ಕೆತ್ತಿಕ್ಕಲ್‌ನಲ್ಲಿ ಭೂಕುಸಿತದ ಭೀತಿ ಇರುವ ಪ್ರದೇಶಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Sunday, August 4th, 2024
Brijesh Chowta

ಮಂಗಳೂರು : ವಾಮಂಜೂರು ಬಳಿಯ ಕೆತ್ತಿಕ್ಕಲ್‌ನಲ್ಲಿ ಭೂಕುಸಿತದ ಭೀತಿಗೊಳಗಾದ ಪ್ರದೇಶಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆತ್ತಿಕಲ್ ಗುಡ್ಡದ ಮೇಲೆ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ನಿರ್ಮಿಸುತ್ತಿರುವ ವೆಟ್ ವೆಲ್‌ಗೆ ಭೇಟಿ ನೀಡಿದ ಬಳಿಕ ರಾ.ಹೆ ಬಳಿಯಿರುವ ಕೆತ್ತಿಕಲ್ ಗುಡ್ಡ ಕುಸಿತ ಸಂಭವಿಸಿದ ಪ್ರದೇಶಕ್ಕೆ ಭೇಟಿ ನೀಡಿ ಜಾಗದ ಪರೀಶೀಲನೆ ನಡೆಸಿದ ಸಂಸದರು ಅಲ್ಲಿನ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಂದ ಮಾಹಿತಿ ಪಡೆದರು. ಮುಂಬರುವ […]

ಯೋಗ ವಿಥ್ ಯೋಧ: ಸಸಿಹಿತ್ಲು ಕಡಲತೀರದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರೊಂದಿಗೆ ವಿಶ್ವ ಯೋಗ ದಿನಾಚರಣೆ

Friday, June 21st, 2024
Brijesh chowta

ಮಂಗಳೂರು : “ಯೋಗ ಮತ್ತು ಯೋಗ್ಯತೆ ಎರಡೂ ಕೂಡಿ ಬಂದಾಗ ಮಾತ್ರ ವಿಕಾಸ ಸಾಧ್ಯ ಆದರೆ ಎರಡೂ ಫಲಿಸಬೇಕೆಂದರೆ ಅತ್ಯಗತ್ಯ ನಮ್ಮ ಪ್ರಯತ್ನ. ದಕ್ಷಿಣ ಕನ್ನಡ ಎಂಬ ಸಾಧ್ಯತೆಗಳ ಸಾಗರದಲ್ಲಿ ಅಭಿವೃದ್ಧಿಯ ಒಂದು ನವಯುಗ ಪ್ರಾರಂಭಿಸಲು ನಾವೆಲ್ಲ ಸೇರಿ ಈ ನವಪಥದಲ್ಲಿ ನವ ಪ್ರಯತ್ನಗಳನ್ನು ಮಾಡಬೇಕು …ಇಡಿ ವಿಶ್ವವೇ ನಮ್ಮ ದಕ್ಷಿಣ ಕನ್ನಡದತ್ತ ನೋಡುವಂತೆ ಮಾಡಬೇಕು ಎಂಬ ಆಶಯದಿಂದ ಈಗಾಗಲೇ ಸಾಹಸ ಕ್ರೀಡೆಗಳ ಮೂಲಕ ಅಂತರ ರಾಷ್ಟ್ರೀಯ ಪ್ರವಾಸೋದ್ಯಮದ ನಕ್ಷೆಯಲ್ಲಿ ತನ್ನ ಸ್ಥಾನವನ್ನು ಕಲ್ಪಿಸಿದ ಸಸಿಹಿತ್ಲು ಕಡಲ […]

