ಮಂಗಳೂರು : 2021ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಜುಲೈ 19 ಮತ್ತು 22 ರಂದು ಜಿಲ್ಲೆಯ 179 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 32,657 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪ್ರವೇಶ ಪತ್ರಗಳು ಆಯಾ ಶಾಲಾ ಲಾಗಿನ್‌ನಲ್ಲಿ ಲಭ್ಯವಿದ್ದು ಶಾಲಾ ಮುಖ್ಯಸ್ಥರ ಮೂಲಕ ವಿದ್ಯಾರ್ಥಿಗಳಿಗೆ ಈಗಾಗಲೇ ಪ್ರವೇಶಪತ್ರಗಳನ್ನು ವಿತರಿಸಲಾಗಿದೆ. ಯಾವುದಾದರೂ ವಿದ್ಯಾರ್ಥಿಗಳಿಗೆ ಜಿಲ್ಲೆಯ ಯಾವುದೇ ಪ್ರೌಢಶಾಲೆಗಳು ಪ್ರವೇಶಪತ್ರವನ್ನು ಸಕಾಲದಲ್ಲಿ ವಿತರಿಸದೇ ಇದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ದೂರವಾಣಿಯಲ್ಲಿ ಸಂಪರ್ಕಿಸಿ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಡಳಿತ ಉಪನಿರ್ದೇಶಕರ ಮೊ.ಸಂ: 9448999337, […]
ಬೆಳ್ತಂಗಡಿ : ಐದು ಜನ ಮಕ್ಕಳು ವೃದ್ಧೆ ತಾಯಿಯನ್ನು ರಸ್ತೆಯಲ್ಲೇ ಬಿಟ್ಟು ಹೋಗಿರುವ ಘಟನೆ ಬೆಳ್ತಂಗಡಿಯ ಕಳಿಯದ ನಾಳ ಎಂಬಲ್ಲಿ ನಡೆದಿದೆ. ಈ ವೃದ್ಧೆ ತಾಯಿಯ ಮಕ್ಕಳ ಪೈಕಿ ಒಬ್ಬರು ಆಶಾ ಕಾರ್ಯಕರ್ತೆಯಾಗಿದ್ದು, ಪುತ್ರನೊಬ್ಬ ಪೊಲೀಸ್ ಸಿಬ್ಬಂದಿಯಾಗಿ ಸೇವೆಯಲ್ಲಿದ್ದಾನೆ ಎಂದು ಹೇಳಲಾಗಿದೆ. ಒಬ್ಬ ಪುತ್ರ ಮಂಗಳೂರಿನಲ್ಲಿ ಪೊಲೀಸ್ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇನ್ನಿಬ್ಬರು ಪುತ್ರರು ಖಾಸಗಿಯಾಗಿ ಕೆಲಸ ಮಾಡುತ್ತಿದ್ದಾರೆ. ಪುತ್ರಿಯರಲ್ಲಿ ಒಬ್ಬರು ಗೃಹಿಣಿಯಾಗಿದ್ದು, ಮತ್ತೊಬ್ಬರು ಆಶಾ ಕಾರ್ಯಕರ್ತೆಯಾಗಿದ್ದಾರೆ. ಬೀದಿಯಲ್ಲಿದ್ದ ವೃದ್ದೆಯನ್ನು ಗಮನಿಸಿದ ಸಾರ್ವಜನಿಕರು ದ.ಕ. ಜಿಲ್ಲಾ ಸಹಾಯವಾಣಿಗೆ ಕರೆ […]
ಬೆಂಗಳೂರು : ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಮನವಿಯ ಮೇರೆಗೆ ಹೊರ ರಾಜ್ಯಗಳಲ್ಲಿ ಇರುವ ಕನ್ನಡಿಗರಿಗಾಗಿ ಸಹಾಯವಾಣಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ. ಪ್ರಪಂಚ ದಾದ್ಯಂತ ಮಾರಕ ಸೋಂಕುರೋಗ ಕೋವಿಡ್-19 ಹರಡಿರುವ ಹಿನ್ನಲೆಯಲ್ಲಿ ದೇಶವ್ಯಾಪಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಇದರಿಂದಾಗಿ ಕೆಲಸದ ನಿಮಿತ್ತ ಹೊರ ರಾಜ್ಯಗಳಿಗೆ ಹೋಗಿ ಸಿಲುಕಿರುವ ಕರ್ನಾಟಕ ಮೂಲದವರ ಸಮಸ್ಯೆಗಳನ್ನು ಆಲಿಸಲು ರಾಜ್ಯ ಸರ್ಕಾರ, ಕಾರ್ಮಿಕ ಇಲಾಖೆ ವತಿಯಿಂದ ಸಹಾಯವಾಣಿಯನ್ನು ಆರಂಭಿಸಲಾಗಿದ್ದು, ಇಂದಿನಿಂದ ಕಾರ್ಯಾರಂಭಗೊಳ್ಳಲಿದೆ. ಬೆಂಗಳೂರಿನ ಡೈರಿ ವೃತ್ತದಲ್ಲಿರುವ ಕಲ್ಯಾಣ ಸುರಕ್ಷಾ ಭವನದಲ್ಲಿ ಕಾರ್ಯನಿರ್ವಹಿಸುವ […]
ಮಂಗಳೂರು : ಮತದಾರರ ಪಟ್ಟಿಯಲ್ಲಿ ನೂತನವಾಗಿ ಹೆಸರು ಸೇರ್ಪಡೆಗೊಳಿಸಲು ಹಾಗು ಪ್ರತಿ ಚುನಾವಣಾ ಸಂದರ್ಭದಲ್ಲೂ ಮತದಾರ ಪಟ್ಟಿಯಲ್ಲಿ ಮತದಾರರ ಹೆಸರು ಬಿಟ್ಟು ಹೋಗಿರುವುದು, ಹಾಗು ಇನ್ನಿತರೇ ಹಲವಾರು ಸಮಸ್ಯೆಗಳು ಮತದಾನದ ವೇಳೆಯಲ್ಲಿ ಕಂಡುಬರುತ್ತಿದ್ದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಈ ರೀತಿಯ ಗೊಂದಲಗಳು ಮರುಕಳಿಸದಂತೆ ಮಾಡಲು ದ.ಕ. ಜಿಲ್ಲಾಡಳಿತವು ಜಿಲ್ಲೆಯ ಪಾಲಿಕೆ ಹಾಗೂ ಎಲ್ಲಾ ಪುರಸಭೆ, ನಗರಸಭೆ, ತಹಶೀಲ್ದಾರ್ ಕಚೇರಿ ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಹಾಯವಾಣಿ ಪ್ರಾರಂಭಿಸಲಾಗುತ್ತದೆ ಎಂದು ದ.ಕ. ಜಿಲ್ಲಾಧಿಕಾರಿ ಎನ್.ಪ್ರಕಾಶ್ ತಿಳಿಸಿದರು. ಬುಧವಾರ ಜಿಲ್ಲಾಧಿಕಾರಿ […]