ಕೊಡಗು ಜಿಲ್ಲೆಯಾದ್ಯಂತ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀಸುಬ್ರಹ್ಮಣ್ಯ ಷಷ್ಠಿ

Tuesday, December 3rd, 2019
shashti

ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ವಿವಿಧ ದೇವಾಲಯಗಳಲ್ಲಿ ಶ್ರೀಸುಬ್ರಹ್ಮಣ್ಯ ಷಷ್ಠಿ ಶ್ರದ್ಧಾಭಕ್ತಿಯಿಂದ ನಡೆಯಿತು. ನಗರದ ಇತಿಹಾಸ ಪ್ರಸಿದ್ಧ ಶ್ರೀಓಂಕಾರೇಶ್ವರ ದೇವಾಲಯದಲ್ಲಿ ಶ್ರೀಸುಬ್ರಹ್ಮಣ್ಯ ದೇವರಿಗೆ ಅಭಿಷೇಕ, ಅಲಂಕಾರ, ಅರ್ಚನೆ ಸೇರಿದಂತೆ ವಿವಿಧ ಪೂಜಾ ವಿಧಿ ವಿಧಾನಗಳು ಬೆಳಗ್ಗೆಯಿಂದಲೇ ನಡೆಯಿತು. ಮಹಾಪೂಜೆ ಮತ್ತು ಮಹಾಮಂಗಳಾರತಿ ಸಂದರ್ಭ ಸಾವಿರಾರು ಭಕ್ತರು ಶ್ರದ್ಧಾಭಕ್ತಿಯನ್ನು ಮೆರೆದರು. ಭಕ್ತಾಧಿಗಳಿಗೆ ಅನ್ನದಾನದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಬ್ರಾಹ್ಮಣರ ಬೀದಿಯ ಅಶ್ವತ್ಥ ಕಟ್ಟೆಯಲ್ಲೂ ನಾಗಾರಾಧನೆ ನಡೆಯಿತು. ಭಕ್ತರು ಅಭಿಷೇಕ ಮತ್ತು ವಿಶೇಷ ಪೂಜೆ ಸಲ್ಲಿಸಿದರು. ಕೂಡಿಗೆಯಲ್ಲಿ ರಥೋತ್ಸವ ಶ್ರೀಸುಬ್ರಹ್ಮಣ್ಯ ಷಷ್ಠಿ […]