ಪರಿಶೀಲನೆ ಬಳಿಕ ಶಿರಾಡಿಘಾಟ್ ವಾಹನ ಸಂಚಾರ ನಿಷೇಧ ತೀರ್ಮಾನ

Wednesday, January 19th, 2022
Nalin Kumar Kateel

ಮಂಗಳೂರು : ರಸ್ತೆ ಕಾಮಗಾರಿಗಾಗಿ ಶಿರಾಡಿಘಾಟ್ ವಾಹನ ಸಂಚಾರ ನಿಷೇಧ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ  ಪ್ರಾಧಿಕಾರ ಮಾಡಿರುವ ಪ್ರಸ್ತಾವನೆ ಬಗ್ಗೆ ತಕ್ಷಣ ನಿರ್ಣಯ ಕೈಗೊಳ್ಳುವಂತಿಲ್ಲ. ದ.ಕ.ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ತೀರ್ಮಾನ ಕೈಗೊಳ್ಳಬೇಕೆಂದು ಸಂಸದ ನಳಿನ್‌ಕುಮಾರ್ ಕಟೀಲ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿದರೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಬಹುದೆಂದು ರಾಷ್ಟ್ರೀಯ ಹೆದ್ದಾರಿ  ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸಲು ಶಿರಾಡಿಘಾಟ್ ಪ್ರಮುಖ ಸಂಪರ್ಕ ರಸ್ತೆಯಾಗಿದ್ದು, ಆರು […]

ಒಳಾಂಗಣ ಕ್ರೀಡಾಂಗಣ, ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣಕ್ಕೆ ಶಿಲನ್ಯಾಸ

Tuesday, November 2nd, 2021
Smart city

ಮಂಗಳೂರು :  ಸ್ಮಾರ್ಟ್ ಸಿಟಿ ಲಿಮಿಟೆಡ್ ಯೋಜನೆಯಡಿ ಮಂಗಳೂರು ನಗರದಲ್ಲಿ ಅಭಿವೃದ್ಧಿ ಪರ್ವವೇ ಆರಂಭಗೊಂಡಿದ್ದು, ಮುಂಬರುವ ವರ್ಷದಲ್ಲಿ ಪಂಪ್‍ವೆಲ್‍ನಲ್ಲಿ ಬಹುದೊಡ್ಡ ಬಸ್ ನಿಲ್ದಾಣದ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಸಂಸದರಾದ ನಳೀನ್ ಕುಮಾರ್ ಕಟೀಲ್ ಅವರು ತಿಳಿಸಿದರು. ಅವರು ನ.2ರ ಮಂಗಳವಾರ ಮಂಗಳೂರು ನಗರದ ಉರ್ವ ಮಾರುಕಟ್ಟೆ ಬಳಿ 20.54 ಕೋಟಿ ರೂ.ಗಳಡಿ ಉದ್ದೇಶಿತ ಕಬಡ್ಡಿ ಹಾಗೂ ಬ್ಯಾಡ್ಮಿಂಟನ್ ಕೋರ್ಟ್‍ಗಳನ್ನೊಳಗೊಂಡ ಒಳಾಂಗಣ ಕ್ರೀಡಾಂಗಣ ಹಾಗೂ 70 ಕೋಟಿ ರೂ.ಗಳ ವೆಚ್ಚದಲ್ಲಿ ಹಂಪನಕಟ್ಟೆ ಹಳೆ ಬಸ್ ನಿಲ್ದಾಣದ ಬಳಿ ಪಿಪಿಪಿ […]

ಕಾಸರಗೋಡಿಗೆ ಸರ್ಕಾರಿ, ಖಾಸಗಿ ಬಸ್ ಸಂಚಾರವಿಲ್ಲ: ನಳೀನ್ ಕುಮಾರ್ ಕಟೀಲು

Sunday, August 1st, 2021
Kerala Bus

ಮಂಗಳೂರು : ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದರಾದ ನಳೀನ್ ಕುಮಾರ್ ಕಟೀಲು ಅವರು ತಿಳಿಸಿದರು. ಅವರು ಜುಲೈ 31ರ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೊರೊನಾ ಪಾಸಿಟಿವಿಟಿ ಪ್ರಕರಣಗಳು ಕಳೆದ ಕೆಲವು […]

