ಈ ವರ್ಷದೊಳಗೆ ದೇಶದ ಎಲ್ಲ ನಾಗರಿಕರಿಗೂ ಕೋವಿಡ್ ಲಸಿಕೆ – ಸದಾನಂದ ಗೌಡ

Friday, June 4th, 2021
DVS

  ಬೆಂಗಳೂರು :  ಕಪ್ಪುಶಿಲಿಂದ್ರ ರೋಗದ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು ಬೇರೆ ಬೇರೆ ರಾಜ್ಯಗಳಿಗೆ ಇಂದು ಒಟ್ಟು 1.21 ಲಕ್ಷ ವಯಲ್ಸ್ ಎಂಫೊಟೆರಿಸಿನ್-ಬಿ ಹಂಚಿಕೆ ಮಾಡಿದ್ದು ಕರ್ನಾಟಕಕ್ಕೆ 9750 ವಯಲ್ಸ್ ಒದಗಿಸಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದಗೌಡ ಅವರು ತಿಳಿಸಿದ್ದಾರೆ. ಇಂದು ಇಲ್ಲಿ ಹೇಳಿಕೆಯೊಂದರಲ್ಲಿ ಈ ವಿಷಯ ತಿಳಿಸಿದ ಕೇಂದ್ರ ಸಚಿವರು – ಸ್ವದೇಶಿಯವಾಗಿಯೂ ಈ ಚುಚ್ಚುಮದ್ದಿನ ಉತ್ಪಾದನೆ ಹೆಚ್ಚಾಗುತ್ತಿದೆ, ಅದೇ ರೀತಿ ಆಮದಿನ ಪ್ರಮಾಣವನ್ನು ಕೂಡಾ ಹೆಚ್ಚಿಸಲಾಗುತ್ತಿದೆ. ಇನ್ನು ಕೆಲವೇ […]

ನ್ಯಾನೋ ರಸಗೊಬ್ಬರದಿಂದ ಹೊಸ ಕೃಷಿ ಕ್ರಾಂತಿ : ಸದಾನಂದ ಗೌಡ

Sunday, May 30th, 2021
sadananda gowda

ಬೆಂಗಳೂರು: ಸಹಕಾರಿ ವಲಯದ ರಸಗೊಬ್ಬರ ಕಂಪನಿ ಇಫ್ಕೋ ಅಭಿವೃದ್ಧಿಪಡಿಸಿರುವ ನ್ಯಾನೋ-ಯೂರಿಯಾ ರಸಗೊಬ್ಬರವು ಕೃಷಿಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ಉಂಟುಮಾಡಲಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ. (240 ರೂಪಾಯಿ ಬೆಲೆಯ 500 ಎಂಎಲ್ ನ್ಯಾನೋ ಯೂರಿಯಾ 45 ಕೆಜಿ ಮಾಮೂಲಿ ಯೂರಿಯಾಕ್ಕೆ ಸಮನಾಗಿದ್ದು ಜೂನ್ 15ನೇ ತಾರೀಖಿನಂದು ಮುಕ್ತ ಮಾರುಕಟ್ಟೆಗೆ ಲಗ್ಗೆ ಇಡಲಿದೆ.) ನ್ಯಾನೋ-ಯುರಿಯಾ ಉಪಯೋಗದ ಬಗ್ಗೆ ಇಫ್ಕೋ ಸಂಸ್ಥೆಯವರು ಇಂದು ಏರ್ಪಡಿಸಿದ್ದ ವೆಬ್ಬಿನಾರ್ ಚರ್ಚೆಯನ್ನು ಉದ್ಘಾಟಿಸಿ ಮಾತನಾಡಿದ ಸಚಿವರು […]

