ದೈಹಿಕ ಶಿಕ್ಷಣ ಪರಿವೀಕ್ಷಕರ ಮುಂಬಡ್ತಿ ಕುರಿತು ಶಿಕ್ಷಣ ಸಚಿವರಿಗೆ ಸಭಾಪತಿ ಪತ್ರ

Tuesday, May 25th, 2021
Basavaraj Horatti

ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆಯ ಗ್ರೂಪ್ ‘ಬಿ’ ದೈಹಿಕ ಶಿಕ್ಷಣ ಪರಿವೀಕ್ಷಕರ ತತ್ಸಮಾನ ವೃಂದದ ಹುದ್ದೆಗಳಿಗೆ ಬಡ್ತಿ ಕೊಡಲು ಕೇವಲ ಬೆಂಗಳೂರು ಮತ್ತು ಮೈಸೂರು ಪ್ರಾಧಿಕಾರವನ್ನಾಗಿ ಮಾಡಿ ಉಳಿದ ಬೆಳಗಾವಿ ಮತ್ತು ಕಲಬುರ್ಗಿ ವಿಭಾಗಗಳನ್ನು ಬಿಟ್ಟು ಬಡ್ತಿ ನೀಡುತ್ತಿರುವ ಕುರಿತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. 2008 ರಿಂದ 2016 ರವರೆಗೆ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರುಗಳಿಗೆ […]

ಶಾಲಾ ಫೀಸು ಕಟ್ಟಲು ಒತ್ತಡ ಹೇರಿದರೆ ನಿರ್ದಾಕ್ಷಿಣ್ಯ ಕ್ರಮ – ಡಿಡಿಪಿಐ ಎಚ್ಚರಿಕೆ

Friday, June 12th, 2020
school-fees

ಮಂಗಳೂರು : ಸರಕಾರ ಸುತ್ತೋಲೆಯಂತೆ, ಶಾಲಾ ಫೀಸು ಪಾವತಿಸಲು ಸಾಧ್ಯವಿಲ್ಲದ ಅಥವಾ ಪಾವತಿಸಲು ನಿರಾಕರಿಸುವ ಪೋಷಕರಿಂದ ಮುಂದಿನ ಆದೇಶದವರೆಗೆ ಯಾವುದೇ ಕಾರಣಕ್ಕೂ ಶುಲ್ಕ ವಸೂಲು ಮಾಡುವಂತಿಲ್ಲ. ಶಾಲೆಗಳು ಫೀಸು ಕಟ್ಟುವ ವಿಷಯದಲ್ಲಿ ವಿದ್ಯಾರ್ಥಿ ಪೋಷಕರಿಗೆ ಯಾವುದೇ ರೀತಿಯ ಒತ್ತಡ ಹೇರಬಾರದು. ಶುಲ್ಕವನ್ನು ಪಾವತಿಸದ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಹಾಕಿರುವ ಕುರಿತು ಯಾವುದೇ ದೂರುಗಳು ಬಂದಲ್ಲಿ ಅಂತಹ ಶಾಲೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಕ್ಷಣ ಹಕ್ಕು ಕಾಯಿದೆಯಡಿ ಶಿಸ್ತುಕ್ರಮ ಕೈಗೊಳ್ಳುವುದಾಗಿ ದ.ಕ. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಖಾಸಗೀ ಶಾಲೆಗಳಿಗೆ ಎಚ್ಚರಿಸಿದ್ದಾರೆ. […]

ಪರೀಕ್ಷೆ ಇಲ್ಲದೆ ಪಾಸ್‌ ಇಲ್ಲ : ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟನೆ

Wednesday, March 18th, 2020
exam

ಬೆಂಗಳೂರು : ಕೊರೊನಾ ವೈರಸ್‌ ಸೋಂಕು ಭೀತಿ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಆದರೆ 7 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೇ ಮುಂದಿನ ತರಗತಿಗಳಿಗೆ ಬಡ್ತಿ ನೀಡುವ ಪ್ರಸ್ತಾಪ ಸದ್ಯಕ್ಕಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಈ ಬಗ್ಗೆ ವಿವರಣೆ ನೀಡಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ಕೆ.ಜಿ. ಜಗದೀಶ್‌, ಈಗಾಗಲೇ 1 ರಿಂದ 6ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸಂಪೂರ್ಣವಾಗಿ ರಜೆ ಘೋಷಣೆ ಮಾಡಲಾಗಿದೆ. 7ರಿಂದ 9 ನೇ ತರಗತಿ […]

ರಜಾದಿನಗಳನ್ನು ಸಮದೂಗಿಸಲು ಶನಿವಾರ ಅಥವಾ ಭಾನುವಾರ ತರಗತಿಗಳು ನಡೆಯಲಿವೆ

Monday, August 19th, 2019
School

ಮಂಗಳೂರು : ಭಾರೀ ಮಳೆ, ಪ್ರವಾಹ ದಿಂದಾಗಿ ಶಾಲೆಗಳಿಗೆ ನೀಡಿದ್ದ ರಜೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಶನಿವಾರ ಅಥವಾ ರವಿವಾರ ತರಗತಿಗಳನ್ನು ನಡೆಸಲು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ವಿಪರೀತ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಡಳಿತ ಸರಣಿ ರಜೆ ನೀಡಿತ್ತು. ವಿದ್ಯಾರ್ಥಿ ಗಳಿಗೆ ಸತತ ಐದು ದಿನಗಳ ರಜೆ ದೊರಕಿತ್ತು. ಆದರೆ ಇದರಿಂದ ಪಠ್ಯ ಅಪೂರ್ಣಗೊಳ್ಳುವ ಸಾಧ್ಯತೆಯಿದ್ದು, ಪರಿಹಾರವಾಗಿ ಶನಿವಾರ ಮಧ್ಯಾಹ್ನದ ಅನಂತರ ಅಥವಾ ರವಿವಾರ ತರಗತಿ ನಡೆಸಲು ಸೂಚಿಸಲಾಗಿದೆ. ಕಳೆದ ಮಳೆಗಾಲದಲ್ಲೂ […]

ವಿದ್ಯಾರ್ಥಿಗಳು ಬಲಿಷ್ಟರಾದಾಗ ಮಾತ್ರ ರಾಷ್ಟ್ರ ಅಭಿವೃದ್ದಿಯಾಗಲು ಸಾಧ್ಯ- ಯು.ಟಿ.ಖಾದರ್

Sunday, November 22nd, 2015
Alvas sports

ಮೂಡಬಿದ್ರೆಃ ಇಂದಿನ ಯುವಕರು, ವಿದ್ಯಾರ್ಥಿಗಳು ಬಲಿಷ್ಟರಾದಾಗ ಮಾತ್ರ ರಾಷ್ಟ್ರ ಅಭಿವೃದ್ದಿಯಾಗಲು ಸಾಧ್ಯ. ಇಂದಿನ ವಿದ್ಯಾರ್ಥಿ ಸಮುದಾಯಕ್ಕೆ ವಿದ್ಯೆಯ ಜೊತೆಗೆ ಕ್ರೀಡೆ ಬಹು ಮುಖ್ಯ. ವಿದ್ಯಾರ್ಥಿಗಳ ಕ್ರೀಡಾ ಹಿತಸಕ್ತಿಯ ಮೇಲೆ ಕಾಳಾಜಿ ವಹಿಸಿ ಸರ್ಕಾರ ವಿವಿಧ ಯೋಜನೆಗಳನ್ನು ಕಲ್ಪಿಸುತ್ತಿದೆ.ವಿದ್ಯೆ,ಕ್ರೀಡೆಯ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಾಜಿ ವಹಿಸಬೇಕು ಎಂದು ಕರ್ನಾಟಕ ರಾಜ್ಯದ ಆರೊಗ್ಯ ಸಚಿವರಾದ ಯು.ಟಿ.ಖಾದರ್ ಹೇಳಿದರು. ಇಲ್ಲಿನ ಸ್ವರಾಜ ಮೈದಾನದಲ್ಲಿ ದ.ಕ ಜಿ.ಪಂ ಸಾರ್ವಜನಿಕ ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದೈಹಿಕ ಶಿಕ್ಷಣ ಶಿಕ್ಷಕರ […]

