ಕುಕ್ಕೇ ಶ್ರೀ ಸುಬ್ರಹ್ಮಣ್ಯದಲ್ಲಿ ಸೇವೆ ಸಲ್ಲಿಸುವವರು ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ನೀಡಬೇಕು

Monday, July 26th, 2021
Kukke Subrahmanya

ಮಂಗಳೂರು: ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಗುರುವಾರದಿಂದ ‘ಸರ್ಪ ಸಂಸ್ಕಾರ,’ ‘ಆಶ್ಲೇಷ ಬಲಿ,’ ನಾಗಪ್ರತಿಷ್ಠೆ ’ಮತ್ತು‘ ಮಹಾಭಿಷೇಕ ’ಮುಂತಾದ ಪ್ರಮುಖ‘ ಸೇವೆ’ಗಳನ್ನು ಪ್ರಾರಂಭಿಸಲಿದೆ. ಸರ್ಪ ಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠ ಮತ್ತು ಮಹಾಭಿಷೇಕವನ್ನು ಕಾಯ್ದಿರಿಸುವವರು ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು (ಕನಿಷ್ಠ ಒಂದು ಡೋಸ್) ಅಥವಾ ಆರ್ ಟಿ -ಪಿಸಿಆರ್ ನೆಗೆಟಿವ್ ವರದಿಯನ್ನು ನೀಡಬೇಕಾಗುತ್ತದೆ. ಸರ್ಪ ಸಂಸ್ಕಾರ ವಿಧಿಗಳನ್ನು ತಲಾ 90 ಭಕ್ತರಿಗೆ ಎರಡು ಬ್ಯಾಚ್‌ಗಳಲ್ಲಿ ಬೆಳಿಗ್ಗೆ 8 ಮತ್ತು ಬೆಳಿಗ್ಗೆ 10 ಗಂಟೆಗೆ ನಡೆಸಲಾಗುವುದು. ಏತನ್ಮಧ್ಯೆ, ಆಶ್ಲೇಷ ಬಲಿಯನ್ನು […]

ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸರ್ಪ ಸಂಸ್ಕಾರ ಅರ್ಚಕ ನೇಣಿಗೆ ಶರಣು

Thursday, October 8th, 2020
sarpa samskaara

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸರ್ಪ ಸಂಸ್ಕಾರ ಕೆಲಸ ನಿರ್ವಹಿಸುತ್ತಿದ್ದ ಅರ್ಚಕರೊಬ್ಬರು ತಾನು ವಾಸವಿದ್ದ ಬಾಡಿಗೆ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ  ಗುರುವಾರ ಸಂಜೆ ವರದಿಯಾಗಿದೆ. ಉಪ್ಪಿನಂಗಡಿ ನಾಳ ನಿವಾಸಿಯಾದ ಕೃಷ್ಣ ಮಯ್ಯ ಭಟ್ (55) ಕಳೆದ ಐದು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಸರ್ಪಸಂಸ್ಕಾರ ಕ್ರಿಯಾಕರ್ತನಾಗಿ ಕೆಲಸ ನಿರ್ವಹಿಸುತ್ತಿದ್ದರು. ಗುರುವಾರ ತಾನು ವಾಸವಿದ್ದ ಬಾಡಿಗೆ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಕುಕ್ಕೆ ಸುಬ್ರಹ್ಮಣ್ಯ ಪೊಲೀಸರು […]

ಸೋಮವಾರದಿಂದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಸೇವೆಗಳು ಆರಂಭ

Sunday, September 13th, 2020
sarpasamskara

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಸ್ಥಗಿತಗೊಂಡಿದ್ದ ವಿವಿಧ ಸೇವೆಗಳು ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ಎಲ್ಲಾ ಸೇವೆಗಳು  ಸೋಮವಾರದಿಂದ ಆರಂಭವಾಗಲಿದೆ. ಕೊರೊನಾ ಹಿನ್ನೆಲೆಯಲ್ಲಿ ಕೆಲವೊಂದು ಷರತ್ತುಗಳನ್ನು ಪೂಜಾ ವಿಧಿ ವಿಧಾನಗಳಿಗೆ ಸಂಬಂಧಿಸಿದಂತೆ ಅನ್ವಯ ಮಾಡಲಾಗುತ್ತದೆ ಎಂದು ದೇವಾಲಯದ ಆಡಳಿತಾಧಿಕಾರಿ ತಿಳಿಸಿದ್ದಾರೆ. ದೇಗುಲವು ಬೆಳಗ್ಗೆ 6.30 ರಿಂದ ಮಧ್ಯಾಹ್ನ 1.30ರವರೆಗೆ ಮತ್ತು 3.30 ರಿಂದ ರಾತ್ರಿ 8ಗಂಟೆಯವರೆಗೆ ಮಾತ್ರ ತೆರೆದಿರುತ್ತದೆ. ಪ್ರತಿದಿನ ಮೂವತ್ತು ಭಕ್ತರಿಗೆ ಮಾತ್ರ ಸರ್ಪ ಸಂಸ್ಕಾರ, ಆಶ್ಲೇಷ ಬಲಿ ನಡೆಸಲು ಅವಕಾಶ ನೀಡಲಾಗುತ್ತಿದೆ. ಸೇವಾರ್ಥಿಗಳಿಗೆ ಮಾತ್ರ ಭೋಜನ […]

