2 ದಿನಗಳಲ್ಲಿ ಶಿರಾಡಿ ಘಾಟಿಯಲ್ಲಿ ಬಸ್‌ ಸಂಚಾರ ಶುರು: ಯು.ಟಿ. ಖಾದರ್‌

Friday, September 28th, 2018
opens

ಮಂಗಳೂರು: ಶಿರಾಡಿ ಘಾಟಿ ಈ ಮಾಸಾಂತ್ಯಕ್ಕೆ ಪ್ರಯಾಣಿಕರ ಘನ ವಾಹನಗಳ ಸಂಚಾರಕ್ಕೆ ಮುಕ್ತಗೊಳ್ಳುವ ನಿರೀಕ್ಷೆಯಿದೆ. ಘನ ವಾಹನಗಳಿಗೆ ಶಿರಾಡಿ ಘಾಟಿಯಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ವ್ಯಾಪಕ ಆಗ್ರಹ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ರಾ. ಹೆ. ಪ್ರಾಧಿಕಾರ, ರಾ.ಹೆ. ಇಲಾಖೆಯ ಅಧಿಕಾರಿಗಳ ಸಭೆ ನಡೆಸಲಾಗಿದೆ. ಒಂದೆರಡು ದಿನಗಳಲ್ಲಿ ಘಾಟಿಯಲ್ಲಿ ಬಸ್‌ ಸಹಿತ ಪ್ರಯಾಣಿಕರ ಘನ ವಾಹನಗಳ ಸಂಚಾರ ಆರಂಭ ಗೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಯು.ಟಿ. ಖಾದರ್‌ […]

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಲಾರಿ ಪಲ್ಟಿ: ಸಂಚಾರಕ್ಕೆ ಅಡಚಣೆ

Wednesday, September 26th, 2018
belthangady

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 3ನೇ ತಿರುವಿನಲ್ಲಿ ಬುಧವಾರ ಬೆಳಗಿನ ಜಾವ ಬಾಳೆಕಾಯಿ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಮಗುಚಿ ಬಿದ್ದ ಪರಿಣಾಮ ರಸ್ತೆ ಸಂಚಾರಕ್ಕೆ ಅಡಚಣೆಯುಂಟಾದ ಘಟನೆ ನಡೆದಿದೆ. ಲಾರಿ ತೆರವುಗೊಳಿಸಲು ಚಾರ್ಮಾಡಿ ಹಸನಬ್ಬ ತಂಡ ಸಹಕರಿಸಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ. ಶಿರಾಡಿ ಘಾಟಿ ಸಂಚಾರಕ್ಕೆ ತೆರವು ಆಗುವವರೆಗೆ ಇಲ್ಲಿ ಕ್ರೇನ್ ಒಂದರ ವ್ಯವಸ್ಥೆ ಮಾಡಿ ಕೊಡಬೇಕೆಂದು ಹಸನಬ್ಬ ಅವರು ಬೇಡಿಕೆ ಇಟ್ಟಿರುವ ಕುರಿತು ಉದಯವಾಣಿಯಲ್ಲಿ ಪ್ರಕಟಿಸಲಾಗಿತ್ತು. ಆದರೆ ಇನ್ನೂ […]

ಜಿಲ್ಲೆಯ ವಿವಿಧ ನೆರೆಪೀಡಿತ ಪ್ರದೇಶಗಳಿಗೆ ಯು.ಟಿ.ಖಾದರ್ ಭೇಟಿ..!

Saturday, August 18th, 2018
u-t-kadher

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ನೆರೆಪೀಡಿತ ಪ್ರದೇಶಗಳಿಗೆ ನಗರಾಭಿವೃದ್ಧಿ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹಾಗೂ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೊದಲು ಬಂಟ್ವಾಳ ತಾಲೂಕಿನ ಗೂಡಿನಬಳಿ, ಆಲಡ್ಕ ಮತ್ತು ಪಾಣೆಮಂಗಳೂರಿಗೆ ಭೇಟಿ ನೀಡಿ ನೇತ್ರಾವತಿ ಹಳೆ ಸೇತುವೆ ಸಮೀಪ ನೆರೆ ನೀರನ್ನು ವೀಕ್ಷಿಸಿದ ಸಚಿವರು, ಬಳಿಕ ಆಲಡ್ಕ ಪ್ರದೇಶದಲ್ಲಿ ನೆರೆ ನೀರಿನಿಂದ ಮುಳುಗಿದ ಜನ ವಸತಿ ಪ್ರದೇಶಗಳನ್ನು ವೀಕ್ಷಿಸಿ ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿ ಅಹವಾಲು ಆಲಿಸಿದರು. ಬಳಿಕ […]

ಶಿರಾಡಿ ಘಾಟಿ 2ನೇ ಹಂತದ ಕಾಂಕ್ರೀಟ್‌ ರಸ್ತೆ ಕಾಮಗಾರಿ ವೀಕ್ಷಿಸಿದ ಡಾ.ವೀರೇಂದ್ರ ಹೆಗ್ಗಡೆ

Tuesday, June 5th, 2018
veerendra-heggade-2

ಉಪ್ಪಿನಂಗಡಿ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಕಲೇಶಪುರದ ಕೆಂಪುಹೊಳೆಯಿಂದ ಶಿರಾಡಿ ಗ್ರಾಮದ ಅಡ್ಡಹೊಳೆ ತನಕ ನಡೆಯುತ್ತಿರುವ ಶಿರಾಡಿ ಘಾಟಿ ರಸ್ತೆ 2ನೇ ಹಂತದ ಕಾಂಕ್ರೀಟ್‌ ರಸ್ತೆ ಕಾಮಗಾರಿಯನ್ನು ಧರ್ಮಸ್ಥಳ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವೀಕ್ಷಿಸಿ ಕಾಮಗಾರಿಯ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವೀರೇಂದ್ರ ಹೆಗ್ಗಡೆಯವರು ಜೂ. 2ರಂದು ಪೂರ್ಣ 13 ಕಿ.ಮೀ. ದೂರದ ತನಕ ಕಾಮಗಾರಿ ವೀಕ್ಷಿಸಿದರು. ಕಾಂಕ್ರೀಟ್‌ ಕಾಮಗಾರಿಗಾಗಿ ಬಳಸುವ ಜರ್ಮನ್‌ ಯಂತ್ರ, ಕಾಮಗಾರಿ ಸಲುವಾಗಿ ಮಿಕ್ಸಿಂಗ್‌ ಯಂತ್ರ ಹಾಗೂ ಯುನಿಟ್‌ […]

ಶಿರಾಡಿ ಘಾಟಿ ರಸ್ತೆಯ 2ನೇ ಹಂತದ ಕಾಂಕ್ರೀಟ್‌ ರಸ್ತೆ ಕಾಮಗಾರಿ

Saturday, March 31st, 2018
shiradi-gatt

ಉಪ್ಪಿನಂಗಡಿ: ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿರಾಡಿ ಘಾಟಿ ರಸ್ತೆಯ 2ನೇ ಹಂತದ ಕಾಂಕ್ರೀಟ್‌ ರಸ್ತೆ ಕಾಮಗಾರಿ ಕ್ಷಿಪ್ರಗತಿಯಿಂದ ನಡೆಯುತ್ತಿದ್ದು, ಮೇ ಅಂತ್ಯದ ಒಳಗೆ ಪೂರ್ಣಗೊಂಡು ಜೂನ್‌ ಆರಂಭದಲ್ಲಿ ಸಂಚಾರಕ್ಕೆ ಮುಕ್ತವಾಗುವ ಭರವಸೆ ಕಂಡುಬಂದಿದೆ. ರಾ. ಹೆದ್ದಾರಿಯಲ್ಲಿ ಕೆಂಪುಹೊಳೆಯಿಂದ ಅಡ್ಡಹೊಳೆ ತನಕ 13 ಕಿ.ಮೀ. ಕಾಂಕ್ರೀಟ್‌ ರಸ್ತೆ 2ನೇ ಹಂತದ ಕಾಮಗಾರಿಗೆ 74 ಕೋ. ರೂ. ಮಂಜೂರು ಆಗಿದ್ದು, ಜರ್ಮನಿಯಿಂದ ತರಿಸಲಾದ ಹೊಸ ಯಂತ್ರವನ್ನು ಬಳಸಿ ಆಧುನಿಕ ತಂತ್ರಜ್ಞಾನ ಆಧರಿಸಿ ಕಾಮಗಾರಿ ಬಹಳ ವೇಗವಾಗಿ ಸಾಗುತ್ತಿದೆ. ಈ […]