ಸ್ಥಳೀಯರಿಗೆ ಅನ್ಯಾಯ, ಎಂಆರ್‌ಪಿಎಲ್‌ ನೇಮಕಾತಿ ಪ್ರಕ್ರಿಯೆ ತಡೆಹಿಡಿಯಲು ಸಂಸದರ ಸೂಚನೆ

Monday, May 24th, 2021
naveen Andra

ಮಂಗಳೂರು: ಎಂಆರ್‌ಪಿಎಲ್‌ನ ನೇಮಕಾತಿಯಲ್ಲಿ ಸ್ಥಳೀಯರಿಗೆ ಅವಕಾಶ ನೀಡಲಿಲ್ಲ ಎಂದು ಆಕ್ಷೇಪಿಸಿ ದೂರುಗಳು ಬಂದ ಹಿನ್ನಲೆಯಲ್ಲಿ    ಸಂಸದ ನಳಿನ್‌ಕುಮಾರ್‌ ಕಟೀಲು ಅವರು ಎಂಆರ್‌ಪಿಎಲ್‌ನ ಆಡಳಿತ ನಿರ್ದೇಶಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಇತ್ತೀಚೆಗೆ ನಡೆದ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತಡೆಹಿಡಿಯುವಂತೆ ಅವರು ನಿರ್ದೇಶಿಸಿದ್ದಾರೆ. ಎಂಆರ್‌ಪಿಎಲ್‌ 200 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಈ ನೇಮಕಾತಿಯಲ್ಲಿ ಕರ್ನಾಟಕ ಹಾಗೂ ಸ್ಥಳೀಯ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಸಂಸದರ ಅಧ್ಯಕ್ಷತೆಯಲ್ಲಿ ಎಂಆರ್‌ಪಿಎಲ್‌ನ ಆಡಳಿತ ನಿರ್ದೇಶರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಲಾಯಿತು. […]

ದ.ಕ.ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಕಚೇರಿಗೆ‌ ಮುತ್ತಿಗೆ ಯತ್ನ, ಹಲವರ ಬಂಧನ

Saturday, December 26th, 2020
pfi

ಮಂಗಳೂರು : ಸಿಎಫ್ಐ ಕಾರ್ಯಕರ್ತರು‌ ದ.ಕ.ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಕಚೇರಿಗೆ‌ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಶನಿವಾರ ನಡೆದಿದೆ. ಡಿಸಿ‌ ಕಚೇರಿಯ ‌ಮುಂದೆ ಜಮಾಯಿಸಿದ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ‌ಘೋಷಣೆ‌ ಕೂಗಿದರು.‌ ಅಲ್ಲದೆ ಡಿಸಿ ಕಚೇರಿ ದಾಟಿ ಸಂಸದರ ಕಚೇರಿಗೆ ಮುತ್ತಿಗೆ‌ ಹಾಕಲು ಯತ್ನಿಸಿದರು. ಈ ವೇಳೆ‌ ಪೊಲೀಸರು ಪ್ರತಿಭಟನಾಕಾರರ ಪೈಕಿ‌ ನಾಯಕರು‌ ಹಾಗೂ ಹಲವು ಕಾರ್ಯಕರ್ತರನ್ನು‌ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರವೂಫ್ […]

ಮಂಗಳೂರು : ಸ್ಮಾರ್ಟ್ ಸಿಟಿ ಬಸ್ಸ್ ಶೆಲ್ಟರ್ ತಂಗುದಾಣ ನಿರ್ಮಾಣದಲ್ಲಿ ಅವ್ಯವಹಾರ – ವಿಚಾರಣೆ ನಡೆಸಲು ಸಂಸದರ ಸೂಚನೆ

