ಕೆಆರ್‌ಡಿಎಲ್‌ನ ಕಾಮಗಾರಿಗಳ ಸಮಗ್ರ ತನಿಖೆಗೆ ಸದನ ಸಮಿತಿ ರಚಿಸಲು ತೀರ್ಮಾನ :ದ.ಕ.ಜಿ.ಪಂ.
Tuesday, October 17th, 2017ಮಂಗಳೂರು: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ದಿ ನಿಯಮಿತ (ಕೆಆರ್‌ಡಿಎಲ್)ದಿಂದ ದ.ಕ. ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಆಗಿದೆ ಎನ್ನಲಾದ ಹಗರಣಗಳ ತನಿಖೆಗೆ ಸದನ ಸಮಿತಿಯನ್ನು ಮರು ರಚಿಸಲು ದ.ಕ. ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಯಿತು. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕಳೆದ ಆಗಸ್ಟ್ ತಿಂಗಳಲ್ಲಿ ನಡೆದ ಸಾಮಾನ್ಯ ಸಭೆಯ ವೇಳೆ ಸದಸ್ಯರ ಆರೋಪ, ಆಗ್ರಹದ ಮೇರೆಗೆ ಕೆಆರ್‌ಡಿಎಲ್‌ನ ಕಾಮಗಾರಿಗಳ ಸಮಗ್ರ ತನಿಖೆಗೆ ಸದನ ಸಮಿತಿ ರಚಿಸಲು ತೀರ್ಮಾನಿಸಲಾಗಿತ್ತು. ಶುದ್ಧ […]