ಎನ್‌ಡಿ‌ಎ‌ ಸಂಸದೀಯ ಸಭೆ : ಮೂರನೇ ಬಾರಿಗೆ ಪ್ರಧಾನಿಯಾಗಿ ಮೋದಿ ಆಯ್ಕೆ

Friday, June 7th, 2024
Modi

ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ, ಎನ್‌ಡಿಎ ನಾಯಕರು ಮತ್ತು ನೂತನವಾಗಿ ಆಯ್ಕೆಯಾದ ಎಲ್ಲಾ ಸಂಸದರ ಉಪಸ್ಥಿತಿಯಲ್ಲಿ ಇಂದು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಎನ್‌ಡಿಎ ಸಂಸದೀಯ ಸಭೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗಿಯಾದರು. ಮೋದಿಯವರನ್ನು ಎನ್‌ಡಿ‌ಎ‌ ಮೈತ್ರಿಕೂಟದ ನಾಯಕರಾಗಿ ಆಯ್ಕೆ ಮಾಡಲಾಗಿದ್ದು, ಅವರು ಇದೇ ಭಾನುವಾರ ಜೂನ್ 9 ರಂದು ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.