ಸಾಹಿತ್ಯ ರಚನೆಯಾದರೆ ಭಾಷೆಯೂ ಬೆಳೆದಂತೆ: ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ
Thursday, September 30th, 2021ಮಂಗಳೂರು: ಸಾಹಿತ್ಯ ಬೆಳೆದಂತೆ ಬಾಷೆಯೂ ಬೆಳೆಯುತ್ತದೆ. ಹೀಗಾಗಿ ಎಲ್ಲಾ ಪ್ರಾಕಾರಗಳಲ್ಲಿ ಸಾಹಿತ್ಯ ರಚನೆಯಾಗಬೇಕು, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ ಆಶಿಸಿದ್ದಾರೆ. ವಿ.ವಿ ಕಾಲೇಜಿನ ಡಾ.ಶಿವರಾಮ ಕಾರಂತ ಸಭಾ ಭವನದಲ್ಲಿ ಗುರುವಾರ, ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ ಮತ್ತು ನಂದಾದೀಪ ಪ್ರಕಾಶನ ಕನ್ಯಾನ ಜಂಟಿಯಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ʼಬೇಲಿʼ ಹಾಗೂ ʼಸಾಪೊದ ಕಣ್ಣ್ʼ ನಾಟಕ ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಮೂಲತಃ ಹವ್ಯಕ ಬಾಷೆಯವರಾದ ಲೇಖಕಿ ಅಕ್ಷತಾರಾಜ್ ಪೆರ್ಲ ಅವರ […]