ಕುಕ್ಕೆ ಸುಬ್ರಹ್ಮಣ್ಯ : 237 ಸರ್ಪ ಸಂಸ್ಕಾರ ಕ್ರಿಯಾಕರ್ತರಿಗೆ ತಲಾ 5,000 ರೂ. ಮೌಲ್ಯದ ಚೆಕ್ ವಿತರಣೆ

Saturday, May 16th, 2020
Angara MLA

ಸುಳ್ಯ: ಕುಕ್ಕೆಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ನಿತ್ಯ ನಡೆಯುತ್ತಿದ್ದ ಸರ್ಪ ಸಂಸ್ಕಾರ ಪೂಜೆ ಕೋವಿಡ್-19 ಲಾಕ್ಡೌನ್ನಿಂದಾಗಿ ಸ್ಥಗಿತಗೊಂಡಿತ್ತು.  ಇದರಿಂದಾಗಿ ಕಷ್ಟಕ್ಕೆ ಸಿಲುಕಿರುವ ಕ್ರಿಯಾಕರ್ತರಿಗೆ ಗೌರವ ಧನವನ್ನು ಶಾಸಕ ಎಸ್. ಅಂಗಾರ ಅವರು ಶನಿವಾರ ವಿತರಿಸಿದರು. ಒಟ್ಟು 237 ಮಂದಿ ಸರ್ಪ ಸಂಸ್ಕಾರ ಕ್ರಿಯಾಕರ್ತರಿಗೆ ತಲಾ 5,000 ರೂ. ಮೌಲ್ಯದ ಚೆಕ್ ನೀಡಿದರು. ಕ್ರಿಯಾಕರ್ತರ ಪರವಾಗಿ ದೇವಸ್ಥಾನದ ವತಿಯಿಂದ ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಧನ ಸಹಾಯಕ್ಕೆ ಮನವಿ ಸಲ್ಲಿಸಲಾಗಿತ್ತು. ಧನ ಸಹಾಯ ವಿತರಿಸಿದ ಶಾಸಕ ಎಸ್.ಅಂಗಾರ ಕ್ರಿಯಾಕರ್ತರ […]

ಪೇಜಾವರ ಶ್ರೀಗಳು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ, ಜೂನ್ 10 ಕ್ಕೆ ಮತ್ತೆ ಸಭೆ

Saturday, June 8th, 2019
Kukke-Math

ಮಂಗಳೂರು : ಪೇಜಾವರ ಶ್ರೀಗಳು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಜೂನ್ 7ರ ಸಂಜೆ ಭೇಟಿ ನೀಡಿ ಎರಡೂ ಕಡೆಯಿಂದ ಅಭಿಪ್ರಾಯ ಸಂಗ್ರಹಿಸಿದರೂ ಮತ್ತೆ ಭಿನ್ನಾಭಿಪ್ರಾಯ ಉಂಟಾಗಿದೆ. ಹಾಗಾಗಿ ಜೂನ್ 10ರ ಒಳಗೆ ಮತ್ತೊಮ್ಮೆ ಸಭೆ ಕರೆಯಲು ಸ್ವಾಮೀಜಿ ನಿರ್ಧರಿಸಿದ್ದಾರೆ. ದಕ್ಷಿಣ ಭಾರತದ ಪವಿತ್ರ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಠ ಮತ್ತು ದೇವಸ್ಥಾನದ ನಡುವಿನ ತಿಕ್ಕಾಟ ಮುಂದುವರಿದಿದೆ. ಸರ್ಪ ಸಂಸ್ಕಾರ ವಿಚಾರದಲ್ಲಿ ಹಲವಾರು ವರ್ಷಗಳ ಕಾಲದ ಸಂಘರ್ಷಕ್ಕೆ ಮಂಗಳ ಹಾಡಲು ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ ಹಿರಿಯ ಯತಿ ಪೇಜಾವರ […]