Blog Archive

ಬೀದಿ ವ್ಯಾಪಾರಿಗಳಿಗೆ “ಬಡವರ ಬಂಧು’ ಯೋಜನೆ ಪ್ರಾರಂಭಿಸಲು ಸರ್ಕಾರ ನಿರ್ಧಾರ: ಬಂಡೆಪ್ಪ ಕಾಶೆಂಪುರ್‌

Thursday, October 11th, 2018
bandeppa-3

ಮಂಗಳೂರು: ಮೀಟರ್‌ ಬಡ್ಡಿ ಮುಕ್ತ ಕರ್ನಾಟಕಕ್ಕಾಗಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ನೀಡುವ “ಬಡವರ ಬಂಧು’ ಯೋಜನೆಗೆ ದೀಪಾವಳಿ ಹಬ್ಬದ ಮೊದಲು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್‌ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಬುಧವಾರ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಯೋಜನೆಯಡಿ 2 ಸಾವಿರ ರೂ.ಗಳಿಂದ 10 ಸಾವಿರ ರೂ. ವರೆಗೆ ಬಡ್ಡಿ ರಹಿತ ಸಾಲ […]

ಸರ್ಕಾರದಿಂದ ಕಾರ್ಮಿಕರಿಗೆ ಮನೆ ನಿರ್ಮಾಣ ವೆಚ್ಚದಲ್ಲಿ ಹೆಚ್ಚಳ..!

Friday, July 20th, 2018
venkatramanappa

ಬೆಂಗಳೂರು: ಕಾರ್ಮಿಕರಿಗೆ ಮನೆ ನಿರ್ಮಾಣ ವೆಚ್ಚದಲ್ಲಿ ಹೆಚ್ಚಳ ಮಾಡಿದ್ದು, ೨ ಲಕ್ಷ ರೂ.ನಿಂದ ೫ ಲಕ್ಷಕ್ಕೆ ಮನೆ ನಿರ್ಮಾಣ ವೆಚ್ಚ ಹೆಚ್ಚಳ ಮಾಡಲು ನಿರ್ಧರಿಸಿದ್ದೇವೆ ಎಂದು ಕಾರ್ಮಿಕ ಸಚಿವ ವೆಂಕಟ್ರಮಣಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, 9ಲಕ್ಷಕ್ಕೆ ಮನೆ ಕಟ್ಟಲು ಆಗುವುದಿಲ್ಲ. ಹಾಗಾಗಿ ವೆಚ್ಚ ಹೆಚ್ಚಳ ಮಾಡಿದ್ದೇವೆ. ನಿವೇಶನ ಇರುವ ಕಾರ್ಮಿಕರಿಗೆ ಮಾತ್ರ ಮನೆ ನಿರ್ಮಾಣ ಮಾಡಿಕೊಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು. ರಾಜೀವ್ ಗಾಂಧಿ ವಸತಿ ನಿಗಮದಡಿ ಕಾರ್ಮಿಕರಿಗೆ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಹಂತ ಹಂತವಾಗಿ ಕಾರ್ಮಿಕರಿಗೆ ಮನೆಗಳ ನಿರ್ಮಾಣ […]

ರಾಜ್ಯದಲ್ಲಿ ಪ್ಲಾಸ್ಟಿಕ್ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲು ಮುಂದಾಗಿರುವ ಸರ್ಕಾರ..!

Saturday, July 14th, 2018
plastic-bottle

ಬೆಂಗಳೂರು: ರಾಜ್ಯದಲ್ಲಿ ಪ್ಲಾಸ್ಟಿಕ್ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲು ಮುಂದಾಗಿರುವ ಸರ್ಕಾರ, ತನ್ನಿಂದಲೇ ಮೊದಲ್ಗೊಂಡು ಪ್ಲಾಸ್ಟಿಕ್ ಬಳಸದಿರುವ ನಿರ್ಧಾರ ಕೈಗೊಂಡಿದೆ. ಹೌದು, ಈಗಾಗಲೇ ಪ್ಲಾಸ್ಟಿಕ್ ಬಳಕೆ ನಿಷೇಧದ ಬಗ್ಗೆ ಸರ್ಕಾರ ಜಾಗೃತಿ ಮೂಡಿಸುತ್ತಲೇ ಬರುತ್ತಿದೆ. ಆದರೆ ಈ ನಿಟ್ಟಿನಲ್ಲಿ ಸರ್ಕಾರಿ ಕಚೇರಿಗಳೇ ಪ್ಲಾಸ್ಟಿಕ್ ಬಳಕೆಯಲ್ಲಿ ಸ್ವನಿಯಂತ್ರಣ ತರುವಲ್ಲಿ ಹಿಂದೇಟು ಹಾಕುತ್ತಿವೆ. ಇದೀಗ ಪ್ಲಾಸ್ಟಿಕ್ ಬಳಕೆ ನಿಷೇಧವನ್ನು ಗಂಭೀರವಾಗಿ ತೆಗೆದುಕೊಂಡಿರುವ ಸರ್ಕಾರ, ಸರ್ಕಾರಿ ಕಚೇರಿಗಳಲ್ಲಿ ಇದರ ಅನುಷ್ಠಾನಕ್ಕೆ ಸುತ್ತೋಲೆ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಕೆ […]

ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ವಿರುದ್ಧ ಎಸಿಬಿಗೆ ದೂರು

Tuesday, June 12th, 2018
complient

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರ ವಿರುದ್ಧ ಅಧಿಕಾರ ದುರ್ಬಳಕೆ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಯಲ್ಲಿ ದೂರು ದಾಖಲಿಸಲಾಗಿದೆ. ಉದ್ಯೋಗ ಮತ್ತಿ ತರಬೇತಿ ಇಲಾಖೆಯ ಮಾಜಿ ನೌಕರ ಶಂಕರ ದೇವೇಗೌಡ ಎಂಬುವರು ಈ ದೂರು ನೀಡಿದ್ದಾರೆ. ಉದ್ಯೋಗ ಮತ್ತು ತರಬೇತಿ ಇಲಾಖೆಯ ಒಟ್ಟು 62 ಜನರಿಗೆ ಹಿಂಬಡ್ತಿ ನೀಡಿ ಸುಪ್ರೀಂ ಕೋರ್ಟ್ ಆದೇಶಿಸಿದೆ. ಆದರೂ ಮುಖ್ಯ ಕಾರ್ಯದರ್ಶಿ ರತ್ನ ಪ್ರಭಾ ಅವರು ಸುಪ್ರೀಂ ಕೋರ್ಟ್ ತೀರ್ಪಿಗೆ ವ್ಯತಿರಿಕ್ತವಾಗಿ ಸುಪ್ರೀಂ ಆದೇಶ ಜಾರಿಗೆ ತರದಂತೆ […]

ಹುತಾತ್ಮ ಯೋಧರ ಕುಟುಂಬಗಳ ಪರಿಹಾರವನ್ನು 25 ಲಕ್ಷಕ್ಕೆ ಹೆಚ್ಚಿಸಿದ ‘ಮಹಾ’ ಸರ್ಕಾರ

Thursday, February 1st, 2018
devendra-fadnavis

ಮುಂಬೈ: ಹುತಾತ್ಮ ಯೋಧರ ಕುಟುಂಬಗಳಿಗೆ ಮಹಾರಾಷ್ಟ್ರ ಸರ್ಕಾರ ನೀಡುತ್ತಿದ್ದ ಪರಿಹಾರ ಮೊತ್ತದಲ್ಲಿ ಹೆಚ್ಚಳ ಮಾಡಲಾಗಿದೆ. ಗಡಿಯಲ್ಲಿ ಮಡಿದ ಸೈನಿಕರ ಕುಟುಂಬಗಳಿಗೆ ಇನ್ಮುಂದೆ 25 ಲಕ್ಷ ರೂಪಾಯಿ ಪರಿಹಾರ ನೀಡಲಾವುದು ಎಂದು ಸಿಎಂ ದೇವೇಂದ್ರ ಫಡ್ನವಿಸ್‌ ಘೋಷಿಸಿದ್ದಾರೆ. ಬುಧವಾರ ನಡೆದ ಹುತಾತ್ಮರಿಗೆ ಗೌರವ ಅರ್ಪಣೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಿಎಂ ಫಡ್ನವಿಸ್‌ ಈ ಘೋಷಣೆ ಮಾಡಿದ್ದಾರೆ. ಮೊದಲು ಹುತಾತ್ಮ ಯೋಧರ ಕುಟುಂಬಗಳಿಗೆ 8.5 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತಿತ್ತು. ನಮ್ಮ ಸರ್ಕಾರ ಇದನ್ನು 8.5 ಲಕ್ಷದಿಂದ 20 […]

ತ್ಯಾಜ್ಯ ವಿಲೇವಾರಿ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಹೊಸ ಪ್ರಯೋಗಕ್ಕೆ ಚಿಂತನೆ ನಡೆಸಲಾಗಿದೆ : ರಾಜೆಂದ್ರಕುಮಾರ್

Friday, December 8th, 2017
puttur

ಪುತ್ತೂರು: ತ್ಯಾಜ್ಯ ವಿಲೇವಾರಿ ದೊಡ್ಡ ಸಮಸ್ಯೆಯಾಗಿದ್ದು, ಈ ನಿಟ್ಟಿನಲ್ಲಿ ಕಸವನ್ನು ಮರುಬಳಕೆ ಮಾಡಿ ಅದರಿಂದ ಸಾವಯವ ಗೊಬ್ಬರ ಸೇರಿದಂತೆ ಮರಬಳಕೆ ಮಾಡುವ ಹೊಸದೊಂದು ಪ್ರಯೋಗಕ್ಕೆ ಸಹಕಾರಿ ಸಂಘ ಚಿಂತನೆ ನಡೆಸಿದ್ದು, ಇದಕ್ಕಾಗಿ ಸರ್ಕಾರದ ಜೊತೆ ಒಡಂಬಡಿಕೆ ಮಾಡಿಕೊಳ್ಳಲಾಗುವುದು ಎಂದು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೆಂದ್ರಕುಮಾರ್ ಅವರು ಹೇಳಿದರು. ತಾಲ್ಲೂಕಿನ ನರಿಮೊಗರು ಕೃಷಿಪತ್ತಿನ ಸಹಕಾರ ಸಂಘದ ನೂತನ ಕಟ್ಟಡವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ […]