ಗ್ರಾಮೀಣ ಜನರ ಸಮಸ್ಯೆನಿವಾರಣೆಗೆ ಮಾಧ್ಯಮ ರಂಗದ ನಿರಂತರ ಪ್ರಯತ್ನ ಇತರರಿಗೆ ಮಾದರಿ -ಮುಲ್ಲೈ ಮುಗಿಲನ್

Tuesday, October 29th, 2024
Kutluru

ಮಂಗಳೂರು : ಗ್ರಾಮೀಣ ಭಾಗದ ಜನರ ಸಮಸ್ಯೆ ಗಳ ಬಗ್ಗೆ ಪ್ರಜಾಪ್ರಭುತ್ವದ ನಾಲ್ಕನೆ ಅಂಗವೆಂದು ಪರಿಗಣಿಸಲ್ಪಟ್ಟ ಮಾಧ್ಯಮ ರಂಗದ ಪ್ರತಿನಿಧಿಗಳು ಗಮನ ಹರಿಸಿ,ನಿವಾರಣೆಗೆ ನಿರಂತರವಾಗಿ ಪ್ರಯತ್ನಿ ಸುತ್ತಿರುವುದು ಇತರರಿಗೆ ಮಾದರಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಎಂಸಿಎಫ್ ಸಂಸ್ಥೆಯ ಸಿಎಸ್ ಆರ್ ನಿಧಿಯ ಮೂಲಕ ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸೋಮವಾರ ಸಮವಸ್ತ್ರ […]

ಮಕ್ಕಳ ಹಿತದೃಷ್ಟಿಯಿಂದ ಎಲ್ಲರೂ ನ್ಯಾಯಾಲಯದ ಆದೇಶ ಪಾಲಿಸಬೇಕು ಸಿಎಂ ಬಸವರಾಜ ಬೊಮ್ಮಾಯಿ

Tuesday, March 15th, 2022
CM Hijab

ಬೆಂಗಳೂರು : ಉಚ್ಛ ನ್ಯಾಯಾಲಯವು ವಸ್ತ್ರಸಂಹಿತೆಯ ಕುರಿತ ಪ್ರಕರಣದಲ್ಲಿ ತನ್ನ ತೀರ್ಪನ್ನು ಪ್ರಕಟಿಸಿದೆ. ಸಮವಸ್ತ್ರವನ್ನು ಎತ್ತಿ ಹಿಡಿದಿದೆ ಮತ್ತು ಹಿಜಾಬ್ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎನ್ನುವುದನ್ನು ಹೇಳಿದೆ. ಮಕ್ಕಳ ಹಿತದೃಷ್ಟಿಯಿಂದ ಎಲ್ಲರೂ ನ್ಯಾಯಾಲಯದ ಆದೇಶ ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ಈ ವಿಷಯ ತಿಳಿಸಿದರು. “ಇದು ನಮ್ಮ ಮಕ್ಕಳ ಭವಿಷ್ಯ ಹಾಗೂ ಶಿಕ್ಷಣದ ಪ್ರಶ್ನೆ. ಮಕ್ಕಳಿಗೆ ವಿದ್ಯೆಗಿಂತ ಮುಖ್ಯವಾದುದ್ದು ಬೇರೊಂದಿಲ್ಲ. ಹೀಗಾಗಿ ಉಚ್ಚ ನ್ಯಾಯಾಲಯದ ತ್ರಿ […]

ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡುವ ಹಾಗಿಲ್ಲ, ಹಿಜಾಬ್ ಧರಿಸುವುದು ಧಾರ್ಮಿಕ ಆಚರಣೆಯಲ್ಲ – ಹೈಕೋರ್ಟ್

Tuesday, March 15th, 2022
Hijab Ban

ಬೆಂಗಳೂರು: ಉಡುಪಿಯ ಕಾಲೇಜೊಂದರ ಆರು ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ತರಗತಿಗೆ ಪ್ರವೇಶ ನಿರಾಕರಿಸಿದ ಕಾಲೇಜು ಆಡಳಿತವನ್ನು ವಿರೋಧಿಸಿ ಕರಾವಳಿಯಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ) ವಿವಾದ ಆರಂಭಸಿತ್ತು. ಬಳಿಕ ನಡೆದ ಬೆಳವಣಿಗೆಗಳಲ್ಲಿ ವಿವಾದ ಕೋರ್ಟ್ ಮೆಟ್ಟಲೇರಿತ್ತು. ಈಗ ಹೊರಬಿದ್ದ ಕೋರ್ಟ್ ತೀರ್ಪಿನಂತೆ  ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡುವ ಹಾಗಿಲ್ಲ, ಸಮವಸ್ತ್ರವನ್ನು ಕಡ್ಡಾಯ ಮಾಡುವುದು ಸಂವಿಧಾನದ 19 (1) (ಎ) ಮತ್ತು 25 ರ ಅಡಿಯಲ್ಲಿ ಖಾತರಿಪಡಿಸಲಾದ ಮೂಲಭೂತ ಹಕ್ಕುಗಳ ಉಲ್ಲಂಘನೆಯಲ್ಲ. ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್ […]

