ಒಂದು ತಿಂಗಳೊಳಗೆ ಜಾಗ ಗುರುತಿಸಿ, ಪುನರ್ವಸತಿಗೆ ಕ್ರಮ ಕೈಗೊಳ್ಳಲಾಗುವುದು: ಸಚಿವ ಆಂಜನೇಯ
Saturday, December 24th, 2016ಮಡಿಕೇರಿ: ದಿಡ್ಡಳ್ಳಿಯಲ್ಲಿ ಕಳೆದ ಹಲವು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದ 577 ಕುಟುಂಬಗಳಿಗೆ ಒಂದು ತಿಂಗಳೊಳಗೆ ಜಾಗ ಗುರುತಿಸಿ, ಪುನರ್ವಸತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಆಂಜನೇಯ ಭರವಸೆ ನೀಡಿದ್ದಾರೆ. ಇಂದು ದಿಡ್ಡಳ್ಳಿ ಹಾಡಿಗೆ ಭೇಟಿ ನೀಡಿ ಅಹವಾಲು ಆಲಿಸಿದ ಬಳಿಕ ಮಡಿಕೇರಿಯಲ್ಲಿ ಶಾಸಕರು ಮತ್ತು ಅಧಿಕಾರಿಗಳ ತುರ್ತು ಸಭೆ ನಡೆಸಿ ಮಾತನಾಡಿದ ಅವರು, ಗಿರಿಜನರಿಗೆ ಸದ್ಯ ಅವರಿರುವ ಸ್ಥಳದಲ್ಲೇ ಎಲ್ಲಾ ಸೌಲಭ್ಯ ಒದಗಿಸಲಾಗುವುದು. ಇದಕ್ಕಾಗಿ ಸರ್ಕಾರ ತುರ್ತಾಗಿ 1 ಕೋಟಿ ರೂ. ಅನುದಾನ ನೀಡಿದೆ […]