ಸಾಂಸ್ಕೃತಿಕ ವೈವಿಧ್ಯತೆ ದೇಶದ ಪ್ರಜಾತಂತ್ರದ ಶಕ್ತಿ : ಸಚಿವ ಇ.ಚಂದ್ರಶೇಖರನ್

Tuesday, August 16th, 2016
E Chandrashekharan

ಕಾಸರಗೋಡು: ಸ್ವಾತಂತ್ರ್ಯ ಲಭಿಸಿದ ಬಳಿಕ ವಿವಿಧ ಕ್ಷೇತ್ರಗಳಲ್ಲಿ ವಿಶ್ವಕ್ಕೆ ಮಾದರಿಯಾಗಬಲ್ಲ ಸಾಧನೆಯನ್ನು ಸಾಧಿಸಿರುವ ಭಾರತ ಸಮಗ್ರ ಪ್ರಗತಿ ಸಾಧಿಸಲು ಒಗ್ಗಟ್ಟಿನ ಪ್ರಯತ್ನ ಅಗತ್ಯ. ಹಲವು ರಾಷ್ಟ್ರಗಳಲ್ಲಿ ಪ್ರಜಾತಂತ್ರ ವ್ಯವಸ್ಥೆ ನೆಲಕಚ್ಚುತ್ತಿರುವಾಗ ನಮ್ಮ ದೇಶದಲ್ಲಿ ಪ್ರಜಾತಂತ್ರ ಬಲಿಷ್ಠಗೊಳ್ಳುತ್ತಿದೆ. ದೇಶದಲ್ಲಿ ಹಾಸುಹೊಕ್ಕಾಗಿರುವ ಸಾಂಸ್ಕೃತಿಕ ವೈವಿದ್ಯತೆ ಪ್ರಜಾತಂತ್ರಕ್ಕೆ ಬಲ ನೀಡುತ್ತದೆ ಅಲ್ಲದೆ ದೇಶಕ್ಕೆ ಶಕ್ತಿ ತುಂಬುತ್ತಿದೆ ಎಂದು ಕಂದಾಯ ಸಚಿವ ಇ.ಚಂದ್ರಶೇಖರನ್ ಹೇಳಿದರು. ರಾಷ್ಟ್ರದ 70 ನೇ ಸ್ವಾತಂತ್ರ್ಯ ದಿನಾಚರಣೆಯಂಗವಾಗಿ ವಿದ್ಯಾನಗರದ ಮುನ್ಸಿಪಲ್ ಸ್ಟೇಡಿಯಂನಲ್ಲಿ ಸೋಮವಾರ ಬೆಳಿಗ್ಗೆ ಆಯೋಜಿಸಿದ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ […]