Blog Archive

ರಾಜ್ಯದಲ್ಲಿ ಮುಂದುವರಿದ ವರುಣನ ಅಬ್ಬರ… ರೈತರ ಮೊಗದಲ್ಲಿ ಮಂದಹಾಸ

Monday, June 4th, 2018
heavy-rain

ಬೆಂಗಳೂರು: ಭಾನುವಾರವೂ ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿತ್ತು. ಧಾರವಾಡ, ಚಿಕ್ಕಮಗಳೂರು, ಹಾವೇರಿ, ತುಮಕೂರು ಸೇರಿದಂತೆ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ, ಲಕಮಾಪುರ, ಯಾದವಾಡ ಸೇರಿದಂತೆ ಅನೇಕ ಕಡೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದ್ದು, ಕೆಲವೆಡೆ ನೆರೆ ಕೂಡ ಬಂದಿದೆ. ತಾಲೂಕಿನ ಉಪ್ಪಿನ ಬೆಟಗೇರಿಯಿಂದ ಹನುಮನಹಾಳಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಮೇಲೆ ನೀರು ತುಂಬಿ ಬಂದಿದ್ದು, ಆ ಮಾರ್ಗ ಸಂಪೂರ್ಣ ಬಂದ್ ಆಗಿತ್ತು. ಚಿಕ್ಕ ಹಳ್ಳ ಇದಾಗಿದ್ದು, ಸೇತುವೆ ಜಲಾವೃತಗೊಂಡಿತ್ತು. ಬೈಕ್ ಸವಾರರು ಧೈರ್ಯ […]

ಮಧ್ಯರಾತ್ರಿ ಕಾರಿನ ಟಯರ್ ಪಂಕ್ಚರ್: ಸಂಕಷ್ಟದಲ್ಲಿದ್ದ ಪ್ರವಾಸಿಗರಿಗೆ ನೆರವಾದ ಅಣ್ಣಾಮಲೈ

Monday, December 25th, 2017
annamalai

ಚಿಕ್ಕಮಗಳೂರು: ರಾತ್ರಿ ರಸ್ತೆ ಮಧ್ಯೆ ಕಾರಿನ ಟಯರ್ ಪಂಕ್ಚರ್ ಆಗಿ ಸಂಕಷ್ಟಕ್ಕೆ ಸಿಲುಕಿದ್ದ ಪ್ರವಾಸಿಗರಿಗೆ ನೆರವಾಗುವ ಮೂಲಕ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಘಟನೆ ನಿನ್ನೆ ರಾತ್ರಿ ನಡೆದಿದ್ದು, ಬೆಂಗಳೂರಿನ ಪ್ರವಾಸಿಗರಿದ್ದ ಕಾರೊಂದು ಚಿಕ್ಕಮಗಳೂರು-ಶೃಂಗೇರಿ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ಮತ್ತಾವರ ಎಂಬ ಗ್ರಾಮವನ್ನು ತಲುಪಿದಾಗ ಕಾರಿನ ಟಯರ್ ಪಂಕ್ಚರ್ ಆಗಿತ್ತು. ಜನಸಂಖ್ಯೆ ವಿರಳವಾಗಿದ್ದ, ಸುತ್ತಮುತ್ತ ಮರಗಳೇ ಅಧಿಕವಾಗಿದ್ದ ಈ ಪ್ರದೇಶದಲ್ಲಿ ಪ್ರವಾಸಿಗರು ತುಂಬಾ ಆತಂಕಕ್ಕೆ ಒಳಗಾಗಿದ್ದರು. ಅಷ್ಟರಲ್ಲಿ ಆ ದಾರಿಯಾಗಿ ಕೊಪ್ಪದಿಂದ ಚಿಕ್ಕಮಗಳೂರಿಗೆ […]

ಸಮುದಾಯ ಭವನಕ್ಕೆ ಜಮೀನು ಮಂಜೂರು ಮಾಡಲು ಒತ್ತಾಯಿಸಿ ಬ್ಯಾರಿ ಒಕ್ಕೂಟದಿಂದ ಸಿಎಂಗೆ ಮನವಿ

Saturday, December 16th, 2017
shringari

ಶೃಂಗೇರಿ: ಶೃಂಗೇರಿಯಲ್ಲಿ ಬ್ಯಾರಿ ಸಮುದಾಯ ಭವನ/ಬ್ಯಾರಿ ಸಾಂಸ್ಕೃತಿಕ ಕೇಂದ್ರ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡುವಂತೆ ಶೃಂಗೇರಿ ಕ್ಷೇತ್ರ ಬ್ಯಾರಿ ಒಕ್ಕೂಟವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದೆ. ಇತ್ತೀಚೆಗೆ ಕೊಪ್ಪಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾದ ಒಕ್ಕೂಟದ ಅಧ್ಯಕ್ಷ ಅಬ್ದುಲ್ ಖಾದರ್ ಹಾಗೂ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಕೆ.ಮುಹಮದ್ ಅವರು ಈ ಮನವಿ ಸಲ್ಲಿಸಿದ್ದು, ಒಕ್ಕೂಟದ ಬಹುಕಾಲದ ಬೇಡಿಕೆಯಾಗಿರುವ ಸಮುದಾಯ ಭವನಕ್ಕೆ ಮೂರು ಎಕರೆ ಸರಕಾರಿ ಜಮೀನು ಮಂಜೂರು ಮಾಡುವಂತೆ ಮನವಿ ಮಾಡಿದರು.