ಸಮ್ಮಿಶ್ರ ಸರಕಾರ ಕೃಷಿಕರನ್ನು ಮರುಳು ಮಾಡಲು ಸಾಲ ಮನ್ನಾ ಎಂಬ ನಾಟಕ ವಾಡಿದೆ

Thursday, August 30th, 2018
Sahakara-bharati

ಮಂಗಳೂರು : ರಾಜ್ಯ ಸರಕಾರದ ಘೋಷಣೆ ಮಾಡಿರುವ ಕೃಷಿ ಸಾಲ ಮನ್ನಾ ನೀತಿ ಅಸಮರ್ಪಕ ಮತ್ತು ಅವೈಜ್ಞಾನಿಕವಾಗಿದೆ.  ರೈತರನ್ನು ಮತ್ತು ಸಹಕಾರಿಗಳನ್ನು ಗೊಂದಲಕ್ಕೆ ಈಡು ಮಾಡಿದೆ  ಎಂದು ಆರೋಪಿಸಿ ಸಹಕಾರ ಭಾರತಿಯು ಗುರುವಾರ ದ.ಕ. ಜಿಲ್ಲಾಧಿಕಾರಿಯ ಕಚೇರಿ ಎದುರು ಪ್ರತಿಭಟನೆ ನಡೆಸಿತು. ರಾಜ್ಯ ಮುಂಗಡ ಪತ್ರದಲ್ಲಿ ಘೋಷಣೆ ಮಾಡಿರುವ  ವಾಣಿಜ್ಯ ಬ್ಯಾಂಕುಗಳ ಕೃಷಿ ಸಾಲ ಇನ್ನು ಮನ್ನ ಗೊಂಡಿಲ್ಲ. ಸಾಲಮನ್ನಾಕ್ಕೆ ಸೂಕ್ತ ಮಾರ್ಗಸೂಚಿ ರಚಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ. ಸಹಕಾರ ಸಂಘಗಳ ಸಾಲ ಮನ್ನಾದ ಬಗ್ಗೆ ಅಧಿಸೂಚನೆ ಹೊರಡಿಸಿರುವ ಸರಕಾರವು […]

ಸಾಲ ಮನ್ನಾ ವಿಚಾರಕ್ಕೆ ಕಾಂಗ್ರೆಸ್ ಶಾಸಕರಿಂದಲೇ ವಿರೋಧ ವ್ಯಕ್ತ..!

Thursday, July 12th, 2018
kumarswamy

ಬೆಂಗಳೂರು: ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ಜೆಡಿಎಸ್ ಶಾಸಕಾಂಗ ಸಭೆ ನಡೆಯಿತು. ಅನ್ನಭಾಗ್ಯದ 2 ಕೆಜಿ ಅಕ್ಕಿ ಕಡಿತ ಮತ್ತು ಸಾಲ ಮನ್ನಾ ವಿಚಾರಕ್ಕೆ ಮೈತ್ರಿ ಪಕ್ಷ ಕಾಂಗ್ರೆಸ್ ಶಾಸಕರಿಂದಲೇ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಜೆಡಿಎಸ್ ಶಾಸಕರಿಂದ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಅನ್ನಭಾಗ್ಯದ ಅಕ್ಕಿ 7 ಕೆಜಿ ಏರಿಸುವ ಬಗ್ಗೆ ಅಭಿಪ್ರಾಯ ಪಡೆದುಕೊಂಡಿರುವ ಸಿಎಂ, ಅಲ್ಲದೆ ಸಾಲ ಮನ್ನಾ ವ್ಯಾಪ್ತಿ ವಿಸ್ತರಿಸುವ ಬಗ್ಗೆಯೂ ಶಾಸಕರಿಂದ ಅಭಿಪ್ರಾಯ ಪಡೆದಿದ್ದಾರೆ ಎನ್ನಲಾಗಿದೆ. […]

ಪ್ರತಿ ರೈತ ಕುಟುಂಬದ 2 ಲಕ್ಷ ರೂ. ವರೆಗಿನ ಸಾಲಮನ್ನಾ: ಎಚ್ ಡಿ ಕುಮಾರಸ್ವಾಮಿ

Thursday, July 5th, 2018
karnataka-budget

ಬೆಂಗಳೂರು: ಸಮ್ಮಿಶ್ರ ಸರಕಾರದ ಚೊಚ್ಚಲ ಬಜೆಟ್ ನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಧಾನಸಭೆಯಲ್ಲಿ ಇಂದು ಮಂಡಿಸಿದರು. * 2ಲಕ್ಷದ 13 ಸಾವಿರದ 734 ಕೋಟಿ ರೂ. ಬಜೆಟ್ *ಇಸ್ರೇಲ್ ಮಾದರಿ ಕೃಷಿಗೆ 150 ಕೋಟಿ ರೂ. ವಿನಿಯೋಗ. *ಪ್ರತಿ ರೈತ ಕುಟುಂಬದ 2 ಲಕ್ಷ ರೂ. ವರೆಗಿನ ಸಾಲ ಮನ್ನಾ. * ಸಾಲ ಮನ್ನಾ ಮಾಡಲು 34 ಸಾವಿರ ಕೋಟಿ ರೂ. ಮೀಸಲು * ಪೆಟ್ರೋಲ್ ಬೆಲೆ ಲೀಟರ್ ಗೆ 1.14 ರೂ., ಡೀಸೆಲ್ ಬೆಲೆ 1.12 ರೂ. ಹೆಚ್ಚಳ *ವಿದ್ಯುತ್ […]

