ತಂಬಾಕು ಉದ್ಯಮಗಳ ಕುತಂತ್ರದಿಂದ ಯುವ-ಪೀಳಿಗೆಗಳ ರಕ್ಷಣೆ ಮಾಡುವುದು, ವಿಶ್ವ ತಂಬಾಕು ರಹಿತ ದಿನದ ಧ್ಯೇಯ : ಶ್ರೀರಾಮುಲು

Sunday, May 31st, 2020
Sri-Ramulu

ಬೆಂಗಳೂರು : ಈ ವರ್ಷದ ವಿಶ್ವ ತಂಬಾಕು ರಹಿತ ದಿನದ ಧ್ಯೇಯ ವಾಕ್ಯವೆಂದರೆ, “ತಂಬಾಕು ಉದ್ಯಮಗಳ ಕುತಂತ್ರ ಹಾಗೂ ತಂಬಾಕು ಮತ್ತು ನಿಕೋಟಿನ್ ಬಳಕೆಯಿಂದ ಯುವ-ಪೀಳಿಗೆಗಳ ರಕ್ಷಣೆ ಮಾಡುವುದು” ಎಂದಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ತಿಳಿಸಿದರು. ಇಂದು ಅವರು ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಶ್ವ ತಂಬಾಕು ರಹಿತ ದಿನದ ಮುಖ್ಯ ಉದ್ದೇಶ ತಂಬಾಕು ಉತ್ಪನ್ನಗಳ ಸೇವನೆಯಿಂದಾಗುವ ದುಷ್ಪರಿಣಾಮಗಳು, ಸಾವು-ನೋವುಗಳು ವಿವಿಧ ಅಸಾಂಕ್ರಮಿಕ ಕಾಯಿಲೆಗಳಿಗೆ ತುತ್ತಾಗುವುದರ ಕುರಿತು […]

ಮಂಗಳೂರು : ಕೊರೊನಾ ವೈರಸ್ ಟೆಸ್ಟಿಂಗ್ ಲ್ಯಾಬ್

Tuesday, March 17th, 2020
corona testing

ಮಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಗಂಟಲಿನ ದ್ರವದ ಮಾದರಿ ಪರೀಕ್ಷೆಗಾಗಿ ಟೆಸ್ಟಿಂಗ್ ಲ್ಯಾಬ್ ತೆರೆಯಲು ಇಲಾಖೆ ನಿರ್ಧರಿಸಿದ್ದು, ಮಂಗಳೂರಿನಲ್ಲಿ ಅದಷ್ಟು ಬೇಗ ಕೊರೊನಾ ವೈರಸ್ ಲ್ಯಾಬ್ ತೆರೆಯಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಮಂಗಳೂರಿನಲ್ಲಿ ಕೊರೊನಾ ಶಂಕಿತರ ಗಂಟಲು ದ್ರವ ಪರೀಕ್ಷಾ ಲ್ಯಾಬ್ ತೆರೆಯಲು ಸರ್ಕಾರ ಒಪ್ಪಿಗೆ ನೀಡಿದೆ. ಶೀಘ್ರದಲ್ಲೇ ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಯಲ್ಲಿ […]

ಕೊರೊನಾ ವೈರಸ್‌ ಬಗ್ಗೆ ಆತಂಕ ಬೇಡ : ಶ್ರೀರಾಮುಲು, ಸುಧಾಕರ್‌

Tuesday, March 3rd, 2020
coronavirus

ಬೆಂಗಳೂರು : ಕೊರೊನಾ ಬಗ್ಗೆ ಯಾವುದೇ ಆತಂಕ ಬೇಡ. ರಾಜ್ಯ ಸರಕಾರ ಎಲ್ಲಾ ರೀತಿಯ ಎಚ್ಚರಿಕೆಗಳನ್ನು ಕೈಗೊಂಡಿದೆ ಎಂದು ಆರೋಗ್ಯ ಸಚಿವ ಶ್ರೀರಾಮಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ಸಂಬಂಧ ಜಂಟಿ ಸುದ್ದಿಗೋಷ್ಠಿ ನಡೆಸಿದ ಆರೋಗ್ಯ ಸಚಿವ ಶ್ರೀರಾಮಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಕೊರೊನಾ ಬಗ್ಗೆ ಯಾವುದೇ ಆತಂಕ ಬೇಡ. ಸರಕಾರ ಎಲ್ಲಾ ರೀತಿಯ ಎಚ್ಚರಿಕೆಗಳನ್ನು ಕೈಗೊಂಡಿದೆ. ವೈರಸ್ ಕಾಣಿಸಿಕೊಂಡ ತೆಲಂಗಾಣದ ವ್ಯಕ್ತಿಯ ಜೊತೆಗೆ ಕೆಲಸ ಮಾಡುತ್ತಿದ್ದ […]

