ಉಪಚುನಾವಣೆಯಲ್ಲಿ ನಾನು ಸೋತಿರಬಹುದು, ಹಾಗಂತ ನಾನು ಸತ್ತಿಲ್ಲ : ಎಚ್​. ವಿಶ್ವನಾಥ್ ಗುಡುಗು

Wednesday, December 18th, 2019
H.-Vishwanath

ಹುಣಸೂರು : ಉಪಚುನಾವಣೆಯಲ್ಲಿ ನಾನು ಸೋತಿರಬಹುದು. ಹಾಗಂತ ನಾನು ಸತ್ತಿಲ್ಲ. ರಾಜಕೀಯವಾಗಿ, ಸಾರ್ವಜನಿಕವಾಗಿ ಅಭಿವೃದ್ಧಿ ವಿಚಾರದಲ್ಲಿ ಬದುಕಿದ್ದೇನೆ ಎಂದು ಹುಣಸೂರು ಪರಾಜಿತ ಬಿಜೆಪಿ ಅಭ್ಯರ್ಥಿ ಎಚ್. ವಿಶ್ವನಾಥ್ ತಿಳಿಸಿದ್ದಾರೆ. ಸೋಲಿನ ಬಳಿಕ ಮಾತನಾಡಿದ ಅವರು, ಬಿಜೆಪಿ ಸೇರಲು ನಾನು ಹಣ ತಿಂದಿದ್ದೇನೆ ಎಂದು ಕೆಲವರು ಅಪಪ್ರಚಾರ ನಡೆಸುತ್ತಿದ್ದಾರೆ. ಸತ್ಯವಂತರಂತೆ ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಹಣ ತಿಂದವನಲ್ಲ. ತಿನ್ನಿಸಿದವನು. ಯಾರ ಅನ್ನಕ್ಕೂ ಕೈ ಹಾಕಿಲ್ಲ ಎಂದು ಗುಡುಗಿದರು. ನಾನು ಯಾರ ಅನ್ನವನ್ನು ಕಿತ್ತುಕೊಂಡಿಲ್ಲ. 85ಲಕ್ಷ ಮಕ್ಕಳಿಗೆ […]

ಸಿದ್ದರಾಮಯ್ಯ ಮತ್ತು ಎಚ್. ಡಿ.ಕುಮಾರಸ್ವಾಮಿ ಪರಸ್ಪರ ಆರೋಪ ಮಾಡುದನ್ನು ನಿಲ್ಲಿಸಬೇಕು : ಬಸವರಾಜ ಹೊರಟ್ಟಿ

Tuesday, September 24th, 2019
kumarswamy

ಹುಬ್ಬಳ್ಳಿ : ಸಮ್ಮಿಶ್ರ ಸರ್ಕಾರದಲ್ಲಿ ಪಾಲುದಾರರಾಗಿದ್ದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್. ಡಿ.ಕುಮಾರಸ್ವಾಮಿ ಅವರು ಪರಸ್ಪರ ಆರೋಪ ಮಾಡುದನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ತಪ್ಪು ಸಂದೇಶ ರವಾನೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 14 ತಿಂಗಳ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷರಾದ ಇಬ್ಬರು ನಾಯಕರು ಇದೀಗ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಆರೋಪಗಳನ್ನು ಮಾಡುತ್ತಿರುವುದು ಎರಡೂ ಪಕ್ಷಗಳಿಗೂ ಒಳ್ಳೆಯದಲ್ಲ ಎಂಬುದನ್ನು […]

ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆ ವಿಚಾರ ಸಭೆಯಲ್ಲಿ ಚರ್ಚಿಸಿದ್ದೇವೆ: ಹೆಚ್ ಕೆ ಪಾಟೀಲ್

