ಮುಂದೆ ನೀವು ಆತ್ಮಹತ್ಯೆಯನ್ನೂ ಮಾಡಿಕೊಳ್ಳಬೇಕಾದೀತು : ಶಾಸಕ ಸುನೀಲ್ ಕುಮಾರ್

Tuesday, September 10th, 2019
sunil Kumar

ಉಡುಪಿ : “ನೀವು ಇಂದು ನರೇಂದ್ರ ಮೋದಿಯವರ ನಿಲುವನ್ನು ವಿರೋಧಿಸಿ ರಾಜೀನಾಮೆ ನೀಡಿದ್ದೀರಿ. ಮುಂದೆ ನೀವು ಆತ್ಮಹತ್ಯೆಯನ್ನೂ ಮಾಡಿಕೊಳ್ಳಬೇಕಾದೀತು. ಅಂತಹ ನಿಲುವನ್ನು ಭಾರತ ಸರಕಾರ ತೆಗೆದುಕೊಳ್ಳುತ್ತದೆ” ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರು ದ.ಕ. ಜಿಲ್ಲಾಧಿಕಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಸಿಕಾಂತ್ ಸೆಂಥಿಲ್ ಅವರಿಗೆ  ಹೇಳಿದ್ದಾರೆ. ಮಂಗಳವಾರ  ಉಡುಪಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಜಗತ್ತು ಭಾರತದ ಆಡಳಿತವನ್ನು ಒಪ್ಪಿಕೊಳ್ಳುತ್ತಿರುವ ಸಂದರ್ಭದಲ್ಲಿ, ಯಾವುದೋ ಜಿಲ್ಲಾಧಿಕಾರಿ ಇದನ್ನು ವಿರೋಧಿಸಿ ರಾಜೀನಾಮೆಯನ್ನು ಕೊಡುತ್ತಾರೆ. ಭಾರತದ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವ ಕೆಲಸವನ್ನು ಮೋದಿ […]

ರಾಜೀನಾಮೆ ಹಿಂಪಡೆಯಲು ಸಸಿಕಾಂತ್ ಸೆಂಥಿಲ್ ತಟಸ್ಥ

Tuesday, September 10th, 2019
shasikanth senthil

ಮಂಗಳೂರು : ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿರುವ ಸಸಿಕಾಂತ್ ಸೆಂಥಿಲ್ ಅವರ ಮನವೊಲಿಕೆಗೆ ಹಲವು ಇಲಾಖೆಗಳ ಅಧಿಕಾರಿಗಳು ಹಾಗೂ ಹಿತೈಷಿಗಳು ಮೇಲಿಂದ ಮೇಲೆ ಪ್ರಯತ್ನ ಮಾಡುತ್ತಲೇ ಇದ್ದಾರೆ. ಭಾನುವಾರ ಸಸಿಕಾಂತ್ ಅವರ ನಿವಾಸಕ್ಕೆ ಭೇಟಿ ನೀಡಿದ ಹಲವರು ರಾಜೀನಾಮೆ ಹಿಂಪಡೆಯುವಂತೆ ಒತ್ತಾಯ ಹೇರಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯುವುದಿಲ್ಲ ಎಂದು ತಟಸ್ಥರಾಗಿದ್ದಾರೆ ಸೆಂಥಿಲ್. ತಾನು ನಂಬಿದ್ದ ಸಿದ್ಧಾಂತಗಳ ವಿರುದ್ಧವಾಗಿ ಕೆಲಸ ಮಾಡಲು ತನ್ನಿಂದ ಸಾಧ್ಯವಿಲ್ಲ. ಇದೇ ಕಾರಣಕ್ಕೆ ತಾನು ಈ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿರುವುದಾಗಿ ಸಸಿಕಾಂತ್ […]

ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿಂಧೂ ಬಿ. ರೂಪೇಶ್ ನೇಮಕ

Saturday, September 7th, 2019
sindhu-B

ಮಂಗಳೂರು : ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿಂಧೂ ಬಿ. ರೂಪೇಶ್ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ. ಈ ಹಿಂದಿನ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅವರನ್ನು ನೇಮಕ ಮಾಡಲಾಗಿದೆ. ಸಿಂಧೂ ರೂಪೇಶ್ ಉಡುಪಿ ಜಿಲ್ಲಾ ಪಂಚಾಯತ್ ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ತಕ್ಷಣದಿಂದಲೇ ಅವರನ್ನು ದ.ಕ. ಜಿಲ್ಲಾಧಿಕಾರಿಯಾಗಿ ಪದೊನ್ನತ್ತಿಗೊಳಿಸಿ ಸರಕಾರ ಆದೇಶ ನೀಡಿದೆ.    

ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ ನೀಡಿರುವ ವಿಚಾರ ಆಘಾತ : ಡಿ.ವೇದವ್ಯಾಸ್ ಕಾಮತ್

Friday, September 6th, 2019
vedhavyas

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ರಾಜೀನಾಮೆ ಕೊಟ್ಟಿರುವ ವಿಚಾರ ಆಘಾತ ತರಿಸಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ರಾಜೀನಾಮೆಯ ವಿಚಾರವಾಗಿ ಈಗಾಗಲೇ ನಾನು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರಲ್ಲಿ ಮಾತನಾಡಿದ್ದೇನೆ. ನಾನು ಕೂಡ ರಾಜೀನಾಮೆ ವಿಚಾರವಾಗಿ ಜಿಲ್ಲಾಧಿಕಾರಿಗಳ ಬಳಿ ಮಾತನಾಡಿ, ರಾಜೀನಾಮೆಯನ್ನು ಹಿಂಪಡೆಯಬೇಕು. ಒಂದು ವೇಳೆ ರಾಜೀನಾಮೆ ಹಿಂಪಡೆಯುವುದಾದರೆ ಜಿಲ್ಲಾಧಿಕಾರಿಯವರಿಗೆ ಮತ್ತೆ ಕಾರ್ಯ ನಿರ್ವಹಿಸಲು ಸರ್ಕಾರದ ವತಿಯಿಂದ […]

ಮಂಗಳೂರು : ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ

Friday, September 6th, 2019
sasikanth

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣಗಳಿಂದ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ತಮಿಳುನಾಡು ಮೂಲದವರಾದ ಸಸಿಕಾಂತ್ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ ಇಂಜಿನಿಯರ್ ಪದವೀಧರರು. ಈ ಹಿಂದೆ ರಾಯಚೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ದ.ಕ ಜಿಲ್ಲಾಧಿಕಾರಿಗೂ ಮುಂಚೆ ಇವರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದರು. ಅಕ್ಟೋಬರ್ 2017 ನಿಂದ ಸಸಿಕಾಂತ್ ಸೆಂಥಿಲ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾಗಿದ್ದರು. ಜಿಲ್ಲೆಯಲ್ಲಿ ಕಳೆದ ವರ್ಷದ […]

ಜಿಲ್ಲೆಯ ಸಂಸ್ಕೃತಿ, ಚರಿತ್ರೆ, ಪರಂಪರೆಯನ್ನು ಅರಿಯಲು ರಸ ಪ್ರೆಶ್ನೆ ಸಹಕಾರಿ: ಸಸಿಕಾಂತ್ ಸೆಂಥಿಲ್

