ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ಪೂರ್ಣ: ಸಚಿವ ಸುರೇಶ್ ಕುಮಾರ್

Thursday, July 15th, 2021
suresh Kumar

ಬೆಂಗಳೂರು : ಜುಲೈ 19 ಮತ್ತು 22ರಂದು ನಿಗದಿಯಾಗಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈಗಾಗಲೇ ಸಿದ್ಧತೆಗಳ ಕುರಿತಂತೆ ಪರಿಶೀಲನೆ ನಡೆಸಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಸಿದ್ಧತೆ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ನಿರ್ದೇಶಕರ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾರ್ಗದರ್ಶನ ನೀಡಿದ ಸಚಿವರು, […]

ಮೊಬೈಲ್ ನೆಟ್-ವರ್ಕ್ ಸಮಸ್ಯೆ ಪರಿಹಾರಕ್ಕೆ ಕ್ರಮ- ಸಚಿವ ಸುರೇಶ್ ಕುಮಾರ್

Tuesday, July 13th, 2021
Suresh Kumar

ಬೆಂಗಳೂರು: ಬದಲಾದ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳ ಕಲಿಕಾ ನಿರಂತರತೆಗೆ ಅನುಕೂಲವಾಗುವಂತೆ ಅಂತರ್ಜಾಲ ನೆಟ್-ವರ್ಕ್ ಸಮಸ್ಯೆಯನ್ನು ಪರಿಹರಿಸುವ ಸಂಬಂಧದಲ್ಲಿ ಸೋಮವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ರಾಜ್ಯದ ಮುಖ್ಯಕಾರ್ಯದರ್ಶಿಯವರ ಜೊತೆ ಸುದೀರ್ಘವಾಗಿ ಚರ್ಚಿಸಿದರು. ಈಗಾಗಲೇ ರಾಜ್ಯದ ಮಾಹಿತಿ ತಂತ್ರಜ್ಞಾನ ಸಚಿವರೂ ಆದ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ಮತ್ತು ಮುಖ್ಯ ಕಾರ್ಯದರ್ಶಿಯವರ ಸೂಚನೆಯಂತೆ ರಾಜ್ಯದಲ್ಲಿ ಮೊಬೈಲ್ ನೆಟ್-ವರ್ಕ್ ಪೂರೈಕೆದಾರ ಕಂಪನಿಗಳೊಂದಿಗೆ ಮಾಹಿತಿ ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿಯವರು […]

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಎಲ್ಲ ಸಿದ್ಧತೆ: ಸಚಿವ ಸುರೇಶ್ ಕುಮಾರ್

Wednesday, July 7th, 2021
Suresh Kumar

ಬೆಂಗಳೂರು: ಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಎಲ್ಲ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ಲಸಿಕೆ ಪಡೆಯುವುದರೊಂದಿಗೆ ಪರೀಕ್ಷೆ ಸುರಕ್ಷಿತ ವಾತಾವರಣದಲ್ಲಿ ಅಚ್ಚುಕಟ್ಟಾಗಿ ನಡೆಯಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಈ ಕುರಿತಂತೆ ಮಕ್ಕಳು ಮತ್ತು ಪೋಷಕರಲ್ಲಿ ಆತ್ಮ ವಿಶ್ವಾಸ ಮೂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಮಂಗಳವಾರ ಜಿಲ್ಲಾ ಶೈಕ್ಷಣಿಕ ಉಪನಿರ್ದೇಶಕರು ಮತ್ತು ಬಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ಧತೆ ಕುರಿತು ಪರಿಶೀಲನೆ ನಡೆಸಿ ಮಾರ್ಗದರ್ಶನ […]

ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಸಿಇಟಿ ಅಂಕ ಪರಿಗಣಿಸಲು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಯಣ್ ಅವರಿಗೆ ಮನವಿ

Sunday, June 6th, 2021
SureshKumar

ಬೆಂಗಳೂರು: ಈ ಬಾರಿಯ ದ್ವಿತೀಯ ಪಿ.ಯು.ಸಿ ಫಲಿತಾಂಶ ಘೋಷಣಾ ಪ್ರಕ್ರಿಯೆಯಲ್ಲಿ ಆಯಾ ವಿದ್ಯಾರ್ಥಿಗಳ ಪ್ರಥಮ ಪಿ.ಯು.ಸಿ. ಹಾಗೂ ಎಸ್.ಎಸ್.ಎಲ್.ಸಿ ಅಂಕಗಳನ್ನು ಮಾನದಂಡಗಳಾಗಿ ಪರಿಗಣಿಸಲಾಗುತ್ತಿದ್ದು, ವೃತ್ತಿಪರ ಕೋರ್ಸಿಗೆ ಪ್ರವೇಶ ಕಲ್ಪಿಸುವ ಸಿ.ಇ.ಟಿ. ಪರೀಕ್ಷೆಗೆ ಪಿ.ಯು.ಸಿ. ಫಲಿತಾಂಶವನ್ನು ಪರಿಗಣಿಸಿ ವೈಟೇಜ್ ನೀಡುವ ಪ್ರಕ್ರಿಯೆಯನ್ನು ಕೈಬಿಟ್ಟು, ಕೇವಲ ಸಿ.ಇ.ಟಿ ಪರೀಕ್ಷೆಗಳ ಅಂಕಗಳನ್ನು ಮಾತ್ರ ರ್ಯಾಂಕಿಂಗ್‍ಗೆ ಪರಿಗಣಿಸುವ ತೀರ್ಮಾವನ್ನು ತೆಗೆದುಕೊಳ್ಳಬೇಕಾಗಿ ಸಚಿವ ಸುರೇಶ್ ಕುಮಾರ್ ಅವರು ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಅವರನ್ನು ಕೋರಿದ್ದಾರೆ. ಈ ಬಗ್ಗೆ […]