ಕರ್ನಾಟಕಕ್ಕೆ ಈ ವಾರ 4.25 ಲಕ್ಷ ವಯಲ್ಸ್ ರೆಮ್ಡೆಸಿವಿರ್ ಹಂಚಿಕೆ : ಸದಾನಂದ ಗೌಡ

Monday, May 17th, 2021
DV Sadananda

ಬೆಂಗಳೂರು : ಕೇಂದ್ರ ಸರ್ಕಾರವು ಬೇರೆ ಬೇರೆ ರಾಜ್ಯಗಳಿಗೆ ಮೇ 17ರಿಂದ ಮೇ 23ರವರೆಗಿನ ಬಳಕೆಗಾಗಿ 23 ಲಕ್ಷ ವಯಲ್ಸ್ (ಸೀಸೆ) ರೆಮ್ಡೆಸಿವಿರ್ ಚುಚ್ಚುಮದ್ದನ್ನು ಹಂಚಿಕೆ ಮಾಡಿದ್ದು ಕರ್ನಾಟಕಕ್ಕೆ ಈ ಸಲ ಉಳಿದ ರಾಜ್ಯಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಅಂದರೆ 4.25 ಲಕ್ಷ ವಯಲ್ಸ್ ರೆಮ್ಡೆಸಿವಿರ್ ಒದಗಿಸಲಾಗಿದೆ. ಇಂದು ಇಲ್ಲಿ ಹೇಳಿಕೆಯೊಂದರಲ್ಲಿ ಈ ವಿಷಯ ತಿಳಿಸಿದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದಗೌಡ ಅವರು ಕರ್ನಾಟಕದಲ್ಲಿರುವ ಅತಿಹೆಚ್ಚು ಸಕ್ರೀಯ ಪ್ರಕರಣವನ್ನು ಆಧರಿಸಿ ರಾಜ್ಯಕ್ಕೆ ಈ […]

ಕೇಂದ್ರದ ಪ್ಯಾಕೇಜ್ ಗಳನ್ನು ರಾಜ್ಯ ಸರ್ಕಾರ ಯಾಕೆ ನೀಡುತ್ತಿಲ್ಲ, ನಿಮ್ಮ ಮಂತ್ರಿಗಳು ಕತ್ತೆ ಕಾಯುತ್ತಿದ್ದಾರಾ? ಸದಾನಂದ ಗೌಡ

Friday, May 14th, 2021
Sadananda Gowda Call

ಮಂಗಳೂರು : ಕೇರಳ, ಆಂಧ್ರದಲ್ಲಿ ಬಡವರಿಗೆ ಪ್ಯಾಕೇಜ್ ಘೋಷಣೆ ಆಗಿ, ಅದರ ಉಪಯೋಗವನ್ನು ಬಡವರು ಪಡೆದುಕೊಳ್ಳುತ್ತಿದ್ದಾರೆ, ಆದರೆ ಕರ್ನಾಟಕದಲ್ಲಿ ಪ್ಯಾಕೇಜ್ ಘೋಷಣೆ ಯಾಕೆ ಆಗಲಿಲ್ಲ? ದಯವಿಟ್ಟು ಬಡವರಿಗೆ ಪ್ಯಾಕೇಜ್ ಘೋಷಣೆ ಮಾಡಿ ಎಂದು ಮನವಿ ಮಾಡಿದಕ್ಕೆ ಕೇಂದ್ರ ಸಚಿವ ಸದಾನಂದ ಗೌಡರು ಕೇಂದ್ರದಿಂದ ಕೊಡಬೇಕಾದುದನ್ನೆಲ್ಲ ಕೊಟ್ಟಿದ್ದೇವೆ ರಾಜ್ಯದ ಮಂತ್ರಿಗಳು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ದಕ್ಷಿಣ ಕನ್ನಡದ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ರೈ ಎಂದು ಪರಿಚಯಿಸಿಕೊಂಡು ಪೋನ್ ಕರೆ ಮಾಡಿ ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರು […]

ಕಾಂಗ್ರೆಸ್ ಪಕ್ಷ ‘ಐಸಿಯು’ನಲ್ಲಿದೆ -:ಸದಾನಂದ ಗೌಡ

Tuesday, April 13th, 2021
sadananda Gowda

ಬಸವಕಲ್ಯಾಣ : ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಪ್ರಚಂಡ ಜಯಸಾದಿಸಲಿದ್ದಾರೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ಇಂದು ಇಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ಬಸವಕಲ್ಯಾಣ ವಿಧಾನ ಸಭಾ ಕ್ಷೇತ್ರಕ್ಕೆ ನಡೆದಿರುವ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಶರಣು ಸಲಗಾರ ಅವರ ಪರವಾಗಿ ರಾಜ್ಯ ಬಿಜೆಪಿ ಪ್ರಭಾರಿ ಅರುಣ ಸಿಂಗ್ ಹಾಗೂ ಪಕ್ಷದ ಹಿರಿಯ ಮುಖಂಡರು ಹಾಗೂ ಸಚಿವರೊಂದಿಗೆ ನಗರದಲ್ಲಿ ಮತಯಾಚನೆ […]

ತಲ್ಚೇರ್‌ ರಸಗೊಬ್ಬರ ಕಾರ್ಖಾನೆ ಪುನಶ್ಚೇತನ ಯೋಜನೆ ಅವಧಿಯಲ್ಲಿ ಪೂರ್ಣಗೊಳಿಸಲು ಸದಾನಂದ ಗೌಡ ಸೂಚನೆ

