ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಷಷ್ಠಿ ಉತ್ಸವ

Wednesday, December 7th, 2016
car-festival-in-kudupu

ಕುಡುಪು: ದಕ್ಷಿಣ ಭಾರತದ ಪ್ರಸಿದ್ಧ ನಾಗಾರಾಧನ ಕ್ಷೇತ್ರಗಳಲ್ಲಿ ಒಂದಾಗಿರುವ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನ ಸಹಿತ ನಗರದ ಆಸುಪಾಸಿನ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಮವಾರ ಷಷ್ಠಿ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಜಪ್ಪಿನಮೊಗರು ಕಡೆಕಾರು ಶ್ರೀ ಮಲ್ಲಿಕಾರ್ಜುನ ದೇವಸ್ಥಾನ, ಮೂಡಬಿದಿರೆ ಸಮೀಪದ ಕಡಂದಲೆ ಸುಬ್ರಹ್ಮಣ್ಯ ದೇವಸ್ಥಾನ, ಹಳೆಯಂಗಡಿ ಸಮೀಪದ ತೋಕೂರು ಸುಬ್ರಹ್ಮಣ್ಯ ದೇವಸ್ಥಾನ, ಕಿಲ್ಪಾಡಿ ಕುಮಾರಮಂಗಲ ದೇವಸ್ಥಾನ, ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಸ್ಥಾನದಲ್ಲೂ ಷಷ್ಠಿ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ಜರಗಿದವು. ಕುಡುಪು ದೇವಸ್ಥಾನದಲ್ಲಿ ಷಷ್ಠಿ ಬ್ರಹ್ಮರಥೋತ್ಸವ ಸೋಮವಾರ […]