ್ರಮದ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ 8ನೇ ಸ್ಥಾನದಲ್ಲಿದ್ದು ಜಿಲ್ಲೆಯ 116 ಶಾಲೆಗಳು ಶೇ.100 ರಷ್ಟು ಫಲಿತಾಂಶ ದಾಖಲಿಸಿವೆ ಎಂದು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ಇಂದು ತಮ್ಮ ಕಛೇರಿಯಲ್ಲಿ ನಡೆದ ಎಸ್.ಎಸ್.ಎಲ್.ಸಿ. ಫಲಿತಾಂಶ ಸಂಬಂಧ ಉತ್ತಮ ಫಲಿತಾಂಶ ಗಳಿಸಿರುವ ಶಾಲೆಗಳ ಮುಖ್ಯಸ್ಥರಿಗೆ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸಲ್ಲಿಸಿ ಮಾತನಾಡಿದರು. ಬಂಟ್ವಾಳ 37,ಬೆಳ್ತಂಗಡಿ 15, ಮಂಗಳೂರು ಉತ್ತರ 11, ಮಂಗಳೂರು ದಕ್ಷಿಣ […]