ಶಾಲೆಗಳಲ್ಲಿ ಪುಸ್ತಕ, ಸಮವಸ್ತ್ರ, ಲೇಖನ ಸಾಮಗ್ರಿ ಖರೀದಿಗೆ ಒತ್ತಾಯಿಸುವಂತಿಲ್ಲ

Tuesday, October 26th, 2021
Uniform

ಮಂಗಳೂರು :  ಜಿಲ್ಲೆಯಲ್ಲಿನ ಅನುದಾನಿತ, ಅನುದಾನ ರಹಿತ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಆಡಳಿತ ಮಂಡಳಿಯವರು ಖಾಸಗಿ ಶಾಲೆಗಳಿಂದಲೇ ಅಥವಾ ನಿರ್ದಿಷ್ಟ ಮಾರಾಟಗಾರರಿಂದಲೇ ಶಾಲಾ ಮಕ್ಕಳ ಪೋಷಕರು ನೋಟ್ ಪುಸ್ತಕಗಳನ್ನು, ಸಮವಸ್ತ್ರಗಳನ್ನು ಹಾಗೂ ಇತರೆ ಲೇಖನ ಸಾಮಾಗ್ರಿಗಳನ್ನು ಖರೀದಿಸುವಂತೆ ಒತ್ತಾಯಿಸುವಂತಿಲ್ಲ. ಪ್ರತಿ ತರಗತಿಗೆ ನಿಗದಿಪಡಿಸಿದ ನೋಟ್ ಪುಸ್ತಕಗಳನ್ನು, ಸಮವಸ್ತ್ರಗಳನ್ನು ಮತ್ತು ಇತರೆ ಲೇಖನ ಸಾಮಗ್ರಿಗಳನ್ನು ಮುಕ್ತ ಮಾರುಕಟ್ಟೆಯಿಂದ ಖರೀದಿಸಲು ಪೋಷಕರು ಸ್ವತಂತ್ರವಾಗಿರುತ್ತಾರೆ. ರಾಜ್ಯದ ಖಾಸಗಿ ಅನುದಾನಿತ, ಅನುದಾನ ರಹಿತ ಶಾಲೆಗಳನ್ನು ನೋಂದಣಿ ಮತ್ತು ಅನುಮತಿ ಪಡೆಯುವಾಗ […]

ವಹಿವಾಟು ಅಭಿವೃದ್ಧಿ ಯೋಜನೆ ರೂಪಿಸಲು ಕೈಮಗ್ಗ ನಿಗಮ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ

Tuesday, August 24th, 2021
BS bommai

ಬೆಂಗಳೂರು : ಕರ್ನಾಟಕ ಕೈಮಗ್ಗ ನಿಗಮದ ಪುನಶ್ಚೇತನಕ್ಕೆ ಕೂಡಲೇ ವಹಿವಾಟು ಅಭಿವೃದ್ಧಿಗೆ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅಧಿಕಾರಿಗಳಿಗೆ ಸೂಚಿಸಿದರು. ಮುಖ್ಯಮಂತ್ರಿ ಗೃಹ ಕಚೇರಿಯಲ್ಲಿ ಇಂದು ನಡೆದ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಹಣಕಾಸಿನ ಪರಿಸ್ಥಿತಿ ಸುಧಾರಣೆ ಕುರಿತ ಸಭೆಯಲ್ಲಿ ಈ ಸೂಚನೆ ನೀಡಿದರು. ನಿಗಮದ ವಾಣಿಜ್ಯ ಚಟುವಟಿಕೆಗಳನ್ನು ವಿಸ್ತರಿಸುವ ಮೂಲಕ ನಷ್ಟ ಭರಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು. ಶಿಕ್ಷಣ ಇಲಾಖೆಯ ಸಮವಸ್ತ್ರ ಪೂರೈಕೆಯಲ್ಲಿ ನಿಗಮಕ್ಕೆ ಆಗಿರುವ 10 ಕೋಟಿ ರೂ. ನಷ್ಟದಲ್ಲಿ 5 […]

ಜನವರಿ 1 ರಿಂದ ಎಸ್‌ಎಸ್‌ಎಲ್ಸಿ, ಪಿಯು ಕಾಲೇಜುಗಳು ಹಾಗೂ ವಿದ್ಯಾಗಮ ತರಗತಿಗಳು ಆರಂಭ

Thursday, December 24th, 2020
Suresh Kumar

ಬೆಂಗಳೂರು: ಕೊರೋನಾ ಹಿನ್ನಲೆಯಲ್ಲಿ ಮುಚ್ಚುಗಡೆಯಾಗಿದ್ದ ಶಾಲೆಗಳು ಜನವರಿ 1 ರಿಂದ ಆರಂಭಗೊಳ್ಳಲಿದೆ.  ಶಾಲೆ ಆರಂಭದ ನಿರ್ಧಾರದಲ್ಲಿ ಬದಲಾವಣೆ ಇಲ್ಲ. ಮುಂದಿನ ದಿನಗಳಲ್ಲಿ ಅಗತ್ಯವಿದ್ದರೆ ಸಭೆ ನಡೆಸಿ ಪರಿಶೀಲನೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಜನವರಿ 1 ರಿಂದಲೇ ಸಮವಸ್ತ್ರ ಮತ್ತು ಶೂ ವಿತರಣೆ ಮಾಡಲಾಗುವುದು ಹಾಗೂ ಈ ವರ್ಷ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಲಾಗುವುದಿಲ್ಲ. ಶಾಲೆ ಆರಂಭಕ್ಕೆ ಮೂರು ದಿನ ಮೊದಲು ಸಿಬ್ಬಂದಿ, ಶಿಕ್ಷಕರಿಗೆ ಕೋವಿಡ್ ಪರೀಕ್ಷೆ ನೆಗೆಟಿವ್ ಕಡ್ಡಾಯವಾಗಿರುತ್ತದೆ. […]