Tuesday, June 23rd, 2020
DVS-TFL

ನವದೆಹಲಿ : ಒರಿಸ್ಸಾದ ತಲ್ಚೇರನಲ್ಲಿರುವ ರಸಗೊಬ್ಬರ ಕಾರ್ಖಾನೆಯ (ಟಿಎಎಲ್‌) ಪುನಶ್ಚೇತನ ಕಾಮಗಾರಿಗಳನ್ನು ತ್ವರಿತಗೊಳಿಸಲು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಶ್ರೀ ಡಿ ವಿ ಸದಾನಂದ ಗೌಡ ಅವರು ಕಾರ್ಖಾನೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಟಿಎಫೆಲ್‌ ವ್ಯವಸ್ಥಾಪಕ ನಿರ್ದೇಶಕ  ಎಸ್.‌ ಎನ. ಯಾದವ್‌, ನಿರ್ದೇಶಕ (ಆಪರೇಷನ್ಸ್)‌  ಎಸ್‌ ಗಾವಡೆ ಮತ್ತಿತರ ಹಿರಿಯ ಅಧಿಕಾರಿಗಳ ಜೊತೆ ದೆಹಲಿಯಲ್ಲಿ ಇಂದು ಯೋಜನೆಯ ಪ್ರಗತಿ ಪರಿಶೀಲಿಸಿದರು. ಯೋಜನೆಯ ಪ್ರಗತಿ ಬಗ್ಗೆ ವಿವರ ನೀಡಿದ ಯಾದವ್‌ ಅವರು – ಕೊರೊನಾ ರೋಗ ಹಾಗೂ ಲಾಕ್ಡೌನ್‌ನಿಂದಾಗಿ ಮಾನವ […]

ಖಾದರ್ ಅವರ ಬೆಂಕಿ ಹಚ್ಚುವ ಹೇಳಿಕೆಯಿಂದ ಮಂಗಳೂರಲ್ಲಿ ಗಲಭೆ ನಡೆದಿದೆ : ಸದಾನಂದಗೌಡ

Friday, December 20th, 2019
curfew

ಮಂಗಳೂರು : ಯು.ಟಿ.ಖಾದರ್ ಅವರ ಬೆಂಕಿ ಹಚ್ಚುವ ಹೇಳಿಕೆಯಿಂದ ಮಂಗಳೂರು ಗಲಭೆ ಉಂಟಾಗಲು ಕಾರಣವಾಗಿದೆ ಎಂದು ಕೇಂದ್ರ ಡಿ.ವಿ.ಸದಾನಂದಗೌಡ ಹೇಳಿದರು. ಕಾಂಗ್ರೆಸ್ ಹಾಗೂ ಯು.ಟಿ.ಖಾದರ್ ಅವರು ತಮ್ಮ ಅಸ್ತಿತ್ವಕ್ಕಾಗಿ ಇಂತವರನ್ನು ಸಣ್ಣ ಪುಟ್ಟ ಗಲಾಟೆಯಾದರೂ ಕರೆಸಿಕೊಳ್ಳುತ್ತಾರೆ ಎಂದರು. ಪಾಕಿಸ್ತಾನ, ಅಪ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ಮೂರು ಇಸ್ಲಾಮಿಕ್ ರಾಷ್ಟ್ರಗಳು, ಆದರೆ ಭಾರತ ಮಾತ್ರ ಸರ್ವ ಧರ್ಮಗಳ ರಾಷ್ಟ್ರವಾಗಿದೆ ಎಂದು ತಿಳಿಸಿದರು. 1971 ರ ಯುದ್ದದ ಬಳಿಕ ಪಾಕಿಸ್ತಾನದಲ್ಲಿ ಹಿಂದೂಗಳ ಮಾರಣಹೋಮ ನಡೆದುಹೋಯಿತು, ಅನೇಕ ಹಿಂದೂಗಳು ನಿರಾಶ್ರಿತರಾದರು ಭಾರತ ಅಂತವರಿಗೆ […]

