ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಲಘು ಹೃದಯಾಘಾತ

Thursday, February 27th, 2020
arjun-janya

ಬೆಂಗಳೂರು : ಸಂಗೀತ‌‌‌ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಲಘು ಹೃದಯಾಘಾತವಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ಅವರು‌ ಬೋಗಾದಿಯಲ್ಲಿರುವ ವಿಲ್ಲಾದಲ್ಲಿ ತಂಗಿದ್ದರು. ಮಧ್ಯರಾತ್ರಿ ಎದೆನೋವು ಕಾಣಿಸಿಕೊಂಡಿದ್ದು ಆ ಕೂಡಲೇ‌ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಾಣಾಪಾಯದಿಂದ‌ ಅವರು ಪಾರಾಗಿದ್ದಾರೆ ಎಂದು ಜನ್ಯ ತಿಳಿದು ಬಂದಿದೆ. ಸ್ಯಾಂಡಲ್‌ವುಡ್‌ನ ಪ್ರಖ್ಯಾತ ಸಂಗೀತ ನಿರ್ದೇಶಕರಾಗಿರುವ ಅರ್ಜುನ್‌ ಜನ್ಯ, ಖಾಸಗಿ ವಾಹಿನಿಗಳಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋಗಳ ತೀರ್ಪುಗಾರರೂ ಕೂಡಾ ಆಗಿದ್ದಾರೆಎ. ಹಾಗೆಯೇ ತಮ್ಮದೇ ಆದ ಶೈಲಿಯಲ್ಲಿ ಹಲವಾರು ಚಿತ್ರಗಳ ಹಾಡಿಗೆ ಧ್ವನಿಯಾಗಿದ್ದಾರೆ. […]

ಸಂಗೀತ ನಿರ್ದೇಶಕ ಗುರುಕಿರಣ್‌ಗೆ ಕೆಂಪೇಗೌಡ ಪ್ರಶಸ್ತಿ

Wednesday, May 3rd, 2017
Guru Kiran

ಮಂಗಳೂರು  :  ಚಿತ್ರರಂಗಕ್ಕೆ ಹಲವಾರು ಖ್ಯಾತನಾಮರನ್ನು ಕೊಟ್ಟಿರುವ ತುಳುನಾಡಿನ ಓರ್ವ ಪ್ರಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ಈ ಬಾರಿ ಅತ್ಯಂತ ಪ್ರತಿಷ್ಠಿತ ಕೆಂಪೇಗೌಡ ಪ್ರಶಸ್ತಿ ಲಭಿಸುವ ಮೂಲಕ ಅವರ ಪ್ರತಿಭೆಗೆ ಹೊಸದೊಂದು ಮನ್ನಣೆ ಸಿಕ್ಕಂತಾಗಿದೆ. ಈಗಾಗಲೇ ಮೂರು ಬಾರಿ ಫಿಲಂಫೇರ್ ಪ್ರಶಸ್ತಿಗೆ ಭಾಜನರಾಗಿರುವ ಅವರು ರಾಜ್ಯ ಪ್ರಶಸ್ತಿಯನ್ನೂ ಗಳಿಸಿದ್ದಾರೆ. ಈಗ ಕೆಂಪೇಗೌಡ ಪ್ರಶಸ್ತಿ ಸಂದಿರುವುದು ಆ ಸಾಲಿಗೆ ಮತ್ತೊಂದು ಸೇರ್ಪಡೆ. ಅತ್ಯಂತ ಯಶಸ್ವಿ ಸಂಗೀತ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ಗುರುಕಿರಣ್ ಅವರು ಹಲವಾರು ಟೀವಿ ರಿಯಾಲಿಟಿ […]

