ಶ್ಯಾಮಶಾಸ್ತ್ರಿ ಆತ್ಮಹತ್ಯೆ ಪ್ರಕರಣ: ಕಲ್ಲಡ್ಕ ಪ್ರಭಾಕರ್ ಭಟ್ಗೆ ನ್ಯಾಯಾಲಯದಿಂದ ವಾರಂಟ್
Saturday, October 6th, 2018ಪುತ್ತೂರು: 2014 ರಲ್ಲಿ ನಡೆದ ಶ್ಯಾಮಶಾಸ್ತ್ರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಬೋನಂತಾಯ ಶಿವಶಂಕರ ಭಟ್ ಅವರಿಗೆ ಪುತ್ತೂರು ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಲಯ ವಾರಂಟ್ ಜಾರಿ ಮಾಡಿದೆ. ಇದೇ ವೇಳೆ ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿ, ಅ.31 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ. ರಾಘವೇಶ್ವರ ಸ್ವಾಮೀಜಿ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದ ಮಹಿಳೆಯ ಪತಿಯ ಸಹೋದರ ಶ್ಯಾಮ್ ಪ್ರಸಾದ್ ಶಾಸ್ತ್ರಿ 2014 ರ ಆ.31ರಂದು […]