ಕಜೆಕಾರು ಸಹಕಾರಿ ವ್ಯವಸಾಯಿಕ ಸಂಘದ ನೂತನ ಸಭಾಭವನ ಸೌಹಾರ್ಧ ಉದ್ಘಾಟಿಸಿದ ಡಾ.ಎಂ.ಎನ್.ರಾಜೇಂದ್ರ ಕುಮಾರ್

Saturday, November 16th, 2019
Rajendra-Prasad

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಡಗಕಜೆಕಾರು ಗ್ರಾಮದ ಪಾಂಡವರಕಲ್ಲು, ಕಜೆಕಾರು ಸಹಕಾರಿ ವ್ಯವಸಾಯಿಕ ಸಂಘದ ನೂತನ ಸಭಾಭವನ ಸೌಹಾರ್ಧ ಇದರ ಉದ್ಘಾಟನಾ ಕಾರ್ಯಕ್ರಮವನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ರವರು ನೆರವೇರಿಸಿದರು. ದೇಶದ ಆರ್ಥಿಕತೆಗೆ ಸಹಕಾರಿ ಕ್ಷೇತ್ರ ಶಕ್ತಿ ತುಂಬಿದೆ ಎಂದು ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ. ಅವರು ಕಜೆಕಾರು ಸಹಕಾರಿ ವ್ಯವಸಾಯಿಕ ಸಂಘಕ್ಕೆ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಸಭಾಭವನ ಸೌಹಾರ್ಧ ಇದರ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮೀಣ […]

ಕರ್ನಾಟಕ ಬಂದ್ ಗೆ ಕರೆ ಕೊಟ್ಟ ಬಿಎಸ್ವೈ ವಿರುದ್ಧ ಡಿಜಿಪಿಗೆ ದೂರು

Saturday, May 26th, 2018
yedyurappa-pr

ಬೆಂಗಳೂರು: ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದ ಬಿಜೆಪಿಯ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಡಿಜಿಪಿಗೆ ದೂರು ನೀಡಲಾಗಿದೆ. ಎಚ್.ಡಿ ಕುಮಾರಸ್ವಾಮಿ ಅವರು ವಿಶ್ವಾಸ ಮತಯಾಚನೆ ಮಾಡುವ ವೇಳೆ ಯಡಿಯೂರಪ್ಪ ಭಾಷಣ ಮಾಡುತ್ತಿದ್ದರು. ಭಾಷಣದ ಕೊನೆಯಲ್ಲಿ ಕೋಪಗೊಂಡ ಅವರು ರೈತರ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್ ಗಳ ಸಾಲ ಮನ್ನಾ ಮಾಡದಿದ್ದರೆ ಕರ್ನಾಟಕ ಬಂದ್ ಮಾಡುವುದಾಗಿ ಕರೆ ಕೊಟ್ಟಿದ್ದರು. ಆದರೆ ಇಂದು ರೈತರೇ ಪ್ರತಿಭಟನೆ ಮಾಡುತ್ತಾರೆ ಎಂದು ಹೇಳಿದ್ದಾರೆ. ಈ ಸಂಬಂಧ ಯಡಿಯೂರಪ್ಪ ಬಂದ್ […]

ಚುನಾವಣೆಯಲ್ಲಿ ಅಕ್ರಮ ಹಣ ಹಂಚಿಕೆಗೆ ಕಡಿವಾಣ: ಬಿ.ಆರ್. ಬಾಲಕೃಷ್ಣನ್

Saturday, March 17th, 2018
t-r-suresh

ಮಂಗಳೂರು: ಗೋವಾ ರಾಜ್ಯಗಳಿಗೆ ಸಂಬಂಧಿಸಿದಂತೆ 2016ರಿಂದ ಆದಾಯ ತೆರಿಗೆ ಇಲಾಖೆಯ ಮೂಲಕ ನಡೆದ ಕಾರ್ಯಾಚರಣೆಯಲ್ಲಿ 500 ಕೋಟಿ ಬೇನಾಮಿ ಆಸ್ತಿ ಪತ್ತೆಯಾಗಿದೆ ಎಂದು ಕರ್ನಾಟಕ, ಗೋವಾ ರಾಜ್ಯದ ಆದಾಯ ತೆರಿಗೆ ಇಲಾಖೆಯ ಮಹಾ ನಿರ್ದೇಶಕ ಬಿ.ಆರ್. ಬಾಲಕೃಷ್ಣನ್ ತಿಳಿಸಿದ್ದಾರೆ. ಆದಾಯ ತೆರಿಗೆ ಹೆಚ್ಚುವರಿ ಆಯುಕ್ತರ ಕೇಂದ್ರೀಯ ವಿಭಾಗದ ನೂತನ ಕಚೇರಿಯನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಹಣ ಅಪ ನಗದೀಕರಣದ ಸಂದರ್ಭದಲ್ಲಿ ಹಲವರಿಗೆ ತೊಂದರೆಗಳಾಗಿವೆ. ಕೆಲವು ಸಹಕಾರಿ ಬ್ಯಾಂಕ್‌ಗಳಿಗೆ ಸಮಸ್ಯೆಯಾಗಿರಬಹುದು. ಹಲವು ಪ್ರಕರಣಗಳು ದಾಖಲಾಗಿವೆ. ಈ ಬಗ್ಗೆ […]