Wednesday, July 11th, 2018
h-k-patil

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆ ವಿಚಾರ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಿದ್ದೇವೆ ಎಂದು ಮಾಜಿ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಮ್ಮ ಶಾಸಕಾಂಗ ನಾಯಕರಿಗೆ ಈ ಸಂಬಂಧ ಪತ್ರ ಬರೆದಿದ್ದೇವೆ. ಮೂರು ವಿಚಾರಗಳ ಬಗ್ಗೆ ಪತ್ರದಲ್ಲಿ ಪ್ರಸ್ತಾಪ ಮಾಡಿಲಾಗಿದ್ದು, ಉತ್ತರ ಕರ್ನಾಟಕಕ್ಕೆ ಅನ್ಯಾಯ, ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳಾಗಲಿ, ಹೊಸ ಯೋಜನೆ ಘೋಷಣೆ ಮಾಡೋದಾಗಲಿ ಆಗಿಲ್ಲ ಈ ವಿಚಾರ ತಿಳಿಸಿದ್ದೇವೆ. ಇವುಗಳ ಬಗ್ಗೆ ಶಾಸಕಾಂಗ ಸಭೆಯಲ್ಲೂ ಚರ್ಚೆ ಮಾಡಿದ್ದೇವೆ […]

ತೀವ್ರ ಕುತೂಹಲ ಕೆರಳಿಸಿರುವ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್​ಗೆ ಕ್ಷಣಗಣನೆ..!

Wednesday, July 4th, 2018
parameshwar

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ಗೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ಮಂಡಿಸಲಿರುವ ಬಜೆಟ್ನಲ್ಲಿ ಕೃಷಿ ಸಾಲ ಮನ್ನಾ ಆಗುವ ಬಗ್ಗೆ ರೈತ ಸಮೂಹ ಅಪಾರ ನಿರೀಕ್ಷೆ ಇಟ್ಟುಕೊಂಡಿದೆ. ಮೈಸೂರು ಜಿಲ್ಲೆಯಲ್ಲಿ ಸಹಕಾರಿ ಬ್ಯಾಂಕ್, ರಾಷ್ಟ್ರೀಕೃತ ಬ್ಯಾಂಕ್, ವಾಣಿಜ್ಯ ಬ್ಯಾಂಕ್ಗಳಲ್ಲಿ ಎಲ್ಲಾ ತರಹದ ಕೃಷಿ ಸಾಲ ಸೇರಿ ಜಿಲ್ಲೆಯ 1.70 ಲಕ್ಷ ರೈತರು ಸುಮಾರು 7 ಸಾವಿರ ಕೋಟಿ ರೂ. ಸಾಲ ಹೊಂದಿದ್ದಾರೆ. 65 ಸಾವಿರಕ್ಕೂ ಹೆಚ್ಚು ರೈತರು ಸಹಕಾರಿ ಬ್ಯಾಂಕಿನಲ್ಲಿ […]

ವಾರದೊಳಗೆ 30 ಶಾಸಕರಿಗೆ ನಿಗಮ-ಮಂಡಳಿ‌ ಸ್ಥಾನ‌: ಸಿದ್ದರಾಮಯ್ಯ

Friday, June 15th, 2018
siddaramaih

ಮೈಸೂರು: ಸಮ್ಮಿಶ್ರ ಸರ್ಕಾರದಲ್ಲಿ ಅಸಮಾಧಾನಗೊಂಡಿರುವ ಶಾಸಕರಿಗೆ ನಿಗಮ-ಮಂಡಳಿ ಸ್ಥಾನ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಗಳಿಗೆ ಮುಂದಿನ ಒಂದು ವಾರದೊಳಗೆ ಸಿಎಂ ಹಾಗೂ ಉಪ ಮುಖ್ಯಮಂತ್ರಿಗಳು ಚರ್ಚಿಸಿ 30 ಶಾಸಕರನ್ನು ನೇಮಕ ಮಾಡಲಿದ್ದಾರೆ ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. ಆದರೆ ಕೆಲ ಶಾಸಕರು ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿರುವುದರಿಂದ ಅವರ ಓಲೈಕೆಗೂ ತೆರೆಯಲ್ಲಿ ಕಸರತ್ತು ನಡೆಯುತ್ತಿದೆ. ಈ ನಡುವೆ ನಿಗಮ-ಮಂಡಳಿ‌ ಸ್ಥಾನಕ್ಕೆ ತೃಪ್ತರಾಗುತ್ತಾರಾ ಎಂಬುವುದು ಕುತೂಹಲ ಮೂಡಿಸಿದೆ.