ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಶಿವನಾಮ ಪಂಚಾಕ್ಷರಿ ಪಠಣದೊಂದಿಗೆ ಅಹೋರಾತ್ರಿ ಜಾಗರಣೆ

Saturday, February 22nd, 2020
shivaratri

ಉಜಿರೆ : ಮೊದಲು ನಮ್ಮನ್ನು ನಾವು ಅರಿತುಕೊಂಡು, ಮನ-ವಚನ-ಕಾಯದಿಂದ ಪರಿಶುದ್ಧರಾಗಿ, ದೃಢಭಕ್ತಿ ಮತ್ತು ಅಚಲ ವಿಶ್ವಾಸದಿಂದ ದೇವರ ನಾಮಸ್ಮರಣೆ ಮಾಡಿ ಸಾರ್ಥಕ ಜೀವನ ನಡೆಸಬೇಕು. ಆಚಾರವೇ ಶ್ರೇಷ್ಠವಾದ ಧರ್ಮ, ಅಭಯದಾನವೇ ಶ್ರೇಷ್ಠವಾದ ದಾನವಾಗಿದೆ. ಧರ್ಮಸ್ಥಳವು ಜಾತಿ – ಮತ ಬೇಧವಿಲ್ಲದೆ ಸಕಲ ಭಕ್ತರಿಗೂ ಎಂದೂ ಭಯಪಡಬೇಡಿ ಎಂದು ಸದಾ ಅಭಯದಾನ ನೀಡುವ ಪವಿತ್ರ ಕ್ಷೇತ್ರವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಶಿವರಾತ್ರಿ ಸಂದರ್ಭದಲ್ಲಿ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ನಡೆಯುವ […]

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ ! ಪಾದಯಾತ್ರಿಗಳ ಗಡಣ

Thursday, February 20th, 2020
ujire

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಇದೇ 21 ರಂದು ಶುಕ್ರವಾರ ಇಡೀ ರಾತ್ರಿ ಶಿವನಾಮ ಪಂಚಾಕ್ಷರಿ ಪಠಣ, ಭಜನೆ, ಪ್ರಾರ್ಥನೆ, ಜಪ,ತಪ, ಧ್ಯಾನದೊಂದಿಗೆ ಜಾಗರಣೆ ನಡೆಯಲಿದೆ. ಶುಕ್ರವಾರ ಸಂಜೆಗಂಟೆ 5.30 ರಿಂದಇಡೀರಾತ್ರಿ ನಾಲ್ಕು ಜಾವಗಳಲ್ಲಿ ಭಕ್ತರುದೇವರದರ್ಶನ ಮಾಡಿ ಶತರುದ್ರಾಭಿಷೇಕ ಸೇವೆ ಸಲ್ಲಿಸುವರು. ಬೆಂಗಳೂರು, ಮೈಸೂರು, ಮಂಡ್ಯ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಮೊದಲಾದ ಕಡೆಗಳಿಂದ ಇಪ್ಪತ್ತೈದು ಸಾವಿರಕ್ಕೂ ಮಿಕ್ಕಿ ಪಾದಯಾತ್ರಿಗಳು ಶುಕ್ರವಾರ ಬೆಳಿಗ್ಯೆ ಧರ್ಮಸ್ಥಳ ತಲುಪುವರು. ಹತ್ತು ಸಾವಿರಕ್ಕೂ ಮಿಕ್ಕಿ ಪಾದಯಾತ್ರಿಗಳು ಈಗಾಗಲೆ ಮುಂಡಾಜೆ, ಚಾರ್ಮಾಡಿ, ಪ್ರದೇಶದಲ್ಲಿ ಬೀಡು ಬಿಟ್ಟಿದ್ದಾರೆ. […]