Friday, September 13th, 2019
Nalin

ಮಂಗಳೂರು :  ಮಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ವಿವಿಧ ಕಡೆಗಳಲ್ಲಿ ನಿರ್ಮಿಸಲಾಗಿರುವ ಬಸ್ ಶೆಲ್ಟರ್ ಗಳ ಯೋಜನಾ ವೆಚ್ಚ ಅಧಿಕವಾಗಿರುವ ಬಗ್ಗೆ ವಿಚಾರಣೆ ನಡೆಸುವಂತೆ ಲೋಕಸಭಾ ಸಂಸದ ನಳೀನ್ ಕುಮಾರ್ ಕಟೀಲ್ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡುತ್ತಿದ್ದರು. ಸ್ಮಾರ್ಟ್ ಸಿಟಿಯಡಿ ಪ್ರತಿ ಬಸ್ ಶೆಲ್ಟರ್‍ಗೆ ರೂ. 12 ಲಕ್ಷ ಖರ್ಚು ಮಾಡಲಾಗಿದೆ. ಆದರೆ ಈ ಬಸ್ಸ್ ಶೆಲ್ಟರ್‍ನಲ್ಲಿ […]

ಮಂಗಳೂರು-ಬೆಂಗಳೂರು ನೂತನ ರೈಲು ಸಂಚಾರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಚಾಲನೆ

Thursday, February 21st, 2019
Rail

ಮಂಗಳೂರು : ಮಂಗಳೂರು-ಬೆಂಗಳೂರು ನೂತನ ರೈಲು ಸಂಚಾರಕ್ಕೆ  ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಇಂದು ಸಂಸದ ನಳಿನ್ ಕುಮಾರ್ ಕಟೀಲ್ ಚಾಲನೆ ನೀಡಿದರು. ಈ ಹೊಸ ರೈಲು ನಿಗದಿತ ವೇಳಾಪಟ್ಟಿಯಂತೆ ಸಂಚರಿಸಲಿದೆ. ಸದ್ಯಕ್ಕೆ ವಾರದಲ್ಲಿ ಮೂರು ದಿನ ಮಾತ್ರ ಸಂಚರಿಸುವ ರೈಲು ಮಾರ್ಚ್‌ನ ಆನಂತರ ಪ್ರತೀ ದಿನ ರಾತ್ರಿ ವೇಳೆ ಸಂಚರಿಸಲಿದೆ ಎಂದು ಹೇಳಲಾಗಿದೆ. ಮಂಗಳೂರಿನಿಂದ ಸೋಮವಾರ, ಬುಧವಾರ, ಶುಕ್ರವಾರ ರಾತ್ರಿ 7 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 5 ಗಂಟೆಗೆ ಯಶವಂತಪುರ ತಲುಪಲಿದೆ. ಭಾನುವಾರ, ಮಂಗಳವಾರ, […]

ಏರ್ಪೋರ್ಟ್ ಆವರಣ ಗೋಡೆ ಬಿರುಕು ಸ್ಥಳಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Thursday, June 7th, 2018
Nalin Kumar Kateel

ಮಂಗಳೂರು : ಮಳೆಯಿಂದಾಗಿ ಹಾನಿಗೊಳಗಾದ ಏರ್ ಪೋರ್ಟ್ ಸುತ್ತಮುತ್ತಲಿನ ಕೊಳಂಬೆ ಉನಿಲೆ ಪ್ರದೇಶಗಳಿಗೆ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಇವರು ಮಂಗಳೂರು ಉತ್ತರ ಶಾಸಕರಾದ ಭರತ್ ಶೆಟ್ಟಿ ಇವರೊಂದಿಗೆ ಗುರುವಾರ ಬೆಳಿಗ್ಗೆ ಭೇಟಿ ನೀಡಿದರು. ಏರ್ಪೋರ್ಟ್ ನಿರ್ದೇಶಕರು, ಸಂಬಂಧಪಟ್ಟ ಎಂಜಿನೀಯರ್ಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾಮಸ್ಥರಿಗೆ ಯಾವುದೇ ತೊಂದರೆಯಾಗದಂತೆ ಪರಿಹಾರ ಕಾಮಗಾರಿಗಳನ್ನು ಶೀಘ್ರಗತಿಯಲ್ಲಿ ನಡೆಸಲು ಮಾನ್ಯ ಸಂಸದರು ನಿರ್ದೇಶನ ನೀಡಿದರು.