ಬಿಜೆಪಿಯಲ್ಲಿ ಮೂಲ, ವಲಸಿಗ ಎಂಬುದೇ ಇಲ್ಲ : ಶ್ರೀರಾಮುಲು ಸ್ಪಷ್ಟನೆ

Thursday, February 6th, 2020
sriramulu

ಮಡಿಕೇರಿ : ಸಚಿವ ಸಂಪುಟ ಪುನರ್ ರಚನೆ ಕಸರತ್ತಿನ ಬಗ್ಗೆ ಮಡಿಕೇರಿಯಲ್ಲಿ ಪ್ರತಿಕ್ರಿಯಿಸಿದ ಸಚಿವ ಶ್ರೀರಾಮುಲು, ಮುಖ್ಯಮಂತ್ರಿಗಳು ಯಾವುದೇ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಮರ್ಥರಿದ್ದಾರೆ. ಈ ಮೊದಲೇ ಭರವಸೆ ನೀಡಿದ್ದಂತೆ ಗೆದ್ದ ಶಾಸಕರಿಗೆ ಮಂತ್ರಿ ಸ್ಥಾನ ನೀಡಲಾಗಿದೆ. ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಮೂಲ ಅಥವಾ ವಲಸಿಗ ಎಂಬುದೆಲ್ಲಾ ಬಿಜೆಪಿಯಲ್ಲಿ ಇಲ್ಲವೇ ಇಲ್ಲ. ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.  

ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ : ಬೇಡಿಕೆಗಳನ್ನು ಈಡೇರಿಸುವುದಾಗಿ ಸಚಿವ ಶ್ರೀರಾಮುಲು ಭರವಸೆ

Friday, January 3rd, 2020
sri-ramulu

ಬೆಂಗಳೂರು : ಬಹಳ ವರ್ಷಗಳಿಂದ ಬಾಕಿ ಇರುವ ಹಲವು ಬೇಡಿಕೆಗಳ ಈಡೇರಿಕೆಗಾಗಿ ಮತ್ತೆ ರಸ್ತೆಗಿಳಿದಿರುವ ರಾಜ್ಯದ ನಾನಾ ಜಿಲ್ಲೆಗಳ ಆಶಾ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರು ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ನತ್ತ ಹೊರಟ ಬೃಹತ್ ರ್ಯಾಲಿಯಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು. ‘ಗುಲಾಬಿ ತಂಡ’ದ 10 ಬೇಡಿಕೆಗಳಲ್ಲಿ 7 ಬೇಡಿಕೆಗಳನ್ನು ಈಡೇರಿಸುವುದಾಗಿ ಈಗಾಗಲೇ ಸರ್ಕಾರ ಭರವಸೆ ನೀಡಿದ್ದು, ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸ್ವಲ್ಪ ಮಟ್ಟಿಗಿನ ಜಯ ಸಿಕ್ಕಂತಾಗಿದೆ. ಹಾವೇರಿ, ರಾಯಚೂರು, ಹುಬ್ಬಳ್ಳಿ, ಹಿರೇಕೆರೂರು ಸೇರಿ […]

ವಿಜಯನಗರ ಪ್ರತ್ಯೇಕ ಜಿಲ್ಲೆ : ಸಿಎಂ ಬಿಎಸ್‍ವೈ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ; ಶ್ರೀರಾಮುಲು