ರೈತರ ಸಹಕಾರಿ ಬ್ಯಾಂಕ್ ಗಳಲ್ಲಿನ 50 ಸಾವಿರ ಸಾಲ ಮನ್ನಾ : ಸಿಎಂ ಘೋಷಣೆ

Wednesday, June 21st, 2017
CM siddu

ಬೆಂಗಳೂರು: ಸಹಕಾರಿ ಬ್ಯಾಂಕ್ ಗಳಲ್ಲಿನ 50 ಸಾವಿರ ರೂ. ವರೆಗಿನ ರೈತರ ಸಾಲಮನ್ನಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಜೂನ್ 20 ರ ವರೆಗಿನ ಪ್ರತಿ ರೈತರ ಸಾಲ ಮನ್ನಾ ಮಾಡುವುದಾಗಿ ವಿಧಾನ ಸಭೆಯಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ. ಸಾಲಮನ್ನಾದಿಂದ 22,227,506 ರಾಜ್ಯದ ರೈತರಿಗೆ ಅನುಕೂಲವಾಗಲಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ 8,165 ಕೋಟಿ ರು ಹೊರೆಯಾಗಲಿದೆ. ರೈತರ ಸಾಲಮನ್ನಾ ಮಾಡುವಂತೆ ಬಿಜೆಪಿ ಹಲವು ದಿನಗಳಿಂದ ಪಟ್ಟು ಹಿಡಿದಿತ್ತು. ಸಾಲ ಮನ್ನಾ ಮಾಡದಿದ್ದರೇ ಬೃಹತ್ ಹೋರಾಟ ನಡೆಸುವುದಾಗಿ ಬಿಜೆಪಿ ಎಚ್ಚರಿಕೆ […]

ಅವ್ಯವಹಾರ ಸಾಬೀತು-ಸಹಕಾರಿ ಬ್ಯಾಂಕ್ ಕಾರ್ಯದರ್ಶಿ ಅಮಾನತು

Saturday, August 6th, 2016
Jagadeesh

ಕುಂಬಳೆ: ಕರ್ತವ್ಯ ವೇಳೆ ಅವ್ಯವಹಾರ ನಡೆಸಿದ ಹಿನ್ನೆಲೆಯಲ್ಲಿ ಕುಂಬಳೆ ಸೇವಾ ಸಹಕಾರಿ ಬ್ಯಾಂಕ್‌ನ ಕಾರ್ಯದರ್ಶಿಯಾಗಿದ್ದ ಪುತ್ತಿಗೆ ನಿವಾಸಿ ಜಗದೀಶ್ ರೈ. ಪಿ.ಎ ರನ್ನು ಸೇವೆಯಿಂದ ವಜಾ ಮಾಡ ಲಾಗಿದೆಯೆಂದು ಬ್ಯಾಂಕ್‌ನ ಅಧ್ಯಕ್ಷ ಕೆ. ಶಂಕರ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಗದೀಶ್ ರೈ ಅವ್ಯವಹಾರ ನಡೆಸಿ ಬ್ಯಾಂಕ್ ಹಾಗೂ ಗ್ರಾಹಕರಿಗೆ ವಂಚಿಸಿದ ಆರೋಪದಂತೆ ಅವರನ್ನು 2016 ಜನವರಿ 1ರಿಂದ 6 ತಿಂಗಳಿಗೆ ಅಮಾನತುಮಾಡಲಾಗಿತ್ತು. ಅವರ ಮೇಲಿನ ಆರೋಪಗಳು ಸಾಬೀತು ಗೊಂಡ ಹಿನ್ನೆಲೆಯಲ್ಲಿ ಅವರನ್ನು ಇದೀಗ 2016 ಜುಲೈ 22ರಿಂದ ಸೇವೆಯಿಂದ ವಜಾಮಾಡ ಲಾಗಿದೆ. […]