ವಿಶೇಷ ಮಕ್ಕಳಿಗೆ ವೈದ್ಯಕೀಯ ಮೌಲ್ಯಾಂಕನ ಶಿಬಿರ

Friday, July 17th, 2015
Seminar for special children

ಮಂಗಳೂರು : ದ.ಕ.ಜಿ.ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಮಂಗಳೂರು ಉತ್ತರ ವಲಯ ಮತ್ತು ಸ್ಕಂದ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಹಾಗೂ ರೋಟರಿ ಕ್ಲಬ್ ನಾರ್ತ್ ಗಾಂಧಿನಗರ ಇವರ ಸಹಯೋಗದಲ್ಲಿ ಸರ್ವ ಶಿಕ್ಷಣ ಅಭಿಯಾನದ ವತಿಯಿಂದ ಭಾನುವಾರ ರೋಟರಿ ಬಾಲಭವನ ಗಾಂಧಿನಗರ ಇಲ್ಲಿ ವಿಶೇಷ ಮಕ್ಕಳಿಗೆ ವೈದ್ಯಕೀಯ ಮೌಲ್ಯಾಂಕನ ಶಿಬಿರವನ್ನು ಏರ್ಪಡಿಸಲಾಯಿತು. ಈ ಶಿಬಿರದಲ್ಲಿ ಕಾರ್ಪೊರೇಟರ್ ಶ್ರೀಮತಿ ಜಯಂತಿ ಆಚಾರ್, ಶ್ರೀಮತಿ ರಾಜಲಕ್ಷ್ಮಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಂಗಳೂರು ಉತ್ತರವಲಯ, ಸಮನ್ವಯಾಧಿಕಾರಿಗಳಾದ […]

ನಗರದ ಪುರಭವನದಲ್ಲಿ ಗಾಂಧಿಜಯಂತಿ ಆಚರಣೆ

Wednesday, October 2nd, 2013
Gandhi Jayanthi

ಮಂಗಳೂರು : ಭಾರತ ಸೇವಾದಳ ದ.ಕ ಜಿಲ್ಲಾ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಬುಧವಾರ ನಗರದ ಪುರಭವನದಲ್ಲಿ ಗಾಂಧಿಜಯಂತಿಯನ್ನು ಆಚರಿಸಲಾಯಿತು. ಭಾರತ ಸೇವಾದಳದ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ ಮಾತನಾಡಿ ಗಾಂಧೀಜಿ ಅಹಿಂಸೆಯಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಗಾಂಧಿ ಕೇವಲ ಭಾರತದ ಪಿತಾಮಹ ಮಾತ್ರವಲ್ಲ, ಅವರು ವಿಶ್ವದ ಪಿತಾಮಹ ಎಂದೆನಿಸಿಕೊಂಡಿದ್ದಾರೆ ಎಂದು ತಿಳಿಸಿದರು. ಬ್ಯಾರಿಸ್ಟರ್ ಪದವಿಯನ್ನು ಪಡೆದ ಗಾಂಧೀ ಸ್ವಾತಂತ್ರ್ಯ ಹೋರಾಟದ ನೆಲೆಯಲ್ಲಿ ಯುವಕರಿಗೆ ಶಿಕ್ಷಣದ ಮಹತ್ವವನ್ನು ತಿಳಿಸಿದರು. ವೈಯಕ್ತಿಕ ಸಾಧನೆಯ ಜೊತೆಗೆ ನಮ್ಮ ನಾಡಿನ […]

ಮಕ್ಕಳಲ್ಲಿ ನೈತಿಕ ಮೌಲ್ಯ ಬೆಳೆಸುವ ಹೆಗ್ಗಡೆಯವರ ಶ್ರಮ ಅವರ್ಣನೀಯ : ಡಾ.ಬಿ.ಜಯಶ್ರೀ

Tuesday, February 19th, 2013
Shantivana

ಮಂಗಳೂರು : ಗ್ರಾಮೀಣ ಪ್ರದೇಶದ ಮಕ್ಕಳ ಜ್ಞಾನರ್ಜಾನೆಯಾಗಲು ಹಾಗೂ ಜೀವನದಲ್ಲಿ ನೈತಿಕ ಶಕ್ತಿಗಳನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಹೆಗ್ಗಡೆಯವರು ಲಕ್ಷಾಂತರ ಪುಸ್ತಕಗಳನ್ನು ಮುದ್ರಿಸಿ ಸಮಾಜದಲ್ಲಿ ಬಹುದೊಡ್ಡ ಕಾರ್ಯ ಮಾಡಿದ್ದಾರೆ. ಇದರ ಉಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ರಾಜ್ಯಸಭಾ ಸದಸ್ಯೆ ಡಾ.ಬಿ.ಜಯಶ್ರೀ ಹೇಳಿದರು. ಅವರು ಸೋಮವಾರ ಶಾಂತಿವನ ಟ್ರಸ್ಟ್‌ ಧರ್ಮಸ್ಥಳ, ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಧರ್ಮಸ್ಥಳ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಧರ್ಮಸ್ಥಳದ ಅಮೃತ ವರ್ಷಿಣಿ ಸಭಾ ಭವನದಲ್ಲಿ ನಡೆದ  ಅರುಣೋದಯ ಹಾಗೂ ಕಿರಣೋದಯ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ […]

