ಬಂಟ್ವಾಳ: ಸಮಗ್ರ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲನೆ
Tuesday, October 10th, 2017ಮಂಗಳೂರು: ಸಮಗ್ರ ಕುಡಿಯುವ ನೀರು ಯೋಜನೆಯ ಕಾಮಗಾರಿ,ಪುರಸಭಾ ವ್ಯಾಪ್ತಿಯ ನೇತ್ರಾವತಿ ನದಿಯನ್ನು ಮೂಲವಾಗಿರಿಸಿಕೊಂಡು ಯು.ಐ.ಡಿ.ಎಸ್.ಎಸ್.ಎಂ.ಟಿ ಯೋಜನೆಯಡಿ 57.79 ಕೋಟಿ ರೂ. ವೆಚ್ಚದಲ್ಲಿ ಪ್ರಗತಿಯಲ್ಲಿದ್ದು, ಶೀಘ್ರವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಅವರು ಪುರಸಭಾ ವ್ಯಾಪ್ತಿಯ ಸಮಗ್ರ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ಸೋಮವಾರ ಸಂಜೆ ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಂದಿನ 30ವರ್ಷಗಳವರೆಗಿನ ಜನಸಂಖೆಯನ್ನು ಆಧರಿಸಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು, ದಿನವೊಂದಕ್ಕೆ ಒಟ್ಟು 42 ಲಕ್ಷ ಲೀಟರ್ ಕುಡಿಯುವ […]