ಮಡಿಕೇರಿ : ಮಡಿಕೇರಿ ನಗರದ ಶ್ರೀ ಓಂಕಾರೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಅಂಗವಾಗಿ ದೇವಾಲಯದ ಮುಂಭಾಗದಲ್ಲಿರುವ ಕಲ್ಯಾಣಿಯಲ್ಲಿ ತೆಪ್ಪೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಸಂಜೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ತೆಪ್ಪೋತ್ಸವ ಮತ್ತು ವಿಶೇಷ ಪೂಜೆ ಕೂಡ ಜರುಗಿತು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.