ಓದುವ ಹವ್ಯಾಸದಿಂದ ವ್ಯಕ್ತಿತ್ವ ವಿಕಸನ : ಹುಕ್ಕೇರಿ ಸದಾಶಿವ ಮಹಾಸ್ವಾಮೀಜಿ

Saturday, August 10th, 2024
Hukkeri

ಉಜಿರೆ: ಆಟ-ಪಾಠಗಳು ಜೊತೆಯಾಗಿದ್ದಾಗ ಶಿಕ್ಷಣ ಅರ್ಥಪೂರ್ಣವಾಗಿದ್ದು ವಿದ್ಯಾರ್ಥಿಗಳು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಪುಸ್ತಕದ ಜೊತೆ ಇದ್ದಾಗ ಮಸ್ತಕದ ವಿಕಾಸವೂ ಆಗುವುದರಿಂದ ವಿದ್ಯಾರ್ಥಿಗಳು ಓದುವ ಹವ್ಯಾಸವನ್ನು ಬೆಳೆಸಿಕೊಂಡು ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಹಾವೇರಿಯ ಹುಕ್ಕೇರಿ ಮಠದ ಸದಾಶಿವ ಮಹಾಸ್ವಾಮೀಜಿ ಹೇಳಿದರು. ಅವರು ಶನಿವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ಶಾಂತಿವನ ಟ್ರಸ್ಟ್ ನಿಂದ ಪ್ರಕಟಿಸಿದ “ಜ್ಞಾನದರ್ಶಿನಿ ಮತ್ತು ಜ್ಞಾನವರ್ಷಿಣಿ” ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಪುಸ್ತಕಗಳನ್ನು ಓದುವುದರಿಂದ ಜ್ಞಾನವೃದ್ಧಿಯೊಂದಿಗೆ ಮಸ್ತಕದ ವಿಕಾಸವೂ ಆಗುತ್ತದೆ. ಕಾಲಹರಣ ಮಾಡುವ ಮೊಬೈಲ್ ಫೋನ್ […]