ತಂದೆಯ ಶವಸಂಸ್ಕಾರಕ್ಕೆಂದು ಹೂವು ತರಲು ತೆರಳಿದ್ದ ಮಗ ಮತ್ತು ಸಂಬಂಧಿ ಸಾವು

Monday, March 15th, 2021
Sirasi Accident

ಶಿರಸಿ  : ಬಸ್ಸು ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನದ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಈ ಘಟನೆ ಶಿರಸಿ ನಗರದ ಎಸ್‍ಬಿಐ ಸರ್ಕಲ್ ಬಳಿ ಸಂಭವಿಸಿದೆ. ತಂದೆಯ ಶವಸಂಸ್ಕಾರಕ್ಕೆಂದು ಹೂವು ತರಲು ತೆರಳಿದ್ದ ಮಗ ಮತ್ತು ಇನ್ನೊಬ್ಬ ಸಂಬಂಧಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೃತರನ್ನು ಶಿರಸಿಯ ಗಣೇಶ ನಗರದ ನಿವಾಸಿಗಳಾದ ರವಿಚಂದ್ರ ವಡ್ಡರ್ (34), ಸುನೀಲ ಇಂದೂರ (26) ಎಂದು ಗುರುತಿಸಲಾಗಿದೆ. ರವಿಚಂದ್ರ ತಂದೆ ಹನುಮಂತಪ್ಪ ಇಂದು ಮೃತಪಟ್ಟಿದ್ದು, ಅವರ ಶವಸಂಸ್ಕಾರಕ್ಕೆ ಹೂ ತರಲು […]

ಹೆಂಡತಿಯೊಂದಿಗೆ ಕಾಲ ಕಳೆಯದ ಗಂಡ, ನೊಂದು ಆತ್ಮಹತ್ಯೆ

Wednesday, January 27th, 2021
Pallavi

ಕಾರವಾರ: ಗೆಳೆಯರೊಂದಿಗೆ ಕಾಲ ಕಳೆಯುತ್ತಿದ್ದ ಗಂಡನಿಂದ ಬೇಸತ್ತ ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಇಂದಿರಾ ನಗರದಲ್ಲಿ ನಡೆದಿದೆ. ಮೂಲತಃ ಶಿರಸಿ ತಾಲೂಕಿನ ಗಿಡಮಾವಿನಕಟ್ಟೆಯ ನಿವಾಸಿಯಾಗಿದ್ದ ಪಲ್ಲವಿ ವಿಜಯ ದೇವಾಡಿಗ (27) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಎರಡು ವರ್ಷಗಳಿಂದ ಪತಿಯೊಂದಿಗೆ ಇಂದಿರಾ ನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಪತಿ ತನ್ನ ಜೊತೆ ಹೆಚ್ಚಿನ ಸಮಯ ಕಳೆಯುವುದಿಲ್ಲ ಎಂದು ಕೊರಗುತ್ತಿದ್ದರು. ಇಂದು ಪತಿ ಗೆಳೆಯರೊಂದಿಗೆ ಕ್ರಿಕೆಟ್ ನೋಡಲು ತೆರಳಿದ್ದರಿಂದ ಪಲ್ಲವಿ ಸಿಟ್ಟಾಗಿದ್ದರು. […]

ಮಕ್ಕಳಾಗದವರಿಗೆ ಮಕ್ಕಳು ಮಾಡುವ ಔಷಧಿ ನೀಡುವುದಾಗಿ ನಂಬಿಸಿ ಹಲವರಿಗೆ ಮೋಸ, ಓರ್ವನ ಬಂಧನ

Friday, October 2nd, 2020
manjunatha

ಕಾರವಾರ: ಮಕ್ಕಳಾಗದವರಿಗೆ ಮಕ್ಕಳು ಮಾಡುವ ಔಷಧಿ ನೀಡುವುದಾಗಿ ನಂಬಿಸಿ ವಂಚಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ,  ಮಕ್ಕಳಾಗದ ಕುಟುಂಬದವರನ್ನು ಸಂಪರ್ಕಿಸಿ ಅವರಿಗೆ ಮಕ್ಕಳಾಗುವ ಗಿಡುಮೂಲಿಕೆ ಔಷಧಿ ಈತ ನೀಡುತ್ತಿದ್ದ. ಬಂಧಿತನನ್ನು ಆಂಧ್ರಪ್ರದೇಶದ ಅನಂತಪುರ ಮೂಲದ ಬಂಡಿ ಮಂಜುನಾಥ ಎಂದು ಗುರುತಿಸಲಾಗಿದೆ. ಶಿರಸಿ ಗ್ರಾಮೀಣ ಪ್ರದೇಶದಲ್ಲಿ ಪರಿಚಯಸ್ಥರಂತೆ ವರ್ತಿಸಿ ಅವರಿಗೆ ಮಕ್ಕಳಾಗುವ ಗಿಡಮೂಲಿಕೆ ಔಷಧಿ ನೀಡುವುದಾಗಿ ಹೇಳಿ ಸಾವಿರಾರು ರೂಪಾಯಿಗಳನ್ನು ಪಡೆದು ವಂಚಿಸುತ್ತಿದ್ದ ಎನ್ನಲಾಗಿದ್ದು. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆತ ಈಗ ನ್ಯಾಯಾಂಗ ಬಂಧನದಲ್ಲಿ ಇರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಮಕ್ಕಳಾಗದ ಕುಟುಂಬಗಳ ಮಾಹಿತಿ ಸಂಗ್ರಹಿಸಿ […]

ತಾಯಿಯನ್ನು ನೋಡಿಕೊಳ್ಳಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

Friday, July 17th, 2020
Raviteja

ಶಿರಸಿ  : ತಾಯಿ ಮತ್ತು ಮಗ ಇಬ್ಬರೇ ಇದ್ದು ಮನೆಯಲ್ಲಿನ ಕಷ್ಟ ನೋಡಲಾಗದೇ ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ‌ನೀರ್ನಳ್ಳಿಯಲ್ಲಿ‌ ನಡೆದಿದೆ. ನಿರ್ನಳ್ಳಿಯ ರವಿತೇಜ ಗಣಪತಿ ಭಟ್ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮನೆಯಲ್ಲಿ ತಾಯಿ ಮತ್ತು ಮಗ ಇಬ್ಬರೇ ಇದ್ದು ಮನೆಯ ನಿರ್ವಹಣೆ ಕಷ್ಟ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಮೊದಲು ತಿಮಿಟ್ ಸೇವಿಸಿ ನಂತರ ‌ನೇಣು‌ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ […]

ಶಿರಸಿ : ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವಕ್ಕೆ ಚಾಲನೆ‌

Wednesday, March 4th, 2020
sirsi

ಶಿರಸಿ : ದಕ್ಷಿಣ ಭಾರತದ ಅತಿದೊಡ್ಡ ಜಾತ್ರೆಗಳಲ್ಲಿ ಒಂದಾದ ಶಿರಸಿಯ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವಕ್ಕೆ ಚಾಲನೆ‌ ಸಿಕ್ಕಿದ್ದು, ಮಂಗಳವಾರ ರಾತ್ರಿ ಶ್ರೀ ದೇವಿಯ ಕಲ್ಯಾಣ ಪ್ರತಿಷ್ಠೆ, ಬುಧವಾರ ಮುಂಜಾನೆ 7.26ಕ್ಕೆ ರಥಾರೂಢಳಾದಳು. ಬಳಿಕ ಲಕ್ಷಕ್ಕೂ ಅಧಿಕ ಭಕ್ತರ ಜಯಘೋಷದ ನಡುವೆ ಶ್ರೀ ದೇವಿಯ ಶೋಭಾಯತ್ರೆ‌ ನಡೆಯಿತು. ಮಾ.11ರ ತನಕ ಜಾತ್ರೆ ನಡೆಯಲಿದೆ.    

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ..ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಸಾವು!

Wednesday, July 25th, 2018
student

ಶಿರಸಿ: ಸಾರಿಗೆ ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಶಿರಸಿ- ಹುಬ್ಬಳ್ಳಿ ರಸ್ತೆಯ ಚಿಪ್ಗಿಯಲ್ಲಿ ನಡೆದಿದೆ. ಚಿಪ್ಗಿಯ ಚೆಕ್ ಪೋಸ್ಟ್ ಘಟನೆ ನಡೆದಿದ್ದು, ಕುಮಟಾ-ಶಿರಸಿ ಹುಬ್ಬಳ್ಳಿ ಬಸ್ ಗೆ ಬೈಕ್ ಡಿಕ್ಕಿಯಾಗಿದೆ. ಬಾಲಕಿಯ ದೇಹ ಸಂಪೂರ್ಣ ಛಿದ್ರಗೊಂಡಿದೆ. ಒಂದೇ ಬೈಕ್ ನಲ್ಲಿ ಮೂವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಸಂಸದ ಅನಂತ ಕುಮಾರ್ ಹೆಗಡೆ ಅವರನ್ನು ಬಂಧಿಸುವಂತೆ ಉಡುಪಿ ವೈದ್ಯಕೀಯ ಸಂಘದ ಧರಣಿ

Saturday, January 7th, 2017
doctor's protest

ಉಡುಪಿ : ಕರ್ತವ್ಯ ನಿರತ ವೈದ್ಯರ ಮೇಲೆ ಶಿರಸಿಯಲ್ಲಿ ಹಲ್ಲೆ ನಡೆಸಿದ ಉತ್ತಕ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ ಅವರನ್ನು ಬಂಧಿಸುವಂತೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಶಾಖೆಯು ಶನಿವಾರ ಹೊರರೋಗಿ ವಿಭಾಗದ ಸೇವೆಯನ್ನು ಸ್ಥಗಿತಗೊಳಿಸಿ ಉಡುಪಿ ಕ್ಲಾಕ್ ಟವರ್ ಎದುರು ಧರಣಿ ನಡೆಸಿತು. ಸಂಸದ ಅನಂತಕುಮಾರ್ ಹೆಗಡೆ ವೈದ್ಯರ ಮೇಲೆ ಕಾನೂನು ಬಾಹಿರ ವಾಗಿ, ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ಕಾನೂನನ್ನು ಕಾಪಾಡುವವರೆ ಕಾನೂನು ಕೈಗೆತ್ತಿಕೊಂಡಿರುವುದರಿಂದ ಸರಕಾರ ಕೂಡಲೇ ಅವರನ್ನು ಬಂಧಿಸಿ ಶಿಕ್ಷೆಗೆ […]