Saturday, October 5th, 2019
sri-ramulu

ಬಳ್ಳಾರಿ : ವಿಜಯನಗರ ಜಿಲ್ಲೆ ಸ್ಥಾಪನೆ ವಿಚಾರದ ಬಗ್ಗೆ ಉಪಚುನಾವಣೆಯ ಬಳಿಕ ನಿರ್ಧಾರ ಮಾಡಲು ತೀರ್ಮಾನ ಮಾಡಲಾಗಿದ್ದು, ನಾನು ಪಕ್ಷ ಹಾಗೂ ಸಿಎಂ ಬಿಎಸ್‍ವೈ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಪಕ್ಷದ ಪರ ಯಾರೇ ಅಭ್ಯರ್ಥಿಗಳಾದರೂ ನಾನು ಅವರ ಪರವಾಗಿ ಕೆಲಸ ಮಾಡುವೆ. ಸಚಿವನಾಗಿ ಸರ್ಕಾರದ ಭಾಗವಾಗಿರುವುದರಿಂದ ಸಿಎಂ ಹೇಳಿದಂತೆ ಕೆಲಸ ಮಾಡುವೆ. ಜಿಲ್ಲೆಯ ವಿಭಜನೆಯ ಬಗ್ಗೆಯೂ ಈಗಾಗಲೇ ಸಿಎಂ ಅವರೊಂದಿಗೆ ಚರ್ಚೆ ನಡೆಸಿ […]

ಉಡುಪಿ : ಜಿಲ್ಲಾಸ್ಪತ್ರೆಯಲ್ಲಿ ಸಚಿವ ಶ್ರೀರಾಮುಲು ರೋಗಿಗಳ ಆರೋಗ್ಯ ವಿಚಾರಣೆ

Saturday, September 28th, 2019
sri-ramulu

ಉಡುಪಿ : ಅಜ್ಜರಕಾಡು ಸರಕಾರಿ ಆಸ್ಪತ್ರೆಯ ಸಾಮರ್ಥ್ಯವನ್ನು 250 ಬೆಡ್‌ಗಳಿಗೆ ಏರಿಸಿ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಶುಕ್ರವಾರ ಆಸ್ಪತ್ರೆಯಲ್ಲಿ ವಾಸ್ತವ್ಯಕ್ಕಾಗಿ ಆಗಮಿಸಿದ ಸಂದರ್ಭ ಅವರು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. 2009 ರಲ್ಲಿ ಇದು ತಾಲೂಕು ಆಸ್ಪತ್ರೆಯಾಗಿದ್ದಾಗ ಆರೋಗ್ಯ ಸಚಿವನಾಗಿ ಭೇಟಿ ನೀಡಿದ್ದೆ. ಜಿಲ್ಲಾಸ್ಪತ್ರೆ ದರ್ಜೆಗೇರಿಸಲು ಪ್ರಯತ್ನ ನಡೆಸಿದ್ದೆ. ಉನ್ನತ ಮಟ್ಟದ ಸಮಿತಿಯ ಒಪ್ಪಿಗೆ ದೊರೆತು, ಘೋಷಣೆ ಆಗಿತ್ತು. ಆದರೆ ಅನಂತರ ಅಗತ್ಯ ಸೌಕರ್ಯ ಕೊಡಲು ಸಾಧ್ಯವಾಗಲಿಲ್ಲ. […]

ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ ಸಚಿವ ಬಿ. ಶ್ರೀರಾಮುಲು ವಾಸ್ತವ್ಯ

Thursday, September 26th, 2019
sri-ramulu

ಉಡುಪಿ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ಸೆ. 27ರಂದು ಉಡುಪಿಯ ಅಜ್ಜರಕಾಡು ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸಂಜೆ 6ಕ್ಕೆ ಜಿಲ್ಲಾಸ್ಪತ್ರೆಗೆ ಆಗಮಿಸಿ ಕುಂದುಕೊರತೆ ಪರಿಶೀಲಿಸಲಿದ್ದಾರೆ. ಬಳಿಕ ಆಸ್ಪತ್ರೆಯಲ್ಲಿ ವಾಸ್ತವ್ಯ ಇರಲಿದ್ದಾರೆ. 1962ರಲ್ಲಿ ಸಬ್‌ ಡಿವಿಷನ್‌ ಆಸ್ಪತ್ರೆಯಾಗಿ ಆರಂಭಗೊಂಡ ಅಜ್ಜರಕಾಡು ಆಸ್ಪತ್ರೆ ವಾಸ್ತವವಾಗಿ ಇಂದಿಗೂ ಜಿಲ್ಲಾಸ್ಪತ್ರೆ ದರ್ಜೆಯ ಸೌಲಭ್ಯ ಹೊಂದಿಲ್ಲ. 1997ರಲ್ಲಿ ಉಡುಪಿ ಜಿಲ್ಲೆ ರಚನೆಯಾದ ಬಳಿಕ ನಾಮಫಲಕದಲ್ಲಿ ಮಾತ್ರ ಜಿಲ್ಲಾಸ್ಪತ್ರೆ ಎಂದಿದೆ. ಸೌಲಭ್ಯಗಳು ತಾಲೂಕು ಮಟ್ಟದ್ದಾಗಿಯೇ ಇವೆ. ದಾನಿಗಳ […]

