ಕುಂಬ್ಳೆ ಶ್ರೀಧರ ರಾವ್ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ

Friday, July 5th, 2024
Kumble-Sridhar-Rao

ಉಜಿರೆ : ನಮ್ಮ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹಿರಿಯ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದ್ದಾರೆ. ಆತ ನಾನು ಮೆಚ್ಚಿದ ಶ್ರೇಷ್ಠ ಕಲಾವಿದರಾಗಿದ್ದು, ಕೇರಳ ಮೂಲದವರಾದರೂ, ಸ್ಪಷ್ಟ ಉಚ್ಛಾರ, ಭಾಷಾಶುದ್ಧಿ ಹಾಗೂ ಪಾತ್ರಗಳಿಗೆ ಜೀವತುಂಬುವ ಕಲೆ ಅವರಲ್ಲಿ ಅದ್ಭುತವಾಗಿತ್ತು. ನೃತ್ಯ, ಅಭಿನಯ ಮತ್ತು ಉತ್ತಮ ವಾಕ್ಪಟುತ್ವದೊಂದಿಗೆ ಅವರು ಕಲಾಭಿಮಾನಿಗಳ ಮುಕ್ತ ಪ್ರಶಂಸೆಗೆ ಪಾತ್ರರಾಗಿದ್ದರು. ಅವರ ನಿಧನದಿಂದ ಶ್ರೇಷ್ಠ ಯಕ್ಷಗಾನ ಕಲಾವಿದರೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು […]

ಡಾ. ಸುಧೀಂದ್ರ ಹಾಲ್ದೊಡ್ಡೇರಿ ನಿಧನಕ್ಕೆ ಗಣ್ಯರ ಸಂತಾಪ

Friday, July 2nd, 2021
haldodderi-sudhindra

ಬೆಂಗಳೂರು  : ಖ್ಯಾತ ವಿಜ್ಞಾನ ಬರಹಗಾರ ಹಾಲ್ದೊಡ್ಡೇರಿ ಸುಧೀಂದ್ರ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕನ್ನಡದಲ್ಲಿ ವಿಜ್ಞಾನ ವಿಷಯಗಳನ್ನು ಮನೋಜ್ಞವಾಗಿ ಬರೆಯುತ್ತಿದ್ದ ಕೆಲವೇ ಬರಹಗಾರರಲ್ಲಿ ಒಬ್ಬರಾಗಿದ್ದರು. ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಅಗಲುವಿಕೆಯ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಸಚಿವರಾದ ಕೆ.ಎಸ್.ಈಶ್ವರಪ್ಪರವರ ತೀವ್ರ ಶೋಕ ಕನ್ನಡದ ಖ್ಯಾತ ಬರಹಗಾರ, ಅಂಕಣಕಾರ, ವಿಜ್ಞಾನಿ ಡಾ.ಸುಧೀಂದ್ರ ಹಾಲ್ದೊಡ್ಡೇರಿ  ನಿಧನಕ್ಕೆ, […]

ಡಾ. ಅಬ್ದುಲ್ ಕಲಾಂ ನಿಧನಕ್ಕೆ ವೀರೇಂದ್ರ ಹೆಗ್ಗಡೆಯವರ ಸಂತಾಪ

Tuesday, July 28th, 2015
Kalam

ಮಂಗಳೂರು : ನಮ್ಮ ರಾಷ್ಟ್ರದ ಮೇರು ವ್ಯಕ್ತಿತ್ವದ ಡಾ. ಅಬ್ದುಲ್ ಕಲಾಂ ಅವರು ಸರ್ವಮಾನ್ಯರು, ಅಜಾತ ಶತ್ರು. ಅವರು ಜ್ಞಾನ ಮತ್ತು ವಿಜ್ಞಾನ ಎರಡರಲ್ಲೂ ಸಾಟಿ ಇಲ್ಲದಂತೆ ಮೆರೆದವರು. ಒಂದು ಕ್ಷಣವೂ ಪೋಲಾಗದಂತೆ ಹಾಗೂ ವ್ಯರ್ಥವಾಗದಂತೆ ಬದುಕಿದವರು. ಅವರು ಆಯುಷ್ಯವನ್ನು ಸಂಪೂರ್ಣವಾಗಿ ಬಳಸಿಕೊಂಡದಲ್ಲದೆ, ಸದುಪಯೋಗ ಪಡಿಸಿಕೊಂಡಿದ್ದಾರೆ. ಕರ್ನಾಟಕ ರಾಜ್ಯಕ್ಕೂ ಆಗಾಗ ಭೇಟಿ ಕೊಡುತ್ತಾ ಕನ್ನಡಿಗರ ಸ್ನೇಹಾಕಾಂಕ್ಷಿಗಳಾಗಿದ್ದರು. ಶ್ರೀ ಕ್ಷೇತ್ರದ ಮೇಲೆ ಅವರಿಗೆ ವಿಶೇಷ ಅಭಿಮಾನ ಹಾಗೂ ಗೌರವನ್ನು ಹೊಂದಿದ್ದರು. ಅವರ ನಿಧನದಿಂದ ಶತಮಾನದ ಶ್ರೇಷ್ಠ ವ್ಯಕ್ತಿಯೋರ್ವ ರನ್ನು […]

