ಕರ್ನಾಟಕದ ಮೊದಲ ಲೋಕಾಯುಕ್ತರಾಗಿದ್ದ ಎನ್​. ವೆಂಕಟಾಚಲ ನಿಧನ

Wednesday, October 30th, 2019
N-Venkatachala

ಬೆಂಗಳೂರು : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಿವೃತ್ತ ಲೋಕಾಯುಕ್ತ ಎನ್. ವೆಂಕಟಾಚಲ(90) ಅವರು ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ ರಾಮಯ್ಯ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ದೈವಾಧೀನರಾಗಿದ್ದಾರೆ. ಸದ್ಯ ರಾಮಯ್ಯ ಆಸ್ಪತ್ರೆಯಲ್ಲಿರುವ ಪಾರ್ಥಿವ ಶರೀರವನ್ನು ಮಧ್ಯಾಹ್ನ 12 ಗಂಟೆಗೆ ಸದಾಶಿವನಗರದ ಮಹಾಲಕ್ಷ್ಮಿ ದೇವಾಲಯ ರಸ್ತೆಯಲ್ಲಿರುವ ಮನೆಗೆ ತರಲಿದ್ದಾರೆ. ನಾಳೆ ಸಾರ್ವಜನಿಕ ದರ್ಶನಕ್ಕೆ ಇಡುವ ಸಾಧ್ಯತೆ ಇದೆ. ನಂಜೇಗೌಡ ವೆಂಕಟಾಚಲ ಅವರ ಪೂರ್ಣ ಹೆಸರು. ಇವರು 1930 ಜುಲೈ 3ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಮಿತ್ತೂರು ಗ್ರಾಮದಲ್ಲಿ ಜನಿಸಿದರು. […]

ಬೆಂಗಳೂರಲ್ಲಿ ಮಳೆ ಅನಾಹುತ ತಡೆಯಲು ಮುನ್ನೆಚ್ಚರಿಕೆ ಕ್ರಮ: ಡಾ. ಜಿ.ಪರಮೇಶ್ವರ್

Tuesday, September 25th, 2018
parameshwar

ಬೆಂಗಳೂರು: ಸೆಪ್ಟೆಂಬರ್‌ನಲ್ಲಿ ‌ನಿರೀಕ್ಷೆಗೂ‌ ಮೀರಿ ಮಳೆಯಾಗಿದ್ದು, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದ ತಮ್ಮ ಗೃಹ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ಸುಮಾರು 300 ಮರಗಳು ಧರೆಗುರುಳಿದ್ದು, ಶೀಘ್ರವೇ ತೆರವುಗೊಳಿಸುವ ಕೆಲಸ ಮಾಡಲಾಗುತ್ತಿದೆ. ಇದಕ್ಕಾಗಿ ಪ್ರತ್ಯೇಕ ತಂಡ ರಚಿಸಲಾಗಿದೆ.‌ ತಗ್ಗು ಪ್ರದೇಶದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಲು ವಲಯವಾರು ತಂಡಗಳು‌ ಕೆಲಸ‌ ಮಾಡುತ್ತಿವೆ ಎಂದು ಹೇಳಿದರು. ರಸ್ತೆ ಗುಂಡಿ ಮುಚ್ಚಲು ಹೈಕೋರ್ಟ್ ಆದೇಶ‌ ನೀಡಿದ್ದು, ಈ […]

ಕಪ್ಪುಹಣ ಸಕ್ರಮ ಮಾಡಿಕೊಂಡ ಪ್ರಕರಣದಲ್ಲಿ ನನ್ನನ್ನು ಸಿಲುಕಿಸುವ ಷಡ್ಯಂತ್ರ ನಡೆಯುತ್ತಿದೆ: ಡಿ.ಕೆ.ಶಿವಕುಮಾರ್

Saturday, June 30th, 2018
d-k-shivkumar

ಬೆಂಗಳೂರು: ಕಪ್ಪುಹಣ ಸಕ್ರಮ ಮಾಡಿಕೊಂಡ ಪ್ರಕರಣದಲ್ಲಿ ನನ್ನನ್ನು ಸಿಲುಕಿಸುವ ಷಡ್ಯಂತ್ರ ನಡೆಯುತ್ತಿದ್ದು, ಇದರ ವಿರುದ್ಧ ಕಾನೂನು ರೀತಿಯಲ್ಲಿಯೇ ಹೋರಾಟ ನಡೆಸುತ್ತೇನೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಪ್ಪು ಹಣ ಸಕ್ರಮ ಆರೋಪ ಪ್ರಕರಣ ಸಂಬಂಧ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸಿಬಿಐ ನ್ಯಾಯಾಲಯ ವಜಾ ಮಾಡಿದೆ. ನಮಗೂ ಅದಕ್ಕೂ ಸಂಬಂಧ ಇಲ್ಲ. ಆದರೂ ನಮ್ಮನ್ನು ಸೇರಿಸಬೇಕೆಂಬ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಆದರೆ ನಾನು ಅರ್ಜಿಗಿರ್ಜಿ ಹಾಕುವ ಯೋಚನೆ […]