ದೇಶಾಭಿಮಾನದ ಜೊತೆ ಸಂಸ್ಕಾರ ರೂಪಿಸುವ ಅಗತ್ಯವಿದೆ : ಡಿ. ಎಚ್‌. ಶಂಕರಮೂರ್ತಿ

Sunday, August 28th, 2011
Ramakrishna math/ಶೈಕ್ಷಣಿಕ ಸಮಾವೇಶ

ಮಂಗಳೂರು : ದ.ಕ ಜಿಲ್ಲಾ ಪಂಚಾಯತ್‌ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಮಕೃಷ್ಣ ಮಠದ ಸಹಭಾಗಿತ್ವದಲ್ಲಿ ಮಠದಲ್ಲಿ ಶನಿವಾರ ಆಯೋಜಿಸಿದ ‘ಗುಣಾತ್ಮಕ ಶಿಕ್ಷಣಕ್ಕಾಗಿ ಕ್ರೀಯಾಶೀಲ ಆಡಳಿತ’ ಪ್ರತಿಭಾ ಪುರಸ್ಕಾರ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರ ಶೈಕ್ಷಣಿಕ ಸಮಾವೇಶವನ್ನು ಕರ್ನಾಟಕ ವಿಧಾನಪರಿಷತ್‌ ಸಭಾಪತಿ ಡಿ. ಎಚ್‌. ಶಂಕರಮೂರ್ತಿ ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಅವರು ಮಕ್ಕಳಿಗೆ ಶಿಕ್ಷಣದೊಂದಿಗೆ ದೇಶಾಭಿಮಾನ ಮತ್ತು ಸಂಸ್ಕಾರ ರೂಪಿಸುವ ಅಗತ್ಯವಿದೆ, ಸ್ವಾತಂತ್ರ್ಯಪೂರ್ವದಲ್ಲಿ ಹಿರಿಯರು, ದೇಶಭಕ್ತರು ವ್ಯವಸ್ಥೆ ಬದಲಾವಣೆಗೆ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳಲು ಕರೆ ನೀಡಿದರು. ಇಂದು […]

ಖೋಟಾ ರಶೀದಿ ನೀಡಿ ರೂ.28 ಸಾವಿರ ಹಣ ವಸೂಲಿ: ಮುಖ್ಯ ಶಿಕ್ಷಕ ಕೆ.ಜಿ.ಲಕ್ಷ್ಮಣ ಶೆಟ್ಟಿ ಅಮಾನತು

Friday, July 8th, 2011
head master suspended

ಮಂಗಳೂರು: ಬೆಳ್ತಂಗಡಿ ತಾಲೂಕು ಬಂಗಾಡಿ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಕೆ.ಜಿ.ಲಕ್ಷ್ಮಣ ಶೆಟ್ಟಿ ಮತ್ತು ಅದೇ ಶಾಲೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾದ ಶ್ರೀ ಬಿ.ರಾಜು ಇವರು ಶಾಲೆಯಲ್ಲಿ ಸರಕಾರ ನಿಗಧಿಪಡಿಸಿರುವ ಶುಲ್ಕಗಿಂತ ಹೆಚ್ಚುವರಿಯಾಗಿ ಶುಲ್ಕ ರೂ.28,071 ಗಳನ್ನು ಖೋಟಾ ರಶೀದಿ ನೀಡಿ ವಸೂಲಿ ಮಾಡಿದ ಕಾರಣ ಇವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಬೆಳ್ತಂಗಡಿಗೆ ಭೇಟಿ ನೀಡಿದಾಗ, ಪತ್ರಕರ್ತರು ಮೌಖಿಕ ದೂರು ನೀಡಿದ ಮೇರೆಗೆ, ಜಿಲ್ಲಾಧಿಕಾರಿ   ಡಾ.ಎನ್.ಎಸ್.ಚೆನ್ನಪ್ಪ ಗೌಡ ಅವರು  ತನಿಖೆ ಕೈಗೊಳ್ಳುವಂತೆ, ಸಾರ್ವಜನಿಕ […]