Thursday, December 27th, 2018
sasikanth-senthil

ಮಂಗಳೂರು: ಕರಾವಳಿ ಉತ್ಸವದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ‘ಮಂಗಳೂರು ಕ್ವಿಜ್ ಲೀಗ್’ ಹಂತ-1 ಎಂಬ ಸ್ಪರ್ಧೆ ಇಂದು ನಗರದ ಪುರಭವನದಲ್ಲಿ ನಡೆಯಿತು. ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಡೆದ ಈ ಕ್ವಿಜ್ ಸ್ಪರ್ಧೆಯನ್ನು ಇಂದು ಹುಟ್ಟುಹಬ್ಬ ಆಚರಿಸಿಕೊಂಡ ಸರ್ಕಾರಿ ಬಿಎಡ್ ಕಾಲೇಜಿನ ವಿದ್ಯಾರ್ಥಿನಿ ಸುಶ್ಮಿತಾ ಉದ್ಘಾಟಿಸಿದರು. ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮಾತನಾಡಿ, ಜೆಲ್ಲೆಯಲ್ಲಿ ಪ್ರವಾಸೋದ್ಯಮವನ್ನು‌ ಅಭಿವೃದ್ಧಿಪಡಿಸಲು‌ ವಿವಿಧ ಯೋಜನೆಯನ್ನು ಕೈಗೊಂಡಿದ್ದು, ಇದರಲ್ಲಿ ಇಂದು ಆಯೋಜನೆಗೊಂಡಿರುವ ಕ್ವಿಜ್ ಕಾರ್ಯಕ್ರಮವೂ […]

ರಸ್ತೆಸಾರಿಗೆ ಸಮಸ್ಯೆ ದಾಖಲಿಸಲು ನೂತನ ಆ್ಯಪ್​ ಅಭಿವೃದ್ಧಿ: ಸಸಿಕಾಂತ್ ಸೆಂಥಿಲ್

Thursday, December 20th, 2018
sesikanth-senthil

ಮಂಗಳೂರು: ರಸ್ತೆ ಸಾರಿಗೆ ಸಮಸ್ಯೆಗಳನ್ನು ದಾಖಲಿಸಲು ಸಾರ್ವಜನಿಕರ ಬಳಕೆಗಾಗಿ ದ.ಕ. ಜಿಲ್ಲಾಡಳಿತದ ವತಿಯಿಂದ ನೂತನ ಆ್ಯಪ್ನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ದ‌.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಸ್ತೆ, ಸಾರಿಗೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ರಸ್ತೆ ಸಾರಿಗೆ ಇಲಾಖೆಯ ದೂರುಗಳನ್ನು ದಾಖಲಿಸಲು ಮತ್ತು ಮಾಹಿತಿ ವಿನಿಮಯಕ್ಕಾಗಿ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಚಿಂತನೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಸಾರ್ವಜನಿಕರು ಬಳಸಬಹುದಾದ ಆ್ಯಪ್ಅನ್ನು ಮುಂದಿನ ನಾಲ್ಕು ತಿಂಗಳ ಒಳಗಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮಾಹಿತಿ ನೀಡಿದರು. ದ.ಕ. […]

ಸುರತ್ಕಲ್ ಟೋಲ್ ಗೇಟ್ ವಿರುದ್ಧ ಧರಣಿ: ತುರ್ತು ಸಭೆ ನಡೆಸಿದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್

Tuesday, October 30th, 2018
sesikanth-senthil

ಮಂಗಳೂರು: ಸುರತ್ಕಲ್ ಟೋಲ್ಗೇಟ್ ಮುಚ್ಚಬೇಕು ಅಥವಾ ಹೆಜಮಾಡಿ ಟೋಲ್ ಗೇಟ್ ನೊಂದಿಗೆ ವಿಲೀನ ಗೊಳಿಸಬೇಕು ಹಾಗೂ ಟೋಲ್ಗೇಟ್ ಗುತ್ತಿಗೆ ನವೀಕರಣದ ವಿರುದ್ಧ ಏಳು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಟೋಲ್ಗೇಟ್ ವಿರೋಧಿ ಸಮಿತಿಯ ಸದಸ್ಯರೊಂದಿಗೆ ಸೋಮವಾರ ತುರ್ತು ಸಭೆ ನಡೆಸಿ ಸಮಸ್ಯೆಯನ್ನು ಆಲಿಸಿದರು. ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಯೊಬ್ಬರು ಉಪಸ್ಥಿತರಿದ್ದರು. ರಾಜ್ಯದ ಅಪರ ಕಾರ್ಯದರ್ಶಿಗಳ ಸಭೆಯಲ್ಲಿ ಟೋಲ್ಗೇಟ್ ವಿಲೀನಗೊಳಿಸುವ ಮಾತುಕತೆ ನಡೆದಿರುವುದನ್ನು ಒಪ್ಪಿಕೊಂಡರು. ಆದರೆ ಕೇಂದ್ರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ […]

