ಶಿಷ್ಯೋಪನಯನ: ವೈದ್ಯರು ರೋಗಿಗಳ ಸೇವೆಯೊಂದಿಗೆ ಸಮಾಜಸೇವೆ ಮತ್ತು ದೇಶಸೇವೆಯನ್ನು ಮಾಡಬೇಕು

Saturday, November 23rd, 2024
shishyopnayan

ಉಜಿರೆ: ಸಂಸ್ಕೃತ, ಭಗವದ್ಗೀತೆ, ವೇದ, ಉಪನಿಷತ್ತುಗಳು, ರಾಮಾಯಣ ಮತ್ತು ಮಹಾಭಾರತದಂತಹ ಪುರಾಣಗಳ ಅಧ್ಯಯನ ನಮ್ಮ ಸಾರ್ಥಕ ಬದುಕಿಗೆ ಉಪಯುಕ್ತ ಮಾಹಿತಿ, ಮಾರ್ಗದರ್ಶನದೊಂದಿಗೆ ಭದ್ರಬುನಾದಿಯನ್ನು ನೀಡುತ್ತದೆ ಎಂದು ಉತ್ತರಾಖಂಡದ ರುದ್ರಪ್ರಯಾಗದ ಸಂತ ಸದಾನಂದಗಿರಿ ಸ್ವಾಮಿ ಮಹಾರಾಜರು ಹೇಳಿದರು. ಅವರು ಶುಕ್ರವಾರ ಉಜಿರೆಯಲ್ಲಿ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಬಿ.ಎನ್.ವೈ.ಎಸ್. ಪದವಿ ಮತ್ತು ಸ್ನಾತ್ತಕೋತ್ತರ ಪದವಿ ಅಧ್ಯಯನದ ಪ್ರಥಮ ವರ್ಷದ ತರಗತಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಶಿಷ್ಯೋಪನಯನ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ಪ್ರತಿಯೊಬ್ಬರಿಗೂ ಏಕಾಗ್ರತೆ ಅನಿವಾರ್ಯವಾಗಿದ್ದು […]

ಪೋಲಿಯೋ ಲಿಸಿಕಾ ಕಾರ್ಯಕ್ರಮ ಯಶಸ್ವಿ

Tuesday, January 19th, 2016
Kerala polio drops

ಕಾಸರಗೋಡು: ಸಂಪೂರ್ಣ ಪೋಲಿಯೋ ಮುಕ್ತ ರಾಷ್ಟ್ರವಾಗಿಸುವ ಗುರಿಯೊಂದಿಗೆ ನಡೆಸಲಾದ ಪ್ರಸಕ್ತ ಸಾಲಿನ ಮೊದಲ ಪೋಲಿಯೋ ರೋಗ ಪ್ರತಿರೋಧ ಕಾರ್ಯಕ್ರಮದಂಗವಾಗಿ ಭಾನುವಾರ ಜಿಲ್ಲೆಯಾದ್ಯಂತ 5 ವರ್ಷಗಳಿಗಿಂತ ಕೆಳಗಿನ ಹರೆಯದ ಮಕ್ಕಳಿಗೆ ಲಸಿಕೆ ನೀಡಲಾಯಿತು. ಭಾನುವಾರ ಬೆಳಿಗ್ಗೆ 8 ಗಂಟೆಗೆ ಆರಂಭಗೊಂಡ ಲಸಿಕೆ ವಿತರಣಾ ಕಾರ್ಯಕ್ರಮ ಸಂಜೆ5 ಗಂಟೆಯ ತನಕ ಯಶಸ್ವಿಯಾಗಿ ನಡೆಯಿತು.ಜಿಲ್ಲೆಯ 1997 ಬೂತ್ ಗಳಲ್ಲಿ ಲಸಿಕೆ ವಿತರಿಸಲಾಯಿತು.ಒಟ್ಟು 1,20,734 ಮಂದಿ ಮಕ್ಕಳಿಗೆ ಲಸಿಕೆ ನೀಡಲಾಗಿದೆಯೆಂದು ಪ್ರಾಥಮಿಕ ಅಂಕಿಅಂಶಗಳು ತಿಳಿಸಿವೆ.119 ಸಂಚಾರಿ ಬೂತ್ ಗಳ ಮೂಲಕವೂ ಲಸಿಕಾ ವಿತರಣೆಗೆ […]