ಒಕ್ಕೂಟ ರಚನೆಗೆ ನಿರ್ಧಾರ, ಜಿಲ್ಲಾ ಶಾಮಿಯಾನ ಮಾಲೀಕರ ಸಂಘ ಜಂಟಿ ಸಮಾಲೋಚನಾ ಸಭೆ

Tuesday, October 15th, 2024
District-shamiyana

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲೀಕರ ಸಂಘದ ನೇತೃತ್ವದಲ್ಲಿ ಜಿಲ್ಲಾ ಕ್ಯಾಟರಿಂಗ್, ಧ್ವನಿ, ಬೆಳಕು ಹಾಗೂ ಪ್ಲವರ್ ಡೆಕೋರೇಶನ್ ಮಾಲೀಕರ ಸಂಘಗಳ ಜಂಟಿ ಸಮಾಲೋಚನಾ ಸಭೆ ಶಾಮಿಯಾನ ಮಾಲೀಕರ ಸಂಘದ ಜಿಲ್ಲಾ ಅಧ್ಯಕ್ಷ ಬಾಬು ಕೆ. ವಿಟ್ಲ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದು, ಒಕ್ಕೂಟ ರಚನೆಗೆ ನಿರ್ಧರಿಸಲಾಯಿತು. ಏಕರೂಪಿ ದರ ಪಟ್ಟಿ ಪಾಲನೆ, ಬಿಲ್ ವಸೂಲಾತಿ ಮೊದಲಾದ ಸಮಸ್ಯೆಗಳನ್ನು ಸರಿಪಡಿಸಲು ಒಗ್ಗಟ್ಟಿನಲ್ಲಿ ಸಮನ್ವಯತೆಯಿಂದ ಗ್ರಾಹಕರಿಗೆ ನ್ಯಾಯಯುತ ಸೇವೆ ನೀಡಲು ಒಕ್ಕೂಟ ರಚನೆಯಿಂದ […]

ಪುತ್ತಿಲರಿಗೆ ಸರಿಯಾದ ಸ್ಥಾನಮಾನ ನೀಡಿದ್ದಲ್ಲಿ ಬಿಜೆಪಿ ಸೇರ್ಪಡೆ, ಇಲ್ಲವಾದಲ್ಲಿ ಲೋಕಸಭೆಗೆ ಸ್ಪರ್ಧೆ

Monday, February 5th, 2024
puttila-parivara

ಪುತ್ತೂರು: ಪುತ್ತಿಲ ಪರಿವಾರದ ಕಾರ್ಯಕರ್ತರ ಸಮಾಲೋಚನಾ ಸಭೆ ನಡೆದಿದ್ದು ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಇನ್ನು ಮೂರು ದಿನಗಳಲ್ಲಿ ಪುತ್ತಿಲ ಪರಿವಾರ ಬಿಜೆಪಿ ಸೇರ್ಪಡೆ ಅಥವಾ ಲೋಕಸಭೆಯಲ್ಲಿ ಸ್ಫರ್ಧಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂದು ನಿರ್ಧರಿಸುವ ಘೋಷಣೆ ಮಾಡಲಾಗಿದೆ. ಪುತ್ತಿಲರಿಗೆ ಬಿಜೆಪಿ ಪುತ್ತೂರು ಮಂಡಲ ಅಧ್ಯಕ್ಷತೆ ನೀಡದಿದ್ದಲ್ಲಿ ಮುಂದೆ ಜಿಲ್ಲೆಯಲ್ಲಿ ಮಹಾ ರಾಜಕೀಯ ವಿಪ್ಲವ ನಡೆಯಲಿದೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಎಚ್ಚರಿಕೆ ನೀಡಿದ್ದಾರೆ. ಸೋಮವಾರ ಸಂಜೆ ಪುತ್ತೂರಿನ ಕೊಟೇಚ ಹಾಲ್‍ನಲ್ಲಿ ನಡೆದ ಪುತ್ತಿಲ […]

