ಎಫ್ಐಆರ್ ರದ್ದು ಕೋರಿ ಅರ್ಜುನ್ ಸರ್ಜಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ
Wednesday, October 31st, 2018ಮಂಗಳೂರು: ಶ್ರುತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ಮಿ ಟೂ ಪ್ರಕರಣದ ಕಾವು ಪ್ರತಿದಿನ ಹೆಚ್ಚಾಗುತ್ತಲೇ ಇದೆ. ಈ ಸಂಬಂಧ ಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿದೆ. ಇನ್ನು ತನ್ನ ವಿರುದ್ಧದ ಎಫ್ಐಆರ್ ರದ್ದು ಕೋರಿ ಅರ್ಜುನ್ ಸರ್ಜಾ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರಕ್ಕೆ ಮುಂದೂಡಿದೆ. ಇಂದೇ ವಿಚಾರಣೆ ನಡೆಸಲು ಅರ್ಜುನ್ ಪರ ವಕೀಲ ಬಿ.ವಿ. ಆಚಾರ್ಯ ಮೆಮೋ ಸಲ್ಲಿಸಿ ಮನವಿ ಮಾಡಿದ್ದರು. ಆದರೆ, ಹೈಕೋರ್ಟ್ ನ್ಯಾಯಮೂರ್ತಿ ಪಿ.ದಿನೇಶ್ ಕುಮಾರ್ ಅರ್ಜಿ ವಿಚಾರಣೆಯನ್ನು ನವೆಂಬರ್ 2ಕ್ಕೆ ಮುಂದೂಡಿದ್ದಾರೆ.