ವಾಸ್ತವಿಕ ವಿಚಾರ, ಓದುಗರಲ್ಲಿ ಆಸಕ್ತಿ ಮೂಡಿಸುವ ಬರಹ ಇರಬೇಕು : ಡಾ| ಹೆಗ್ಗಡೆ

Saturday, January 4th, 2020
hegde

ಮಂಗಳೂರು : ಮಂಗಳೂರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕೆಯ ಜವಾಬ್ದಾರಿ ದೊಡ್ಡದು. ಸ್ಪರ್ಧಾತ್ಮಕ ಯುಗದಲ್ಲಿ ಪತ್ರಿಕೆ ಇರುವುದು ಉತ್ತಮ ವಿಚಾರ. ಸ್ಪರ್ಧೆಯಿಂದ ಪರಿಸ್ಕಾರ ಆಗುತ್ತದೆ. ಇಂದು ಪತ್ರಿಕೆಗಳಲ್ಲಿ ಭಾಷಣದ ವಿಷಯವನ್ನು ಕುತೂಹಲ ಆಸಕ್ತಿಯಿಂದ ಓದುವಂತಹ ವಿಷಯಗಳು ಪ್ರಕಟವಾಗುತ್ತದೆ ಆದರೆ ಪತ್ರಕರ್ತರು ಓದುಗರಿಗೆ ಮನದಟ್ಟು ಮಾಡುವಂತಹ ವರದಿಗಳನ್ನು ನೀಡುತ್ತಿದ್ದಾರೆ. ವಾಸ್ತವಿಕ ವಿಚಾರ ಮತ್ತು ಓದುಗರಲ್ಲಿ ಆಸಕ್ತಿ ಮೂಡಿಸುವ ಬರಹವಿದ್ದಾಗ ಓದುಗರ ಸಂಖ್ಯೆ ಹೆಚ್ಚಾಗುತ್ತದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಅವರು ಶನಿವಾರ ಧರ್ಮಸ್ಥಳದ ವಸಂತ […]

ಸಂವಿಧಾನ ತಿದ್ದುಪಡಿ ಹೇಳಿಕೆ… ಕೇಂದ್ರ ಸಚಿವ ಅತವಾಳೆ ಹೇಳಿದ್ದೇನು?

Monday, January 22nd, 2018
ramadas

ಮಂಗಳೂರು: ಸಂವಿಧಾನವೇ ಈ ದೇಶದ ಧರ್ಮಗ್ರಂಥ ಎಂದು ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ ಸಂವಿಧಾನ ತಿದ್ದುಪಡಿಯಂತಹ ವಿಚಾರಕ್ಕೆ ಕೇಂದ್ರ ಮುಂದಾಗದು ಎಂದು ಕೇಂದ್ರದ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್‌ ಅತವಾಳೆ ಹೇಳಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ ಭೇಟಿ ನಿಮಿತ್ತ ಮಂಗಳೂರಿಗೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಯಾರೂ ಕೂಡ ಸಂವಿಧಾನದ ಪೀಠಿಕೆಯನ್ನು(ಪ್ರಿಯಾಂಬಲ್) ಬದಲಿಸಲು ಸಾಧ್ಯವಿಲ್ಲ. ಆಯಾ ಕಾಲಘಟ್ಟಕ್ಕೆ ಸಂಬಂಧಿಸಿ ಸುಧಾರಣೆಯ ನೆಲೆಯಲ್ಲಿ ಸಂವಿಧಾನದಲ್ಲಿ ಕೆಲವೊಂದು ತಿದ್ದುಪಡಿಗಳಾಗಿವೆ. ಆದರೆ ಅದು ಸಂವಿಧಾನದ ಮೂಲ ಆಶಯಕ್ಕೆ […]