ಗುರುವಾಯನಕೆರೆ: ರಾಜ್ಯಮಟ್ಟದ ಸಮಾಲೋಚನಾ ಸಭೆ

Friday, November 10th, 2017
gurvaynkere

ಮಂಗಳೂರು: ’ಮಂಜುನಾಥಸ್ವಾಮಿ ಹೆಸರಿನಲ್ಲಿ ಮೀಟರ್ ಬಡ್ಡಿ ವ್ಯವಹಾರ ನಡೆಸುತ್ತಿರುವುದೇ ದೊಡ್ಡ ಸೇವೆ ಎಂದು ವೀರೇಂದ್ರ ಹೆಗ್ಗಡೆಯವರು ಪ್ರಚಾರ ಮಾಡುತ್ತಿರುವುದನ್ನೇ ಸತ್ಯವೆಂದು ನಂಬಿ ಪ್ರಧಾನ ಮಂತ್ರಿಗಳು ಅವರನ್ನು ಉಜಿರೆಯಲ್ಲಿ ಭಾರೀ ಹೊಗಳಿದ್ದು ಸರಿಯಲ್ಲ. ಇವರ ಮೈಕ್ರೋಫೈನಾನ್ಸ್ ಕಾರ್ಪೊರೇಟ್‌ಗಿಂತ ಅಪಾಯಕಾರಿ. ಇದರ ವಿರುದ್ಧ ರಾಜ್ಯದ 30 ಜಿಲ್ಲೆಗಳಲ್ಲಿಯೂ ಜಾಗೃತಿ ಮೂಡಿಸಲು ನಮ್ಮ ಒಕ್ಕೂಟದ ಮತ್ತು ಪ್ರಜಾಧಿಕಾರ ವೇದಿಕೆ-ಕರ್ನಾಟಕದ ನೂರಾರು ಎನ್‌ಜಿಒಗಳು ನಿರ್ಧರಿಸಿದೆ ಎಂದು ಗ್ರಾಮೀಣ ಮತ್ತು ನಗರಾಭಿವೃದ್ಧಿ ಸ್ವಯಂಸೇವಾ ಸಂಸ್ಥೆಗಳ ಒಕ್ಕೂಟ-ಕರ್ನಾಟಕ (ಫೆವಾರ್ಡ್-ಕೆ)ದ ಉಪಾಧ್ಯಕ್ಷ ಎಸ್.ಕುಮಾರ್ ಹೇಳಿದರು. ಜಂಟಿ ಕ್ರಿಯಾ ಸಮಿತಿ, […]

ಧರ್ಮಸ್ಥಳ ಲಕ್ಷ ದೀಪೋತ್ಸವ : ಸಮಾಲೋಚನಾ ಸಭೆ

Tuesday, October 31st, 2017
darmasthala

ಮಂಗಳೂರು: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ನವೆಂಬರ್ 13 ರಿಂದ18 ರ ವರೆಗೆ ನಡೆಯಲಿದ್ದು ಪೂರ್ವ ಸಿದ್ಧತೆಗಳ ಬಗ್ಗೆ ಸಮಾಲೋಚನಾ ಸಭೆ ಮಂಗಳವಾರ ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ನಡೆಯಿತು. ಧರ್ಮಸ್ಥಳಕ್ಕೆ ಮಂಗಳೂರು, ಪುತ್ತೂರು, ಪೆರಿಯಶಾಂತಿ, ಚಾರ್ಮಾಡಿ, ಪಟ್ಟಮೆ ಕಾರ್ಕಳ, ಬೆಳಾಲು, ನೆರಿಯಾ ಮೊದಲಾದ ಊರುಗಳಿಂದ ಸಂಪರ್ಕ ಕಲ್ಪಿಸುವ ರಸ್ತೆಗಳ ದುರಸ್ತಿ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸುವಂತೆ ಸಚಿವ ಬಿ.ರಮಾನಾಥರೈ ಲೋಕೋಪಯೋಗಿ ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕೆ.ಎಸ್.ಆರ್.ಟಿ.ಸಿ. ವತಿಯಿಂದ ರಾಜ್ಯದ ವಿವಿಧ ಭಾಗಗಳಿಂದ ವಿಶೇಷ ಬಸ್ ಸೌಲಭ್ಯ ಒದಗಿಸುವುದಾಗಿ ಅಧಿಕಾರಿಗಳು ತಿಳಸಿದರು. ಆರೋಗ್ಯ […]