ಕೆ.ಎನ್. ಟೇಲರ್ ನಿಧನ: ಸಚಿವರ ಸಂತಾಪ

Wednesday, March 18th, 2015
kn tailor

ಮಂಗಳೂರು : ಹಿರಿಯ ತುಳು ನಾಟಕಕಾರ ಕೆ.ಎನ್.ಟೇಲರ್ ಅವರ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ತುಳು ಚಿತ್ರರಂಗದಲ್ಲಿ 10 ಚಲನಚಿತ್ರಗಳನ್ನು ನಿರ್ಮಾಣ ಮಾಡಿ, ನಿರ್ದೇಶಿಸಿ, ನಾಯಕನಾಗಿ ನಟಿಸಿ ಎಪ್ಪತ್ತು, ಎಂಬತ್ತರ ದಶಕದಲ್ಲಿ ತುಳು ಚಿತ್ರರಂಗದ ರಾಜ್‍ಕುಮಾರ್ ಎಂದು ಕರೆಸಿಕೊಂಡಿದ್ದ ಕೆ.ಎನ್.ಟೈಲರ್ (76) ಅವರು ಬುಧವಾರ ಮಂಗಳೂರಿನ ವಿನಯ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕಳೆದ ಕೆಲ ದಿನಗಳಿಂದ ಆನಾರೋಗ್ಯ ಪೀಡಿ ತರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫ‌ಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕನ್ನಡ ಚಿತ್ರರಂಗದ ಮೇರು ನಟ ನಟಿಯರಾದ […]

ಅನಂತಮೂರ್ತಿಯವರ ನಿಧನಕ್ಕೆ ವೀರೇಂದ್ರ ಹೆಗ್ಗಡೆ ಸಂತಾಪ

Saturday, August 23rd, 2014
Veerendra Heggade

ಧರ್ಮಸ್ಥಳ : ಖ್ಯಾತ ಸಾಹಿತಿ ಶ್ರೀ ಯು. ಆರ್. ಅನಂತಮೂರ್ತಿಯವರ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಗಾಢ ಸಂತಾಪ ವ್ಯಕ್ತ ಪಡಿಸಿದ್ದಾರೆ. ಅವರು ಕ್ಷೇತ್ರದ ಅಭಿಮಾನಿಯಾಗಿದ್ದು ಲಕ್ಷದೀಪೋತ್ಸವ ಸಂದರ್ಭದಲ್ಲಿ ನಡೆದ ಸಾಹಿತ್ಯ ಸಮ್ಮೇಳನ ಹಾಗೂ 51 ನೇ ರಾಜ್ಯಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಧರ್ಮ, ಸಾಹಿತ್ಯ ಹಾಗೂ ಇತರ ಸಾಮಾಜಿಕ ವಿಚಾರಗಳ ಬಗ್ಗೆ ಅವರು ನೇರವಾಗಿ ಹಾಗೂ ಅಷ್ಟೇ ಖಾರವಾಗಿ ತಮ್ಮ ಅಭಿಪ್ರಾಯವನ್ನು ಸಾದರ ಪಡಿಸುತ್ತಿದ್ದರು. ಧರ್ಮಸ್ಥಳದ ವಿವಿಧ ಸೇವಾಕಾರ್ಯಗಳ ಬಗ್ಗೆ […]

ನದಿಗೆ ಆಟವಾಡಲು ಹೋಗಿದ್ದ ನಾಲ್ವರು ಬಾಲಕರು ನೀರು ಪಾಲು

Monday, January 9th, 2012
Childrens Died

ಬೆಳ್ತಂಗಡಿ :  ರವಿವಾರದ ರಜಾ ಪ್ರಯುಕ್ತ ಮನೆ ಸಮೀಪದ ನದಿಗೆ ಸಂಜೆ ಆಟವಾಡಲು ಹೋಗಿದ್ದ ನಾಲ್ವರು ಬಾಲಕರು  ಸುದೇಮುಗೇರು ಎಂಬಲ್ಲಿ  ನೀರು ಪಾಲಾದ ಘಟನೆ ವರದಿಯಾಗಿದೆ. ಕೇವಲ ಆರಡಿಯಷ್ಟು ನೀರು ನಾಲ್ವರು ಮಕ್ಕಳ ಪ್ರಾಣವನ್ನು ಬಲಿತೆಗೆದು ಕೊಂಡಿದೆ. ಲಾರಿ ನಿಲ್ಲಿಸಿ ಮರಳು ತೆಗೆಯುವ ಸ್ಥಳದಲ್ಲಿ ನೀರಿದ್ದರೂ ನಡೆದಾಡುವಷ್ಟು ಆಳದ ದಾರಿ ಇದೆ.  ರಜಾದ ಮಜಾ ಅನುಭವಿಸಲು ಈ ಮಕ್ಕಳು ಅಪರಾಹ್ನ ಸುಮಾರು 3.30ರ ವೇಳೆಗೆ ನದಿಗೆ ತೆರಳಿದ್ದರು. ಮನೆಯಿಂದ ಸುಮಾರು ಅರ್ಧ ಕಿ.ಮೀ. ದೂರದಲ್ಲಿ ಆಟವಾಡುತ್ತಿದ್ದರು.  3.45ರ ವೇಳೆಗೆ ಮಕ್ಕಳು ಕಾಣೆಯಾಗಿರುವುದು ಬೆಳಕಿಗೆ […]