ಶಿರಾಡಿ ಘಾಟ್​ನಲ್ಲಿ ವಾಹನಗಳಿಗೆ ಸಂಚರಿಸಲು ಬುಧವಾರದಿಂದ ಅನುಮತಿ: ಸಸಿಕಾಂತ್ ಸೆಂಥಿಲ್

Monday, October 1st, 2018
sesikanth-senthil

ಮಂಗಳೂರು: ಬಸ್ಗಳು ಸೇರಿದಂತೆ ಪ್ರಯಾಣಿಕರ ವಾಹನಗಳಿಗೆ ಶಿರಾಡಿ ಘಾಟ್ನಲ್ಲಿ ಸಂಚರಿಸಲು ಬುಧವಾರದಿಂದ ಅನುಮತಿ ನೀಡಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿರಾಡಿಘಾಟ್ನಲ್ಲಿ ಗುಡ್ಡ ಕುಸಿದ ಬಳಿಕ ವಾಹನ ಸಂಚಾರ ನಿಷೇಧಿಸಲಾಗಿದ್ದು ಬುಧವಾರದಿಂದ ಪ್ರಯಾಣಿಕ ವಾಹನಗಳಿಗೆ ಸಂಚರಿಸಲು ಅನುವು ಮಾಡಲಾಗುತ್ತದೆ. ಎಲ್ಲಾ ರೀತಿಯ ಬಸ್ಗಳ ಪ್ರಯಾಣಕ್ಕೂ ಅನುಮತಿ ನೀಡಲಾಗುವುದು. ಆದರೆ ಸರಕುಗಳನ್ನು ಸಾಗಿಸುವ ವಾಹನಗಳಿಗೆ ಅನುಮತಿ ಇಲ್ಲ. ಮುಂದಿನ ವಾರದಲ್ಲಿ ಪರಿಶೀಲನೆ ಮಾಡಿದ ಬಳಿಕ ಮತ್ತೆ ನಿರ್ಧರಿಸಲಾಗುವುದು ಎಂದು ಅವರು […]

ದಕ್ಷಿಣ ಕನ್ನಡದಲ್ಲಿ ಅತಿವೃಷ್ಟಿ ನಷ್ಟ ಸಮೀಕ್ಷೆ ನಡೆಸಿದ ಕೇಂದ್ರ ತಂಡ

Friday, September 14th, 2018
mangaluru-2

ಮಂಗಳೂರು: ರಾಜ್ಯದ ಅತಿವೃಷ್ಟಿ ಪೀಡಿತ ಪ್ರದೇಶಗಳ ಹಾನಿಯ ಪರಿಶೀಲಿಸಿ ವರದಿ ನೀಡಲು ಕೇಂದ್ರ ಸರಕಾರದ ಹಿರಿಯ ಅಧಿಕಾರಿಗಳ ತಂಡ ಗುರುವಾರ ದಕ್ಷಿಣ ಜಿಲ್ಲೆಯ ಮಳೆ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕಿನಲ್ಲಿ ಅತಿವೃಷ್ಠಿಯಿಂದ ಹಾನಿಗೀಡಾದ ಪ್ರದೇಶಗಳಿಗೆ ತಂಡ ಭೇಟಿ ನೀಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ನೇತೃತ್ವದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ತಂಡಕ್ಕೆ ಮಾಹಿತಿ ನೀಡಿದರು. ಮೊದಲಿಗೆ ತಂಡವು ಮಂಗಳೂರು ನಗರಕ್ಕೆ ಕುಡಿಯುವ […]