ಶಿರಾಡಿ ಘಾಟಿ ರಸ್ತೆ : ಎರಡನೇ ಹಂತದ ಕಾಂಕ್ರೀಟ್‌ ಕಾಮಗಾರಿಗೆ ಸಿದ್ಧತೆ

Friday, January 19th, 2018
shiradi-gatt

ಉಪ್ಪಿನಂಗಡಿ: ಶಿರಾಡಿ ಘಾಟಿ ರಸ್ತೆಯ 2ನೇ ಹಂತದ ಕಾಂಕ್ರೀಟ್‌ ರಸ್ತೆ ಕಾಮಗಾರಿ 26 ತಿಂಗಳು ವಿಳಂಬವಾಗಿ ಆರಂಭವಾಗುತ್ತಿದ್ದು, ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. 2015ರ ಮಳೆಗಾಲ ಮುಗಿದ ಮೇಲೆ ಆರಂಭವಾಗಬೇಕಿದ್ದ ಕಾಮಗಾರಿಗೆ ಲೋಕೋಪಯೋಗಿ ಇಲಾಖೆಯ ರಾಷ್ಟ್ರೀಯ ಹೆದ್ದಾರಿ ವಲಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಂಪುಹೊಳೆಯಿಂದ ಅಡ್ಡಹೊಳೆ ತನಕ 12.38 ಕಿ.ಮೀ. ಕಾಂಕ್ರೀಟ್‌ ರಸ್ತೆ 2ನೇ ಹಂತದ ಕಾಮಗಾರಿಗೆ 2015ರಲ್ಲಿ 85.28 ಕೋಟಿ ರೂ. ಮಂಜೂರಾಗಿತ್ತು. ಇದರಲ್ಲಿ 12.38 ಕಿ.ಮೀ. ಕಾಂಕ್ರೀಟೀಕರಣಕ್ಕೆ 63.10 ಕೋಟಿ […]

ಶಿರಾಡಿ ಘಾಟಿ ಸಂಚಾರ ಸ್ಥಗಿತ: ಕಾರಣ?

Thursday, January 11th, 2018
blocked

ಮಂಗಳೂರು: ಟ್ಯಾಂಕರ್‌ ಅವಘಡದ ಹಿನ್ನೆಲೆ ತಕ್ಷಣದಿಂದಲೇ ಅನ್ವಯವಾಗುವಂತೆ ಇಂದು  ಬೆಳಿಗ್ಗೆ 7.30 ಗಂಟೆಯವರೆಗೆ ಶಿರಾಡಿ ಘಾಟ್‌‌ನಲ್ಲಿ ಎಲ್ಲಾ ತರಹದ ವಾಹನಗಳ ಸಂಚಾರವನ್ನು ತಡೆ ಹಿಡಿಯಲಾಗಿದೆ. ವಾಹನಗಳು ಪರ್ಯಾಯವಾಗಿ ಚಾರ್ಮಾಡಿ ಅಥವಾ ಮಾಣಿ-ಮಡಿಕೇರಿ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕಟಣೆ ತಿಳಿಸಿದ್ದಾರೆ.