ದ.ಕ. ಜಿಲ್ಲೆಯಲ್ಲಿ ಮೇ 7 ರಿಂದ ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಮ, ಮೇ 15ರ ಬಳಿಕ ಸಂಪೂರ್ಣ ಬಂದ್
Thursday, May 6th, 2021ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮೇ 7 ರಿಂದ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲು ಜಿಲ್ಲಾಡಳಿತ ಮುಂದಾಗಿದ್ದು, ಈ ಅವಧಿಯಲ್ಲಿ ಅಗತ್ಯ ಸೇವೆಗಳು ಬೆಳಿಗ್ಗೆ 6 ರಿಂದ 9 ರವರೆಗೆ ಮಾತ್ರ ಲಭ್ಯವಿದೆ ಮತ್ತು ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರಲಿದೆ. ಮೇ 15ರ ಬಳಿಕ ಮದುವೆ ಸಮಾರಂಭಗಳಿವೆ ಅವಕಾಶವಿಲ್ಲ ಎಂದು ಜಿಲ್ಲಾಡಳಿತದ ಗುರುವಾರದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಶನಿವಾರ ಹಾಗೂ ರವಿವಾರದಂದು ಜಿಲ್ಲೆಯಲ್ಲಿ ಕರ್ಫ್ಯೂ ಜಾರಿಯಲ್ಲಿರಲಿದ್ದು, ಎಲ್ಲಾ ಚಟುವಟಿಕೆಗಳು ಸ್ತಬ್ಧವಾಗಿರಲಿವೆ. ಈ ಅವಧಿಯಲ್ಲಿ ಆಸ್ಪತ್ರೆಗಳು ಹಾಗೂ ಮೆಡಿಕಲ್ ಗಳ ಸೇವೆ ಲಭ್ಯ ಇರಲಿದೆ. […]