ಪತ್ರಕರ್ತರ ಗ್ರಾಮ ವಾಸ್ತವ್ಯ‌ ಕಾರ್ಯಕ್ರಮ ರಾಜ್ಯಕ್ಕೆ ಮಾದರಿ-ಸ್ಪೀಕರ್ ಯು.ಟಿ.ಖಾದರ್

Monday, February 12th, 2024
Journalist

ಕೊಲ್ಲಮೊಗ್ರ: ತಮ್ಮ ಒತ್ತಡದ ಕೆಲಸದ ಮಧ್ಯೆಯೂ ಗ್ರಾಮ ವಾಸ್ಯವ್ಯ ಮಾಡಿ ಆ ಊರಿನ ಸಮಸ್ಯೆಗಳನ್ನು ಅರಿತು ಪರಿಹಾರಕ್ಕಾಗಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಪತ್ರಕರ್ತರು ಮಾಡಿದ ಗ್ರಾಮ ವಾಸ್ತವ್ಯ ರಾಜ್ಯಕ್ಕೆ ಮಾದರಿಯಾಗಿದೆ ಎಂದು ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯತ್, ದ.ಕ.ಪೊಲೀಸ್ ಇಲಾಖೆ, ಸುಳ್ಯ ತಾಲೂಕು ಆಡಳಿತ, ಹರಿಹರ, ಕೊಲ್ಲಮೊಗರು […]

ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ

Tuesday, November 21st, 2023
journalist-4th

ಮಂಗಳೂರು : ದಕ್ಷಿಣ‌ ಕನ್ನಡ ಜಿಲ್ಲೆಯ ಪತ್ರಕರ್ತರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ಮತ್ತು ಮಾದರಿಯನ್ನು ನೀಡಿದೆ ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನ.21 ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮ ವಾಸ್ತವ್ಯದ ಮೂಲಕ ಹಳ್ಳಿಯ ಜನರ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲುವ ಕೆಲಸ ಸೇರಿ […]

ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ(ರಿ)ಪದ್ಯಾಣ ಗೋಪಾಲಕೃಷ್ಣ ಹೆಸರಿನಲ್ಲಿ ನೀಡಲಾಗುತ್ತಿರುವ 2018ರ ಪ.ಗೋ ಪ್ರಶಸ್ತಿ ಪ್ರಧಾನ

Friday, March 23rd, 2018
dakshina-kannda

ಮಂಗಳೂರು: ಸಮಾಜದಲ್ಲಿ ಪತ್ರಕರ್ತರು ತುರ್ತು ಸಂದರ್ಭಗಳಲ್ಲಿ ಸೈನಿಕರಂತೆ, ಕೆಲವೊಮ್ಮೆ ಅವರಿಗೂ ಮುಂಚಿತವಾಗಿ ಸ್ಥಳಕ್ಕೆ ತಲುಪಿ ಕಾರ್ಯ ನಿರ್ವಹಿಸಿರುವುದನ್ನು ಗಮನಿಸಿರುವುದಾಗಿ ಎಂದು ಹಿರಿಯ ಪತ್ರಕರ್ತೆ ಅನಿತಾ ಪಿಂಟೋ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ(ರಿ) (ಪದ್ಯಾಣ ಗೋಪಾಲಕೃಷ್ಣ ) ಹೆಸರಿನಲ್ಲಿ ನೀಡಲಾಗುತ್ತಿರುವ 2018ರ ಪ.ಗೋ ಪ್ರಶಸ್ತಿಯನ್ನು ಪ್ರಶಾಂತ್ ಸುವರ್ಣ ಅವರಿಗೆ ನಗರದ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡ ಸಮಾರಂಭದಲ್ಲಿ ವಿತರಿಸಿ ಅವರು ಮಾತನಾಡುತ್ತಿದ್ದರು. ದೇಶದ ಗುಜರಾತ್‌ನಲ್ಲಿ ಸಂಭವಿಸಿದ ಭೀಕರ ಭೂಕಂಪ, ದಕ್ಷಿಣ ಭಾರತದಲ್ಲಿ ಸಂಭವಿಸಿದ ಸುನಾಮಿಯ […]

ಪ್ರಶಾಂತ್ ಎಸ್ ಸುವರ್ಣಗೆ ಪ.ಗೋ.ಪ್ರಶಸ್ತಿ

Saturday, March 10th, 2018
Prashanth-S-Suvarna

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2017ನೇ ಸಾಲಿನ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ‘ವಿಜಯವಾಣಿ’ ಪತ್ರಿಕೆಯ ವರದಿಗಾರ ಪ್ರಶಾಂತ್ ಎಸ್ ಸುವರ್ಣ ಸಿದ್ದಕಟ್ಟೆ ಆಯ್ಕೆಯಾಗಿದ್ದಾರೆ. 2017ರ ಜೂನ್ 03ರಂದು ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ “ಕೇಳಿಸದೆ ನಮ್ಮ ಕರುಳಿನ ಕೂಗು?” ಅವರ ಈ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ರೂ.10,001/ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯಕ್ ಇಂದಾಜೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.