ದ್ವಿತೀಯ ಪಿಯುಸಿ ಪರೀಕ್ಷೆ ಇಲ್ಲ, ಎಲ್ಲರೂ ಗ್ರೇಡಿಂಗ್ ಮೇಲೆ ಪಾಸ್

Friday, June 4th, 2021
Suresh Kumar

ಬೆಂಗಳೂರು: ಕೋವಿಡ್ ವ್ಯಾಪಕವಾಗಿರುವ ಕಾರಣ ರಾಜ್ಯದಲ್ಲಿ ಈ ವರ್ಷ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದಿರಲು ತೀರ್ಮಾನಿಸಲಾಗಿದೆ. ಪ್ರಥಮ ಪಿಯುಸಿಯಲ್ಲಿ ತೆಗೆದುಕೊಂಡ ಅಂಕಗಳ ಆಧಾರದ ಮೇಲೆ ಗ್ರೇಡಿಂಗ್ ನೀಡಿ ಈ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗುವುದು  ಸಚಿವ ಸುರೇಶ್ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದೆ. ಪ್ರಥಮ ಪಿಯುಸಿ ಫಲಿತಾಂಶದ ಆಧಾರದ ಮೇಲೆ ಗ್ರೇಡಿಂಗ್ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಮುಂಜಾಗ್ರತೆ ತೆಗೆದುಕೊಂಡು ಕಳೆದ ವರ್ಷ ಪರೀಕ್ಷೆ ನಡೆಸಿದ್ದೆವು. ಒಂದು ವರ್ಗ […]

ಶಾಲೆಗಳಲ್ಲಿ ವಾರಕ್ಕೆ ಒಂದು ದಿನ ಬ್ಯಾಗ್ ರಹಿತ : ಸಚಿವ ಸುರೇಶ್ ಕುಮಾರ್

Saturday, January 11th, 2020
bag

ಮೈಸೂರು : ಶಾಲೆಗಳಲ್ಲಿ ವಾರಕ್ಕೆ ಒಂದು ದಿನ ಬ್ಯಾಗ್ ರಹಿತ ದಿನ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು. ಮೈಸೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬರುವ ಶೈಕ್ಷಣಿಕ ವರ್ಷದಿಂದ ಜಾರಿಗೆ ತರಲಾಗುವುದು. ಶಿಕ್ಷಣ ತಜ್ಞರಿದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚು ಒತ್ತು ನೀಡುವ ದೃಷ್ಟಿಯಿಂದ ವಾರದಲ್ಲಿ ಒಂದು ದಿನ ಅಥವಾ ಹದಿನೈದು ದಿನಕ್ಕೊಮ್ಮೆ ವಿದ್ಯಾರ್ಥಿಗಳಿಗೆ ಬ್ಯಾಗ್ ಲೇಸ್ ಡೇ ಮಾಡಲಾಗುವುದು. ನಾಟಕ, ಸ್ವಚ್ಛತೆ, ಹಾಡುಗಾರಿಕೆ ಹಾಗೂ ಸಾಂಸ್ಕೃತಿಕ […]

ಈ ವರ್ಷದಿಂದಲೇ ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗುವುದು : ಸಚಿವ ಸುರೇಶ್ ಕುಮಾರ್

Friday, October 4th, 2019
suresh-kumar

ಬೆಂಗಳೂರು : ಈ ಬಾರಿಯ ಶೈಕ್ಷಣಿಕ ವರ್ಷದಿಂದಲೇ ಏಳನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗುವುದು. ಈ ವಿಚಾರವನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. ಆದರೆ ಈ ಬಾರಿಯ ಪಬ್ಲಿಕ್ ಪರೀಕ್ಷೆಗಳನ್ನು ಪ್ರಾಯೋಗಿಕವಾಗಿ ನಡೆಸಲಾಗುವುದು ಎಂಬ ಮಾಹಿತಿಯನ್ನು ಸಚಿವರು ನೀಡಿದರು. ಈ ಶೈಕ್ಷಣಿಕ ವರ್ಷದಲ್ಲಿ ಏಳನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಪಬ್ಲಿಕ್ ಪರೀಕ್ಷೆಗಳನ್ನು ನಡೆಸಲಾಗುವುದು ಮತ್ತು ಈ ಬಾರಿಯ ಪರೀಕ್ಷೆಯಲ್ಲಿ ಯಾರನ್ನೂ ಅನುತ್ತೀರ್ಣ ಮಾಡಲಾಗುವುದಿಲ್ಲ ಎಂದು ಸಚಿವರು ಮಾಹಿತಿ ನೀಡಿದರು. ಮುಂದಿನ ಶೈಕ್ಷಣಿಕ ವರ್ಷದ […]