ಸಾಮಾಜಿಕ ಹೋರಾಟಗಾರ ಕೆ. ಸದಾನಂದ ನಾಯಕ್ ಇಂದಾಜೆ ನಿಧನ

Friday, July 17th, 2015
sadananda Nayak indaje

ಪುತ್ತೂರು: ಪ್ರಗತಿಪರ ಕೃಷಿಕ, ಶೈಕ್ಷಣಿಕ ತಜ್ಞ, ಸಾಮಾಜಿಕ ಹೋರಾಟಗಾರ, ಸಮಾಜ ಸೇವಕ ಪುತ್ತೂರಿನ ಸುಳ್ಯಪದವು ಕನ್ನಡ್ಕ ನಿವಾಸಿ ಕೆ. ಸದಾನಂದ ನಾಯಕ್ ಇಂದಾಜೆ (80) ಇಂದು ಅಲ್ಪಕಾಲದ ಅಸೌಖ್ಯದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸದಾ ಹಾಸ್ಯಪ್ರವೃತ್ತಿಯಿಂದ ಕೂಡಿರುವ ಸದಾನಂದ ನಾಯಕ್ ಅವರು, ಜಿಎಸ್‌ಬಿ ಸಮಾಜದಲ್ಲಿ ‘ಸದ್ ಮಾಮ್’ ಎಂದು ಖ್ಯಾತಿ ಪಡೆದಿದ್ದರು. ಸುಳ್ಯಪದವಿನ ಸರ್ವೋಧಯ ಪ್ರೌಢಶಾಲೆ, ಬಾಲಸುಬ್ರಹ್ಮಣ್ಯ ಹಿರಿಯ ಪ್ರಾಥಮಿಕ ಶಾಲೆಯ ಮಾಜಿ ಸಂಚಾಲಕರಾಗಿ ಹಳ್ಳಿಯೊಂದರಲ್ಲಿ ಶೈಕ್ಷಣಿಕ ಕ್ರಾಂತಿಯನ್ನು ಮಾಡಿದ್ದರು. ಹಲವು ಸಂಘ ಸಂಸ್ಥೆಗಳಿಗೆ ದೇಣಿಗೆ […]

2013ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ : ಹರೇಕಳ ಹಾಜಬ್ಬ

Thursday, October 31st, 2013
rajyotsava-prashasti

ಮಂಗಳೂರು: ಹರೇಕಳದಂತಹ ಪುಟ್ಟ ಊರಿನಲ್ಲಿ ಕಿತ್ತಳೆ ಹಣ್ಣು ಮಾರಿ ಶಾಲೆ ಕಟ್ಟುವ ಮೂಲಕ ಶೈಕ್ಷಣಿಕ ಕ್ರಾಂತಿಗೆ ಕಾರಣರಾದ ಹರೇಕಳ ಹಾಜಬ್ಬರನ್ನು ರಾಜ್ಯ ಸರ್ಕಾರ ಗುರುತಿಸಿದ್ದು, ಅವರನ್ನು ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದೆ. 2013ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದ್ದು, ವಿವಿಧ ಕ್ಷೇತ್ರಗಳ ಒಟ್ಟು 58 ಸಾಧಕರಿಗೆ ಪ್ರಶಸ್ತಿ ಪ್ರಕಟಗೊಂಡಿದೆ. ಸಂಕೀರ್ಣ ವಿಭಾಗದಲ್ಲಿ ಹರೇಕಳ ಹಾಜಬ್ಬ ಆಯ್ಕೆ ಗೊಂಡಿದ್ದಾರೆ. ಇವರು ಕಿತ್ತಳೆ ಹಣ್ಣು ಮಾರಿ ಶಾಲೆ ಕಟ್ಟುವ ಮೂಲಕ ಶೈಕ್ಷಣಿಕ ಕ್ರಾಂತಿಗೆ ಕಾರಣವಾಗಿದ್ದರು. ಉಡುಪಿ […]