ಸರಕಾರದ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ

Monday, June 7th, 2021
Horatti

ಹುಬ್ಬಳ್ಳಿ : ಮನುಷ್ಯನಿಗೆ ಎಲ್ಲ ಭಾಗ್ಯಗಳಿಗಿಂತ ಆರೋಗ್ಯ ಭಾಗ್ಯವೇ ಮುಖ್ಯವಾದುದು. ಆರೋಗ್ಯದಿಂದ ಇದ್ದಾಗ ಮಾತ್ರ ಜೀವನ ಎಲ್ಲ ಸುಖ ಸಂತೋಷಗಳನ್ನು ಅನುಭವಿಸಲು ಸಾಧ್ಯವಾಗುತ್ತದೆ ಎಂದು ಮಾನ್ಯ ವಿಧಾನ ಪರಿಷತ್ತಿನ ಸಭಾಪತಿಯವರಾದ ಬಸವರಾಜ ಹೊರಟ್ಟಿ ಅವರು ಹೇಳಿದರು. ಹುಬ್ಬಳ್ಳಿಯ ತಮ್ಮ ಜೀವನಾಡಿಯಾದ ನಿಸರ್ಗ ತೋಟದಲ್ಲಿ ಕೆಲಸ ಮಾಡುತ್ತಿರುವ ಕೃಷಿಕರು ಮತ್ತು ಕಾರ್ಮಿಕರಿಗೆ ಹಾಗೂ ಸುತ್ತುಮುತ್ತಲಿನ ಗ್ರಾಮದ ಜನರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೊವಿಡ್ ನ ಇಂದಿನ ಸಂದರ್ಭದಲ್ಲಿ ಪ್ರತಿಯೊಬ್ಬರೂ ತಮ್ಮ ಆರೋಗ್ಯದ […]

ಸಿಎಂ ಗೆ ವಿಧಾನ ಪರಿಷತ್‌ ಸಭಾಪತಿ ಹೊರಟ್ಟಿ ಪತ್ರ

Sunday, June 6th, 2021
Horatti

ಬೆಂಗಳೂರು: ಸಿಎಂ ಯಡಿಯೂರಪ್ಪಗೆ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಶಿಕ್ಷಕರ ಕುರಿತು ಪತ್ರ ಬರೆದಿದ್ದಾರೆ. ಅವರ ಪತ್ರದ ವಿವರ ಈ ಕೆಳಗಿನಂತಿದೆ. ರಾಜ್ಯದಲ್ಲಿ ಮಾಹಾಮಾರಿ ಕೊರೋನಾ ಸೋಂಕು ತೀವ್ರವಾಗಿ ಹರಡುತ್ತಿದ್ದ ಹಿನ್ನೆಲೆಯಲ್ಲಿ ತಮ್ಮ ನೇತೃತ್ವದ ಸರಕಾರ ಕೈಗೊಂಡ ಲಾಕ್‌ಡೌನ್ ಸಮಯೋಚಿತ ಹಾಗೂ ಅವಶ್ಯಕ ನಿರ್ಧಾರದ ಆರಂಭದ ದಿನಗಳಿಂದ ನನ್ನ ಗಮನಕ್ಕೆ ಬಂದಿರುವ ಹಲವು ವಿಷಯಗಳ ಕುರಿತು ಸಲಹೆಗಳ ರೂಪದಲ್ಲಿ ತಮಗೆ ಅನೇಕ ಪತ್ರಗಳನ್ನು ಬರೆದಿದ್ದೇನೆ. ಅವುಗಳಲ್ಲಿ ನಾನು ನೀಡಿರುವ ಬಹುತೇಕ ಸಲಹೆಗಳನ್ನು ತಾವು ಮಾನ್ಯ ಮಾಡಿ […]

ದೈಹಿಕ ಶಿಕ್ಷಣ ಪರಿವೀಕ್ಷಕರ ಮುಂಬಡ್ತಿ ಕುರಿತು ಶಿಕ್ಷಣ ಸಚಿವರಿಗೆ ಸಭಾಪತಿ ಪತ್ರ

Tuesday, May 25th, 2021
Basavaraj Horatti

ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆಯ ಗ್ರೂಪ್ ‘ಬಿ’ ದೈಹಿಕ ಶಿಕ್ಷಣ ಪರಿವೀಕ್ಷಕರ ತತ್ಸಮಾನ ವೃಂದದ ಹುದ್ದೆಗಳಿಗೆ ಬಡ್ತಿ ಕೊಡಲು ಕೇವಲ ಬೆಂಗಳೂರು ಮತ್ತು ಮೈಸೂರು ಪ್ರಾಧಿಕಾರವನ್ನಾಗಿ ಮಾಡಿ ಉಳಿದ ಬೆಳಗಾವಿ ಮತ್ತು ಕಲಬುರ್ಗಿ ವಿಭಾಗಗಳನ್ನು ಬಿಟ್ಟು ಬಡ್ತಿ ನೀಡುತ್ತಿರುವ ಕುರಿತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. 2008 ರಿಂದ 2016 ರವರೆಗೆ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರುಗಳಿಗೆ […]

ಶಿಕ್ಷಕರನ್ನು ಸರಕಾರಿ, ಅನುದಾನಿತ, ಖಾಸಗಿ ಅನುದಾನ ರಹಿತ, ಅತಿಥಿ ಶಿಕ್ಷಕರೆಂಬ ಭೇದಭಾವ ಮಾಡದೇ ಶಿಕ್ಷಕರಿಗೆ ಎಲ್ಲ ಸೌಲಭ್ಯ ನೀಡಿ

Monday, May 24th, 2021
Horatti

ಬೆಂಗಳೂರು : ರಾಜ್ಯದಲ್ಲಿ ಸುಮಾರು 60 ಸಾವಿರಕ್ಕೂ ಹೆಚ್ಚು ಶಿಕ್ಷಕರು ಕೋವಿಡ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಲ್ಲಿ ಸರಕಾರಿ, ಅನುದಾನಿತ ಹಾಗೂ ಖಾಸಗಿ ಅನುದಾನ ರಹಿತ ಮತ್ತು ಅತಿಥಿ (ಗುತ್ತಿಗೆ) ಶಿಕ್ಷಕರು ಸೇರಿದ್ದಾರೆ. ಈ ಎಲ್ಲಾ ಶಿಕ್ಷಕರನ್ನು ಆಸ್ಪತ್ರೆ, ರೈಲು ಮತ್ತು ಬಸ್ ನಿಲ್ದಾಣ, ಚೆಕ್‍ಪೋಸ್ಟ್‍ಗಳಲ್ಲಿ ಶಿಕ್ಷಕರನ್ನು ನಿಯೋಜಿಸಲಾಗಿದೆ, ಕೋವಿಡ್ ವಾರ್‍ರೂಮ್, ಸಹಾಯವಾಣಿಯಲ್ಲಿ ಇವರು ಕೆಲಸ ಮಾಡುತ್ತಿರುವುದಲ್ಲದೇ ಸೋಂಕಿತರ ಮನೆಗೇ ಹೋಗಿ, ಅವರ ಮತ್ತು ಪ್ರಾಥಮಿಕ, ದ್ವಿತೀಯ ಸಂಪರ್ಕಿತರ ವಿವರಗಳನ್ನು ಸಂಗ್ರಹಿಸಿ, ಅವರ ಕುಟುಂಬದವರೊಂದಿಗೆ ಫೋಟೋ ತೆಗೆಸಿ, ಅದನ್ನು […]