ಸಾಲ ಮನ್ನಾ ಘೋಷಣೆಗೆ ನಾನು ಈಗಲೂ ಬದ್ಧ, ಹಿಂದೆ ಸರಿಯುವ ಮಾತೇ ಇಲ್ಲ: ಕುಮಾರಸ್ವಾಮಿ

Tuesday, June 19th, 2018
kumarswamy

ಬೆಂಗಳೂರು: ಸಾಲ ಮನ್ನಾ ಘೋಷಣೆಗೆ ನಾನು ಈಗಲೂ ಬದ್ಧ. ಸಾಲಮನ್ನಾದಿಂದ ಹಿಂದೆ ಸರಿಯುವ ಮಾತೇ ಇಲ್ಲ. ಈ ವಿಷಯದಲ್ಲಿ ನಾನು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ನನ್ನ ಪ್ರಯತ್ನ ಮಾಡಿದ್ದೇನೆ. ಆದ್ರೆ, ಅವರು ಮಾಡೇ ಬಿಡ್ತಾರೆ ಅಂತ ತಿಳಿದುಕೊಂಡಿಲ್ಲ ಎಂದು ಸಿಎಂ ಕುಮಾರಸ್ವಾಮಿ ಹೇಳಿದರು. ಪ್ರೆಸ್ ಕ್ಲಬ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಸಿಎಂ ಹೆಚ್‌ಡಿಕೆ ಸಂವಾದ ನಡೆಸಿದರು. ಈ ವೇಳೆ, ಮೊದಲ ವಾರದಲ್ಲಿ ಬಜೆಟ್ ಮಂಡಿಸುವ ಬಗ್ಗೆ ಸಿಎಂ ಸುಳಿವು ನೀಡಿದರು. ರಾಹುಲ್ ಗಾಂಧಿ ಅವರ ಸಲಹೆಗಳನ್ನ […]

ರಾಷ್ಟ್ರೀಕೃತ ಬ್ಯಾಂಕ್‌ಗಳು ಮತ್ತು ಸಹಕಾರಿ ಸಂಘಗಳಲ್ಲಿ ಇರುವ ರೈತರ ಎಲ್ಲಾ ಸಾಲಗಳನ್ನು ಮನ್ನಾ ಮಾಡಿ

Monday, July 3rd, 2017
Raita Sangha

ಮಂಗಳೂರು : ರಾಷ್ಟ್ರೀಕೃತ ಬ್ಯಾಂಕ್‌ಗಳು ಮತ್ತು ಸಹಕಾರಿ ಸಂಘಗಳಲ್ಲಿ ರೈತರು ಪಡೆದಿರುವ ಸಾಲಗಳನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ಸೋಮವಾರ ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ರವಿಕಿರಣ್ ಪುಣಚ ರಾಜ್ಯ ರೈತ ಸಂಘದ ಸತತ ಹೋರಾಟದ ಫಲವಾಗಿ ಸರಕಾರವು ರೈತರ ಬೆಲೆ ಸಾಲದಲ್ಲಿ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಿರುವುದು ಸ್ವಾಗತಾರ್ಹ. ಪ್ರಸ್ತುತ ಹಿಂಗಾರು ಮತ್ತು ಮುಂಗಾರು ಬೆಳೆಗಳಲ್ಲಿ ನಷ್ಟ ಸಂಭವಿಸಿದ್ದು, ರೈತರು […]

ರಾಜ್ಯ ಸರ್ಕಾರ ಹೆಚ್ಚಿನ ಪ್ರಮಾಣದಲ್ಲಿ ಸಾಲ ಮನ್ನಾ ಮಾಡಬೇಕಾಗಿತ್ತು : ಯಡಿಯೂರಪ್ಪ

Friday, June 23rd, 2017
Yedurappa

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಕೇಂದ್ರದಿಂದ ರಾಜ್ಯಕ್ಕೆ ಒಂದು ಲಕ್ಷದ 13ಸಾವಿರ ಕೋಟಿ ಅನುದಾನ ಬಂದಿದೆ. ರಾಜ್ಯ ಸರ್ಕಾರ ಮತ್ತೆ ಒಂದು ಲಕ್ಷ ಕೋಟಿ ಸಾಲ ಮಾಡಿದೆ. ಇಷ್ಟಿದ್ದರೂ ಕೂಡ ರೈತರ 50 ಸಾವಿರ ಮಾತ್ರ ಸಾಲ ಮನ್ನಾ ಮಾಡಲಾಗಿದೆ. ರಾಜ್ಯ ಸರ್ಕಾರ ಹೆಚ್ಚಿನ ಪ್ರಮಾಣದಲ್ಲಿ ಸಾಲ ಮನ್ನಾ ಮಾಡಬೇಕಾಗಿತ್ತು. ಆದರೂ ಬಿಜೆಪಿ ಮಾಡಿದ ಹೋರಾಟಕ್ಕೆ ಮಣಿದು ಸಾಲ ಮನ್ನಾ ಮಾಡಿದೆ. ಇದು ತಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದರು. […]