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ, ಮಂಜುನಾಥನ ದರ್ಶನ

Monday, October 30th, 2017
modi visit

ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥನ ದರ್ಶನ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಪಡೆದರು. ಬೆಳಗ್ಗೆ 10:40ರ ಸುಮಾರಿಗೆ ಮಂಗಳೂರು ಏರ್‌ಪೋರ್ಟ್‌ಗೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಮೇಯರ್‌ ಕವಿತಾ, ಸಚಿವ ಖಾದರ್‌ ಕೇಂದ್ರ ಸಚಿವ ಅನಂತ್‌ಕುಮಾರ್‌ ಹಾಗೂ ಬಿಜೆಪಿ ನಾಯಕರು ಆತ್ಮೀಯವಾಗಿ ಬರ ಮಾಡಿಕೊಂಡರು. ನಂತರ ಪ್ರಧಾನಿ ಹೆಲಿಕಾಪ್ಟರ್‌ ಮೂಲಕ ನೇರವಾಗಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಬಂದರು. ಬೆಳಗ್ಗೆ 10:40ರ ಸುಮಾರಿಗೆ ಮಂಗಳೂರು ಏರ್‌ಪೋರ್ಟ್‌ಗೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಮೇಯರ್‌ ಕವಿತಾ, ಸಚಿವ ಖಾದರ್‌ ಕೇಂದ್ರ ಸಚಿವ […]

ವೀರೇಂದ್ರ ಹೆಗ್ಗಡೆ ಪಟ್ಟಾಭಿಷೇಕ ವರ್ಧಂತ್ಯುತ್ಸವ

Friday, October 25th, 2013
hegde

ಧರ್ಮಸ್ಥಳ : ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ 46ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಾರಂಭ ಗುರುವಾರ ನೆರವೇರಿತು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು  ಮಾತನಾಡಿ ಅಧುನಿಕ ಜಗತ್ತಿನಲ್ಲಿ ಎಷ್ಟೇ ಪರಿವರ್ತನೆಗಳಾದರೂ ನಮ್ಮ ಮೂಲ ಧರ್ಮ ಮತ್ತು ಸಂಸ್ಕೃತಿಯ ರಕ್ಷಣೆ ಮಾಡಬೇಕು. ಈಗ ಜನರಲ್ಲಿ ಧಾರ್ಮಿಕತೆ, ಭಕ್ತಿ ಮತ್ತು ಶ್ರದ್ಧೆ ಹೆಚ್ಚಾಗಿದ್ದು, ಅನೇಕ ದೇವಾಲಯಗಳ ಹಾಗೂ ಶ್ರದ್ಧಾ ಕೇಂದ್ರಗಳ ಜೀರ್ಣೋದ್ಧಾರವಾಗಿ ಸಾನಿಧ್ಯ ವೃದ್ಧಿಯಾಗುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ. ನಮ್ಮ ಮೂಲಧರ್ಮ ಮತ್ತು ಸಂಸ್ಕೃತಿಯ ರಕ್ಷಣೆಯೇ ದೇವರ ಸೇವೆಯಾಗಿದೆ […]

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ರಾಜ್ಯಮಟ್ಟದ ವಸ್ತುಪ್ರದರ್ಶನ ಆರಂಭ

Monday, November 21st, 2011
lakhadeep

ಬೆಳ್ತಂಗಡಿ,: ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಏರ್ಪಡಿಸಿದ 34ನೇ ರಾಜ್ಯಮಟ್ಟದ ವಸ್ತುಪ್ರದರ್ಶನವನ್ನು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಭಾನುವಾರ ದ.ಕ. ಜಿಲ್ಲಾಧಿಕಾರಿ ಡಾ| ಎನ್‌.ಎಸ್‌. ಚನ್ನಪ್ಪ ಗೌಡ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಿರಿ ಸಂಸ್ಥೆಯ ಮೂಲಕ ವಿರೇಂದ್ರ ಹೆಗ್ಗಡೆಯವರು ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಚೈತನ್ಯ ತುಂಬುವ ಕಾರ್ಯ ನಡೆಯುತ್ತಿರುವುದು ಶ್ಲಾಘನೀಯ ಎಂದರು. ವಿದ್ಯಾ ಸಂಸ್ಥೆಗಳು ವ್ಯಾಪಾರಿ ಕ್ಷೇತ್ರವಾಗುತ್ತಿರುವ ಈ ದಿನಗಳಲ್ಲಿ ಶ್ರೀಕ್ಷೇತ್ರ ನೀಡುತ್ತಿರುವ ಶೈಕ್ಷಣಿಕ ಸೇವೆ ಅಮೂಲ್ಯ ಎಂದು ಹೇಳಿದರು, ಪ್ರತ್ಯಕ್ಷ, ಪರೋಕ್ಷವಾಗಿ ದೇವರನ್ನು ಸ್ಮರಿಸುವುದರಿಂದ ಉತ್ತಮ ಸಮಾಜ […]