ಸಂಗೀತ ನಿರ್ದೇಶಕ ಗುರುಕಿರಣ್‌ಗೆ ಪಿತೃ ವಿಯೋಗ

Wednesday, March 9th, 2016
Jayaram Shetty

ಮಂಗಳೂರು : ಭಾರತೀಯ ವಾಯು ಸೇನೆಯಲ್ಲಿ ಕಾರ್ಯನಿರ್ವಹಿಸಿದ ಕಲ್ಲಾರೆ ಜಯರಾಮ್ ಶೆಟ್ಟಿ (84) ಅಲ್ಪಕಾಲದ ಅಸೌಖ್ಯದಿಂದ ಕದ್ರಿಯ ತನ್ನ ಮನೆಯಲ್ಲಿ ನಿಧನರಾಗಿದ್ದಾರೆ. ಅವರು ಭಾರತೀಯ ವಾಯು ಸೇನೆಯಲ್ಲಿ ಮೂವತ್ತೈದು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದಾರೆ. ಪತ್ನಿ ರತ್ನಕಾಂತಿ, ನಾಲ್ವರು ಗಂಡುಮಕ್ಕಳನ್ನು ಅಗಲಿದ್ದಾರೆ. ಇವರ ಮೊದಲ ಮಗ ಶಿವಶರಣ್ ಶೆಟ್ಟಿ ಖಾಸಗಿ ಸುದ್ದಿವಾಹಿನಿ ‘ನಮ್ಮಟಿವಿ’ಯ ಮಾಲೀಕರಾದರೆ, ಗುರುಕಿರಣ್ ಸಂಗೀತ ನಿರ್ದೇಶಕ, ದೇವಿಚರಣ್ ಉದ್ಯಮಿಯಾದರೆ, ಹರಿಚರಣ್ ಶಿಕ್ಷಣ ಸಂಸ್ಥೆಯಯನ್ನು ನಡೆಸುತ್ತಿದ್ದಾರೆ.

ಡಾ. ಅಬ್ದುಲ್ ಕಲಾಂ ನಿಧನಕ್ಕೆ ವೀರೇಂದ್ರ ಹೆಗ್ಗಡೆಯವರ ಸಂತಾಪ

Tuesday, July 28th, 2015
Kalam

ಮಂಗಳೂರು : ನಮ್ಮ ರಾಷ್ಟ್ರದ ಮೇರು ವ್ಯಕ್ತಿತ್ವದ ಡಾ. ಅಬ್ದುಲ್ ಕಲಾಂ ಅವರು ಸರ್ವಮಾನ್ಯರು, ಅಜಾತ ಶತ್ರು. ಅವರು ಜ್ಞಾನ ಮತ್ತು ವಿಜ್ಞಾನ ಎರಡರಲ್ಲೂ ಸಾಟಿ ಇಲ್ಲದಂತೆ ಮೆರೆದವರು. ಒಂದು ಕ್ಷಣವೂ ಪೋಲಾಗದಂತೆ ಹಾಗೂ ವ್ಯರ್ಥವಾಗದಂತೆ ಬದುಕಿದವರು. ಅವರು ಆಯುಷ್ಯವನ್ನು ಸಂಪೂರ್ಣವಾಗಿ ಬಳಸಿಕೊಂಡದಲ್ಲದೆ, ಸದುಪಯೋಗ ಪಡಿಸಿಕೊಂಡಿದ್ದಾರೆ. ಕರ್ನಾಟಕ ರಾಜ್ಯಕ್ಕೂ ಆಗಾಗ ಭೇಟಿ ಕೊಡುತ್ತಾ ಕನ್ನಡಿಗರ ಸ್ನೇಹಾಕಾಂಕ್ಷಿಗಳಾಗಿದ್ದರು. ಶ್ರೀ ಕ್ಷೇತ್ರದ ಮೇಲೆ ಅವರಿಗೆ ವಿಶೇಷ ಅಭಿಮಾನ ಹಾಗೂ ಗೌರವನ್ನು ಹೊಂದಿದ್ದರು. ಅವರ ನಿಧನದಿಂದ ಶತಮಾನದ ಶ್ರೇಷ್ಠ ವ್ಯಕ್ತಿಯೋರ್ವ ರನ್ನು […]