ಮಂಗಳೂರು: ‘ಜಿಎಸ್‌ಟಿ, ಸಾಧಕ– ಬಾಧಕ’ ಕುರಿತ ಸಮಾಲೋಚನಾ ಸಭೆ

Monday, October 9th, 2017
GST

ಮಂಗಳೂರು: ಸರಕು ಮತ್ತು ಸೇವಾ ತೆರಿಗೆಯನ್ನು (ಜಿಎಸ್‌ಟಿ) ವಿವಿಧ ಹಂತಗಳಲ್ಲಿ ಸರಳೀಕರಣ ಮಾಡಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದು, ಎರಡನೇ ಹಂತದ ಸುಧಾರಣಾ ಕ್ರಮಗಳನ್ನು ಶೀಘ್ರದಲ್ಲಿ ಪ್ರಕಟಿಸಲಾಗುತ್ತದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್‌ಕುಮಾರ್‌ ಕಟೀಲ್‌ ತಿಳಿಸಿದರು. ನಗರದ ಡೊಂಗರಕೇರಿಯ ಕೆನರಾ ಪ್ರೌಢಶಾಲೆಯ ಸಭಾಂಗಣದಲ್ಲಿ ಶನಿವಾರ ನಡೆದ ‘ಜಿಎಸ್‌ಟಿ: ಸಾಧಕ– ಬಾಧಕ’ ಕುರಿತ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ‘ಅಕ್ಟೋಬರ್‌ 13ರ ಬಳಿಕ ಮೊದಲ ಹಂತದ ಸುಧಾರಣಾ ಕ್ರಮಗಳನ್ನು ಪ್ರಕಟಿಸಲು ಪ್ರಧಾನಿ ನಿರ್ಧರಿಸಿದ್ದರು. ಆದರೆ, ಮಾರುಕಟ್ಟೆಯಲ್ಲಿನ ಏರಿಳಿತಗಳಿಗೆ […]

ರಾಷ್ಟ್ರೀಯ ಹೆದ್ದಾರಿ : ಮಂದಗತಿಯ ಕಾಮಗಾರಿ, ಅಲ್ಲಲ್ಲಿ ಟೋಲ್‌ಗೇಟ್‌ – ಸಭೆ

Sunday, November 27th, 2011
DC Chennappa Gowda

ಮಂಗಳೂರು: ಸುರತ್ಕಲ್‌- ಬಿ.ಸಿ. ರೋಡ್‌ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಿರ್ವಹಣೆಯ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ  ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಹೆದ್ದಾರಿ ಚತುಷ್ಪಥ ಕಾಮಗಾರಿಯ ಬಗ್ಗೆ ನಾಗರಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಒಂದು ಟೋಲ್‌ಗೇಟ್‌ನಿಂದ ಕನಿಷ್ಠ 60 ಕಿ. ಮೀ. ದೂರದಲ್ಲಿ ಇನ್ನೊಂದು ಟೋಲ್‌ಗೇಟ್‌ ನಿರ್ಮಿಸಬಹುದು. ಅಲ್ಲದೆ ಮಹಾನಗರ ಪಾಲಿಕೆಯ ಗಡಿಯಿಂದ 10 ಕಿ. ಮೀ. ಅನಂತರ ಇನ್ನೊಂದು ಟೋಲ್‌ಗೇಟ್‌ ನಿರ್ಮಿಸಬಹುದು ಎನ್ನುವ ನಿಯಮವಿದೆ. ಬ್ರಹ್ಮರಕೂಟ್ಲುವಿನಲ್ಲಿ ರಾ. ಹೆದ್ದಾರಿಯಲ್ಲಿ ಟೋಲ್‌ಗೇಟ್‌ ನಿರ್ಮಿಸಲಾಗಿದ್ದು, ಬೈಕಂಪಾಡಿ ಪರಿಸರದಲ್ಲಿ ಇನ್ನೊಂದು […]