ಶ್ರೀರಾಮುಲುಗೆ “ಕೈ” ತಪ್ಪಿದ ಡಿಸಿಎಂ ಹುದ್ದೆ, ಕೊಪ್ಪಳದಲ್ಲಿ ಬೆಂಕಿ

Tuesday, August 27th, 2019
sriramulu

ಕೊಪ್ಪಳ : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದ ಬೆನ್ನಲ್ಲೇ ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಹುದ್ದೆ ಕೈತಪ್ಪಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ಶ್ರೀರಾಮುಲು ಅಭಿಮಾನಿಗಳು ಕೊಪ್ಪಳ, ಬಳ್ಳಾರಿಯಲ್ಲಿ ಬೆಂಕಿಹಚ್ಚಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳವಾರ ಕೊಪ್ಪಳದ ಕನಕಗಿರಿಯಲ್ಲಿ ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಶ್ರೀರಾಮುಲುಗೆ ಡಿಸಿಎಂ ಹುದ್ದೆ ನೀಡದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್, ಬಿಜೆಪಿ ವರಿಷ್ಠ ಅಮಿತ್ ಶಾ ಅವರ ಭಾವಚಿತ್ರಕ್ಕೆ ಬೆಂಕಿಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಶ್ರೀರಾಮುಲು […]

ಕಾಂಗ್ರೆಸ್‌‌ ಮನವೊಲಿಸಲಿ ಬಿಡಲಿ ಗೊತ್ತಿಲ್ಲ, ಸಾಲ ಮನ್ನಾ ಮಾತ್ರ ಮಾಡಲಿ: ಶ್ರೀರಾಮುಲು

Thursday, May 24th, 2018
shri-ramulu

ಬಳ್ಳಾರಿ: ತೃತೀಯ ರಂಗ ಕಟ್ಟಲು‌‌ ಹೊರಟಿದ್ದಾರೆ‌ ಹೊರತು ಅದು ಯುಪಿಎ ಒಗ್ಗಟ್ಟಲ್ಲ. ಮೋದಿ ಹೋರಾಟ ನಿಲ್ಲಿಸಬೇಕೆಂದು ಎಲ್ಲರು ಒಂದಾಗಿದ್ದಾರೆ ಹಾಗೂ ತೃತೀಯ ರಂಗ ಕಾಂಗ್ರೆಸ್ ವಿರುದ್ಧ ಇದೆ ಎಂದು ಶ್ರೀರಾಮುಲು ಹೇಳಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಮಾಣ ವಚನ ಕಾರ್ಯಕ್ರಮದಲ್ಲಿ ತೃತೀಯ ರಂಗ ರಚನೆಗೆ ಅಷ್ಟೊಂದು ‌ನಾಯಕರು ಬಂದಿದ್ರು. ಅದು ಕಾಂಗ್ರೆಸ್ ಅವನತಿಯ ಮೊದಲ ಮೆಟ್ಟಿಲು. ತೃತೀಯ ರಂಗದಲ್ಲಿ ಕಾಂಗ್ರೆಸ್ ಬೇರೆ ಎಂದು‌ ಮಮತಾ ಬ್ಯಾನರ್ಜಿ ಹೇಳಿದ್ದಾರೆ ಎಂದು ಹೇಳಿದರು. ಪ್ರಾದೇಶಿಕ ‌ಹಿತಾಸಕ್ತಿಗಾಗಿ ಹೋರಾಟವಿದು. ಮಳೆಗಾಲದಲ್ಲಿ […]