ವಿದ್ಯಾರ್ಥಿ ಮತ್ತು ಶಿಕ್ಷಕರನ್ನು ರೂಪಿಸುವಲ್ಲಿ ಗ್ರಂಥಪಾಲಕರ ಜವಾಬ್ದಾರಿ ಮಹತ್ವದ್ದು: ಡಾ.ಎನ್.ನರಸಿಂಹ ಮೂರ್ತಿ

Sunday, August 18th, 2024
librarian day

ಮಂಗಳೂರು: ಯಾವುದೇ ವೃತ್ತಿ, ವಿಚಾರ ಕ್ಷುಲ್ಲಕವಲ್ಲ. ಬದುಕಿನಲ್ಲಿ ಸಮಾಜಕ್ಕೆ ಏನಾದರೂ ಕೊಡುಗೆ ನೀಡಲು ಗ್ರಂಥಪಾಲಕ ವೃತ್ತಿ ಶ್ರೇಷ್ಠವಾದದ್ದು. ಒಂದು ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿ ಮತ್ತು ಶಿಕ್ಷಕನ ಸರ್ವತೋಮುಖ ಅಭಿವೃದ್ಧಿಯಲ್ಲಿ ಗ್ರಂಥಪಾಲಕರ ಪಾತ್ರ ಹಿರಿದು, ಎಂದು ನಗರದ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎನ್.ನರಸಿಂಹ ಮೂರ್ತಿ ತಿಳಿಸಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲಾ ಗ್ರಂಥಾಲಯ ಸಂಘ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶ (ಐಕ್ಯೂಎಸಿ) […]

ಶಿಕ್ಷಣ ಸಂಸ್ಥೆಗಳ ಪರಿಸರದಲ್ಲಿ ತಂಬಾಕು ಮಾರಿದರೆ ಅಂಗಡಿ ಲೈಸನ್ಸ್ ರದ್ದುಗೊಳಿಸಲು ಸೂಚನೆ

Thursday, August 8th, 2024
Santhosh-G

ಮಂಗಳೂರು : ಶಾಲಾ ಕಾಲೇಜುಗಳ 100 ಮೀಟರ್ ಅಂತರದ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದಲ್ಲಿ ಅಂತಹವರ ವಿರುದ್ಧ ಕ್ರಮ ಕೈಗೊಂಡು ಪರವಾನಿಗೆಯನ್ನು ನವೀಕರಿಸದೆ, ರದ್ದುಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2024-25ರ ಸಾಲಿನ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ದಡಿಯಲ್ಲಿ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಹೊಸ ತಂಬಾಕು ಪರವಾನಿಗೆ ನೀತಿಯು ಮಹಾನಗರ ಪಾಲಿಕೆಯಲ್ಲಿ ಜಾರಿಯಾದ ತಕ್ಷಣ ಶಾಲಾ ಕಾಲೇಜು ಗಳ […]

ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಕುಕ್ಕೆ ಸುಬ್ರಹ್ಮಣ್ಯ ಶಿಕ್ಷಣ ಸಂಸ್ಥೆಯಾ ಶಿಕ್ಷಕ ಬಂಧನ

Sunday, August 8th, 2021
Gururaj

ಸುಬ್ರಹ್ಮಣ್ಯ :  ವಿದ್ಯಾರ್ಥಿನಿಯ ಮೇಲೆ  ಲೈಂಗಿಕ ದೌರ್ಜನ್ಯ ಆರೋಪದಡಿ ಶಿಕ್ಷಕನೊಬ್ಬ ಬಂಧನಕ್ಕೊಳಗಾದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ರಾಯಚೂರು ಮೂಲದ ಗುರುರಾಜ್ ಬಂಧಿತ ವ್ಯಕ್ತಿ. ಕುಕ್ಕೆ ಸುಬ್ರಹ್ಮಣ್ಯ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ವಿಭಾಗದ ಶಿಕ್ಷಕನಾಗಿರುವ ಈತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ನೀಡಿದ ದೂರಿನನ್ವಯ ಶಾಲಾ ಶಿಕ್ಷಕನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದು, ಫೋಕ್ಸೊ ಪ್ರಕರಣ ದಾಖಲಿಸಿದ್ದಾರೆ.

ವಿದ್ಯಾರ್ಥಿಗಳಲ್ಲಿ ಕೌಶಲ್ಯವನ್ನು ಹೆಚ್ಚಿಸಲು ಬಿಸಿಐಸಿ-ಎಸ್‌ಡಿಎಂ ನೋಡಲ್‌ ಸೆಂಟರ್‌ಗಳು ಸಹಕಾರಿ: ಕೈಗಾರಿಕಾ ಸಚಿವರ ಜಗದೀಶ್‌ ಶೆಟ್ಟರ್‌