ನಾನು ಗೌಡ ಎಂದು ಹೇಳಲು ನನಗೆ ಹಿಂಜರಿಕೆ, ನಾಚಿಕೆ ಇಲ್ಲ : ಸದಾನಂದ ಗೌಡ

Monday, June 24th, 2019
dvs

ಸುಳ್ಯ,: “ನಾಡಪ್ರಭು ಕೆಂಪೇಗೌಡ ಜಯಂತಿ’ ಮತ್ತು “ಕೆಂಪೇಗೌಡರ ಯಲಹಂಕ ಸಂಸ್ಥಾನದ ಇತಿಹಾಸ ಮತ್ತು ಐತಿಹ್ಯದ ಬಗ್ಗೆ ವಿಚಾರ ಸಂಕಿರಣ’ ಸಮಾರಂಭದಲ್ಲಿ ಶನಿವಾರ  ಮಾಡಿದ ಭಾಷಣ ಸಂದರ್ಭ ತಾನಾಡಿರುವ ಮಾತು ವಿವಾದಕ್ಕೆ ಈಡಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರು ಟ್ವಿಟರ್‌ ಮೂಲಕ ಸ್ಪಷ್ಟನೆ ನೀಡಿದ್ದಾರೆ. “ನನ್ನ ಹೆಸರಿನೊಂದಿಗೆ ಗೌಡ ಎಂಬುದನ್ನು ಸೇರಿಸಿಕೊಂಡಿದ್ದಕ್ಕೆ ರಾಜ್ಯದ ಮುಖ್ಯಮಂತ್ರಿಯಾಗಿ, ಈಗ ಕೇಂದ್ರ ಸಚಿವನಾಗಿದ್ದೇನೆ. ಅದನ್ನು ಹೇಳಲು ನನಗೆ ಹಿಂಜರಿಕೆ, ನಾಚಿಕೆ ಇಲ್ಲ’ ಎಂಬುದಾಗಿ ಸದಾನಂದ ಗೌಡರು ಭಾಷಣದಲ್ಲಿ ಹೇಳಿದ್ದಾರೆ ಎಂಬ […]

ಕುಮಾರಸ್ವಾಮಿ ಮೇ 24ರ ವರೆಗೆ ಮಾತ್ರ ಮುಖ್ಯಮಂತ್ರಿ

Thursday, May 23rd, 2019
kumara swamy

ಬೆಂಗಳೂರು: ಲೋಕಸಭೆ ಚುನಾವಣೆ 2019ರ ಫಲಿತಾಂಶ ಮೇ 23 ರಂದು ಪ್ರಕಟಗೊಳ್ಳಲಿದ್ದು, ಮೇ 24ರ ವರೆಗೆ ಮಾತ್ರ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಭವಿಷ್ಯ ನುಡಿದಿದ್ದಾರೆ. ಎಚ್‌ಡಿ ಕುಮಾರಸ್ವಾಮಿ ಅವರು ಮೇ 24, ಶುಕ್ರವಾರ ಬೆಳಗ್ಗಿನ ವರೆಗೆ ಮಾತ್ರ ಸಿಎಂ ಆ ನಂತರ ಮೈತ್ರಿ ಸರ್ಕಾರ ಮುರಿದು ಬೀಳಲಿದೆ. ಹೊಸ ಸರ್ಕಾರ ರಚನೆಗೆ ವೇದಿಕೆ ಸಿದ್ಧವಾಗಿದೆ ಎಂದು ಸದಾನಂದ ಗೌಡ ಹೇಳಿದ್ದಾರೆ. ನಾಳೆ ಸಂಜೆ ಅಥವಾ ನಾಡಿದ್ದು ಬೆಳಗ್ಗೆ ವರೆಗೆ ಮಾತ್ರ. ನಾಳೆ […]

ಮೋದಿ ಅವರ ‘ಮನ್ ಕೀ ಬಾತ್’ನಿಂದ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ: ಐವನ್ ಡಿಸೋಜ

Tuesday, March 27th, 2018
ivan-desouza

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ನಿಂದ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂಬುವುದನ್ನು ಬಿಜೆಪಿ ತಿಳಿದುಕೊಳ್ಳಬೇಕು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ತಿಳಿಸಿದ್ದಾರೆ.ಮಂಗಳೂರಿನಲ್ಲಿ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದ ಅವರು ಅಮಿತ್ ಶಾ ಅವರ ಕುವೆಂಪು ಸ್ಮಾರಕಕ್ಕೆ ಭೇಟಿ ನೀಡುವ ಮೊದಲು ಒಮ್ಮೆ ಯೋಚಿಸಬೇಕು ಎಂದು ಹೇಳಿದರು. ಬಿಜೆಪಿಯ ಸಿದ್ಧಾಂತಕ್ಕೂ ಕುವೆಂಪು ನಿಲುವಿಗೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಹೇಳಿದರು. ಸದಾನಂದ ಗೌಡರು ಕಾಂಗ್ರೆಸ್ ಗೆ ಕೊನೆ ಚುನಾವಣೆ ಎಂದಿದ್ದಾರೆ. ಆದರೆ ಕಾಂಗ್ರೆಸ್ […]