ಶಿಕ್ಷಣದ ಜೊತೆ ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬೆಳೆಸಿ : ಶಾಸಕ ಅಬ್ಬಯ್ಯ ಪ್ರಸಾದ್

Saturday, September 5th, 2020
Teachers day

ಹುಬ್ಬಳ್ಳಿ : ಶಿಕ್ಷಕರು ದೇಶದ ನಿರ್ಮಾತೃಗಳು. ಪ್ರತಿಯೊಬ್ಬರ ಜೀವನವನ್ನು ರೂಪಿಸುವ ಶಿಕ್ಷಕ ವೃತ್ತಿಗೆ ಪ್ರಥಮ ಆದ್ಯತೆಯಿದೆ. ಇಂದಿನ ಮಕ್ಕಳಲ್ಲಿ ಪುಸ್ತಕ ಜ್ಞಾನ ಹೆಚ್ಚುತ್ತಿದೆ. ಆದರೆ ಉತ್ತಮ ಸಂಸ್ಕಾರ ಬೆಳವಣಿಗೆಯಾಗುತ್ತಿಲ್ಲ. ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ಉತ್ತಮ ಸಂಸ್ಕಾರವನ್ನು ಶಿಕ್ಷಕರು ಬೆಳಸಬೇಕು ಎಂದು ಶಾಸಕ ಅಬ್ಬಯ್ಯ ಪ್ರಸಾದ್ ಹೇಳಿದರು. ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದ ಸಂಯುಕ್ತ ಆಶ್ರಯದಲ್ಲಿ, ನಗರದ ಘಟಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ […]

ತುಳು ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಉಳಿಸಿ ಬೆಳೆಸುವ ಕಾರ್ಯ ಆಟಿಡೊಂಜಿ ಕೂಟ: ಚೇತನ್ ಭಂಡಾಜೆ

Tuesday, August 16th, 2016
Atidonji-koota

ಬಂಟ್ವಾಳ: ಆಧುನಿಕ ಜಗತ್ತಿನ ಪ್ರಭಾವದಿಂದ ಬದಲಾಗುತ್ತಿರುವ ಜೀವನ ಶೈಲಿಯಲ್ಲಿ ತುಳು ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಉಳಿಸಿ ಬೆಳೆಸುವ ಕಾರ್ಯ ಆಟಿಡೊಂಜಿ ಕೂಟ ಕಾರ್ಯಕ್ರಮ ಮಾಡುತ್ತಿದ್ದು ಅನಿಷ್ಠ ತಿಂಗಳೆಂದೇ ಹೆಸರಾಗಿದ್ದ ಆಟಿ ತಿಂಗಳು ಇಂದು ತುಳು ನಾಡಿನಾದ್ಯಂತ ಸಂಭ್ರಮದ ತಿಂಗಳಾಗಿ ಮಾರ್ಪಟ್ಟಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಎಂದು ಎಸ್.ವಿ.ಎಸ್. ಕಾಲೇಜಿನ ಉಪನ್ಯಾಸಕ ಚೇತನ್ ಭಂಡಾಜೆ ಹೇಳಿದರು. ಅವರು ಯುವ ವಾಹಿನಿ ಬಂಟ್ವಾಳ ತಾಲೂಕು ಘಟಕ ಬಿ.ಸಿ.ರೋಡಿನ ಘಟಕದ ಕಚೇರಿಯಲ್ಲಿ ರವಿವಾರ ಹಮ್ಮಿಕೊಂಡ ’ಆಟಿಡೊಂಜಿ ಕೂಟ’ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. […]