Thursday, July 15th, 2021
Jagadish-Shetter

ಬೆಂಗಳೂರು : ವಿದ್ಯಾರ್ಥಿಗಳಲ್ಲಿ ಉದ್ಯೋಗಕ್ಕೆ ಹಾಗೂ ಸ್ವಯಂ ಉದ್ಯಮ ಪ್ರಾರಂಭಕ್ಕೆ ಅಗತ್ಯವಿರುವ ಕೌಶಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಬೆಂಗಳೂರು ಛೇಂಬರ್ಸ್‌ ಆಫ್‌ ಇಂಡಸ್ಟ್ರಿ ಅಂಡ್‌ ಕಾಮರ್ಸ್‌ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು ಜಂಟಿಯಾಗಿ ಮೈಸೂರು ಮತ್ತು ಧಾರವಾಡದಲ್ಲಿ ಪ್ರಾರಂಭಿಸುತ್ತಿರುವ ಸೆಂಟರ್‌ ಫಾರ್‌ ಎಕ್ಸಲೆನ್ಸ್‌ ಇನ್‌ ಮ್ಯಾನೇಜ್‌ಮೆಂಟ್ ಬಹಳ ಸಹಕಾರಿ ಆಗಲಿವೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದರು. ಇಂದು ಬೆಂಗಳೂರಿನಲ್ಲಿ ಮೈಸೂರು ಮತ್ತು ಧಾರವಾಡದ ನೂತನ ಬಿಸಿಐಸಿ-ಎಸ್‌ಡಿಎಂ ಸೆಂಟರ್‌ ಫಾರ್‌ […]

ಕೋವಿಡ್ ಸೋಂಕಿನ 2ನೇ ಅಲೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ – ಡಾ. ರಾಜೇಂದ್ರ ಕೆ.ವಿ

Saturday, January 16th, 2021
Rajendra KV

ಮಂಗಳೂರು : ಕೋವಿಡ್ ಸೋಂಕಿನ ಎರಡನೇ ಅಲೆ ಉಂಟಾಗದಂತೆ ತಡೆಯಲು ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದರು. ವಿದೇಶಗಳಲ್ಲಿ ಈಗಾಗಲೇ ಕೊರೋನಾದ ಎರಡನೇ ಅಲೆ ಬಾಧಿಸಿ ಹೆಚ್ಚು ಜನರು ಸೋಂಕಿತರಾಗಿದ್ದಾರೆ. ಈ ವರೆಗೆ ನಮ್ಮ ದೇಶದಲ್ಲಿ ಎರಡನೇ ಅಲೆ ಕಂಡುಬಂದಿರುವುದಿಲ್ಲ ಆದರೂ ಸಹ ನಿರ್ಲಕ್ಷ್ಯ ವಹಿಸದೇ ಕೊರೊನಾ ಎರಡನೇ ಅಲೆಯನ್ನು […]

ಇಂದಿನ ವಿದ್ಯಾರ್ಥಿಗಳು ಕನ್ನಡದ ಸೊಗಡನ್ನು ಕಾಯ್ದುಕೊಳ್ಳಬೇಕಾಗಿದೆ : ನಚಿಕೇತ್ ನಾಯಕ್

Thursday, November 30th, 2017
vidyartisiri Validation

ಮೂಡಬಿದ್ರೆ  : “ಇತ್ತೀಚೆಗೆ ಶಿಕ್ಷಣದ ದಿಕ್ಕು ಬದಲಾಗುತ್ತಿದೆ. ಒಂದೆಡೆ ಇಡೀ ವಿಶ್ವವು ತನ್ನ ಸಂಸ್ಕೃತಿಯನ್ನು ಬೆಳೆಸುವತ್ತಾ ಸಾಗಿದರೆ ಇನ್ನೊಂದೆಡೆ ನಮ್ಮ ಶಿಕ್ಷಣ ಪದ್ಧತಿಯೂ ಅದೇ ಸಂಸ್ಕೃತಿಯ ಮಹತ್ವವನ್ನು ಕಡೆಗಣಿಸುತ್ತಿದೆ. ಈಗಲಾದರೂ ನಮ್ಮ ಶಿಕ್ಷಣ ಸಂಸ್ಥೆಗಳು ಎಚ್ಚೆತ್ತುಕೊಳ್ಳಬೇಕಿದೆ. ವಿದ್ಯಾರ್ಥಿಗಳನ್ನು ಯಂತ್ರಗಳನ್ನಾಗಿಸದೇ, ಅವರಲ್ಲಿ ಬರಿ ಅಂಕ ಗಳಿಕೆಯ ಮನಸ್ಥಿತಿ ಬೆಳೆಸದೇ ಮೊದಲು ಮಾನವೀಯತೆ ಮೂಡಿಸುವ ಕಾರ್ಯ ನಡೆಯಬೇಕು” ಎಂದು ಗುರುವಾರ ಆಳ್ವಾಸ್ ನುಡಿಸಿರಿ-2017 ರ ಅಂಗವಾಗಿ ಆಯೋಜಿಸಿದ್ದ ವಿದ್ಯಾರ್ಥಿಸಿರಿ ಕಾರ್ಯಕ್ರಮದ ಸಮಾರೋಪ ಭಾಷಣದಲ್ಲಿ ಉಡುಪಿ ಒಳಕಾಡು ಸರ್ಕಾರಿ ಸಂಯುಕ್ತ ಪ್ರೌಢ […]